AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರನೇ ಮದುವೆ ಆಗಿದ್ದಕ್ಕೆ ಆಮಿರ್ ಖಾನ್​ಗೆ ಬಿಷ್ಣೋಯ್ ಗ್ಯಾಂಗ್ ಬೆದರಿಕೆ? ನಟನ ನಿವಾಸದ ಬಳಿ ಸುತ್ತಾಟ

ಬಾಲಿವುಡ್ ನಟ ಆಮಿರ್ ಖಾನ್ ಗೌರಿ ಸ್ಪ್ರಾಟ್ ಅವರನ್ನು ಮೂರನೇ ಮದುವೆಯಾದ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ ಎದುರಿಸುತ್ತಿದ್ದಾರೆ. 'ಲವ್ ಜಿಹಾದ್' ಆರೋಪ ಹೊರಿಸಿರುವ ಶಂಕಿತರು, ನಟನ ನಿವಾಸದ ಬಳಿ ವಾರಗಟ್ಟಲೆ ರೆಕಿ ನಡೆಸಿದ್ದಾರೆ. ಇತ್ತೀಚಿನ ಟೈಗರ್ ಶ್ರಾಫ್ ಶೂಟೌಟ್ ತನಿಖೆಯಲ್ಲಿ ಈ ಆಘಾತಕಾರಿ ವಿಷಯ ಬೆಳಕಿಗೆ ಬಂದಿದ್ದು, ಬಾಲಿವುಡ್‌ನಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.

ಮೂರನೇ ಮದುವೆ ಆಗಿದ್ದಕ್ಕೆ ಆಮಿರ್ ಖಾನ್​ಗೆ ಬಿಷ್ಣೋಯ್ ಗ್ಯಾಂಗ್ ಬೆದರಿಕೆ? ನಟನ ನಿವಾಸದ ಬಳಿ ಸುತ್ತಾಟ
ಗೌರಿ-ಆಮಿರ್
ರಾಜೇಶ್ ದುಗ್ಗುಮನೆ
|

Updated on: Oct 26, 2026 | 10:44 AM

Share

ಮುಖ್ಯಾಂಶಗಳು

  • ಮೂರನೇ ಮದುವೆ ತಂದಿಟ್ಟ ಸಂಕಷ್ಟ
  • ಆಮಿರ್ ಖಾನ್ ವಿರುದ್ಧ 'ಲವ್ ಜಿಹಾದ್' ಆರೋಪ
  • ನಟನ ಮನೆ ಬಳಿ ಸೈಲೆಂಟ್ ರೆಕಿ

ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮಿರ್ ಖಾನ್ ಅವರ ಜೀವನದಲ್ಲಿ ಹೊಸ ಸಂಚಲನ ಶುರುವಾಗಿದೆ. ಗೌರಿ ಸ್ಪ್ರಾಟ್ ಅವರೊಂದಿಗಿನ ಮೂರನೇ ಮದುವೆಯ ಬೆನ್ನಲ್ಲೇ ಅವರಿಗೆ ಹೊಸ ಸಂಕಷ್ಟ ಎದುರಾಗಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ ಕರೆಗಳು ಬಂದಿವೆ ಎನ್ನಲಾಗಿದೆ. ಈ ಘಟನೆಯು ಸಂಪೂರ್ಣ ಸಿನಿರಂಗದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದೆ.

ಅರ್ಜು ಬಿಷ್ಣೋಯ್ ಮತ್ತು ಟೈಸನ್ ಬಿಷ್ಣೋಯ್ ಹೆಸರಿನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಆಡಿಯೋ ಮೆಸೇಜ್ ಹರಿದಾಡುತ್ತಿದೆ. ಆಮಿರ್ ಖಾನ್ ‘ಲವ್ ಜಿಹಾದ್’ ಉತ್ತೇಜಿಸುತ್ತಿದ್ದಾರೆ ಎಂದು ಈ ಸಂದೇಶದಲ್ಲಿ ಆರೋಪಿಸಲಾಗಿದೆ. ಆದಾಗ್ಯೂ ಈ ಆಡಿಯೋ ಕರೆ ನಿಜವೋ ಅಥವಾ ಸುಳ್ಳೋ ಎಂಬುದು ಇನ್ನು ದೃಢಪಟ್ಟಿಲ್ಲ. ಸದ್ಯ ಈ ಸುದ್ದಿ ಸಂಚಲನ ಸೃಷ್ಟಿಸಿದೆ.

ಇದೀಗ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿಯೊಂದು ಹೊಸ ಆಘಾತಕಾರಿ ಸತ್ಯವನ್ನು ಹೊರಹಾಕಿದೆ. ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದ ಕೆಲ ವ್ಯಕ್ತಿಗಳು ಆಮಿರ್ ಮನೆ ಸುತ್ತಮುತ್ತ ಓಡಾಡಿದ್ದಾರೆ ಎನ್ನಲಾಗಿದೆ. ಹಲವು ವಾರಗಳ ಕಾಲ ನಟನ ನಿವಾಸದ ಸುತ್ತ ತೀವ್ರ ಕಣ್ಣಾವಲು ಇಡಲಾಗಿತ್ತು. ಈ ಸಂಗತಿಯು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಪೊಲೀಸ್ ಮೂಲಗಳ ಪ್ರಕಾರ ಶಂಕಿತರು ನಟನ ಚಲನವಲನಗಳ ಮೇಲೆ ನಿಗಾ ವಹಿಸಿದ್ದರು. ಆದರೆ ಕೊನೆಗೆ ಅವರು ತಮ್ಮ ಯೋಜನೆಯನ್ನು ಕೈಬಿಟ್ಟು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಇತ್ತೀಚೆಗೆ ನಟ ಟೈಗರ್ ಶ್ರಾಫ್ ಅವರ ನಿವಾಸದ ಬಳಿ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆ ವೇಳೆ ಈ ವಿಷಯ ಬಯಲಾಗಿದೆ. ತನಿಖೆ ವೇಳೆ ಹಲವು ಪ್ರಮುಖ ಸುಳಿವುಗಳು ಸಿಕ್ಕಿವೆ.

ಇದನ್ನೂ ಓದಿ: ಮಾಡಿದ ತಪ್ಪಿಗೆ ವೇದಿಕೆ ಮೇಲೆಯೇ ಕಣ್ಣೀರಿಟ್ಟ ಆಮಿರ್ ಖಾನ್; 60ನೇ ವಯಸ್ಸಿಗೆ ಜ್ಞಾನೋದಯ

ಈ ಹೊಸ ಬೆಳವಣಿಗೆಗಳು ಬಾಲಿವುಡ್ ನಟರ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ಮೂಡಿಸಿವೆ. ಸಿನಿಮಾ ತಾರೆಯರ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹ ಕೇಳಿಬರುತ್ತಿದೆ. ಆದರೆ ಆಮಿರ್ ಖಾನ್ ಅವರೇ ಶೂಟರ್‌ಗಳ ನೇರ ಗುರಿಯಾಗಿದ್ದರೆ ಎಂಬ ಬಗ್ಗೆ ಇನ್ನು ಯಾವುದೇ ಅಧಿಕೃತ ಸ್ಪಷ್ಟನೆ ಸಿಕ್ಕಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕುಮಾರಿ ವೇಸ್ಟ್​ ಪೀಸ್ ಎಂದ ಸೌಂದರ್ಯಾ ಶೆಟ್ಟಿ; ನಡೆಯಿತು ದೊಡ್ಡ ಜಗಳ
ಕುಮಾರಿ ವೇಸ್ಟ್​ ಪೀಸ್ ಎಂದ ಸೌಂದರ್ಯಾ ಶೆಟ್ಟಿ; ನಡೆಯಿತು ದೊಡ್ಡ ಜಗಳ
ಸೀಗೆ ಹುಣ್ಣಿಮೆ: ಕೊಪ್ಪಳ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಮಹಾಪೂರ, ಜನಸಾಗರ
ಸೀಗೆ ಹುಣ್ಣಿಮೆ: ಕೊಪ್ಪಳ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಮಹಾಪೂರ, ಜನಸಾಗರ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ
‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ
ವಾರಾಣಸಿಯ ನಮೋ ಘಾಟ್‌ನಲ್ಲಿ ಪ್ರಧಾನಿ ಮೋದಿಯ ಮನಸೆಳೆದ ಏರ್ ಶೋ
ವಾರಾಣಸಿಯ ನಮೋ ಘಾಟ್‌ನಲ್ಲಿ ಪ್ರಧಾನಿ ಮೋದಿಯ ಮನಸೆಳೆದ ಏರ್ ಶೋ
ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ
ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ