ಸುಳ್ಳು ಹೇಳಿ ಸಿಕ್ಕಿಬಿದ್ದ ಆಮಿರ್ ಖಾನ್; ಟ್ರೋಲ್ ಆದ ಬಾಲಿವುಡ್ ನಟ
ಪರ್ಫೆಕ್ಷನಿಸ್ಟ್ ಆಮಿರ್ ಖಾನ್ 'ಸಿತಾರೆ ಜಮೀನ್ ಪರ್' ಚಿತ್ರದ OTT ಬಿಡುಗಡೆ ಬಗ್ಗೆ ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದಾರೆ. ಈ ಹಿಂದೆ, ಚಿತ್ರವನ್ನು ಕೇವಲ ಯೂಟ್ಯೂಬ್ನಲ್ಲಿ 100 ಕ್ಕೆ ಬಿಡುಗಡೆ ಮಾಡಿ, OTT ಗೆ ಮಾರಿಲ್ಲ ಎಂದಿದ್ದರು. ಆದರೆ, ಈಗ ಸಿನಿಮಾ ಸೋನಿ ಲಿವ್ನಲ್ಲಿ ಬಿಡುಗಡೆಯಾಗಲಿರುವುದರಿಂದ, ಅವರನ್ನು ಪ್ರೇಕ್ಷಕರಿಗೆ ಸುಳ್ಳು ಹೇಳಿದ ಆರೋಪದಡಿ ಟ್ರೋಲ್ ಮಾಡಲಾಗುತ್ತಿದೆ. ಆಮಿರ್ ನಡೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಬಾಲಿವುಡ್ ಆಮಿರ್ ಖಾನ್ (Aamir Khan) ಅವರು ಪರ್ಫೆಕ್ಷನಿಸ್ಟ್ ಎನಿಸಿಕೊಂಡಿದ್ದಾರೆ. ಅವರು ಪ್ರೇಕ್ಷಕರನ್ನು ಸಾಕಷ್ಟು ಗೌರವಿಸುತ್ತಾರೆ. ಈಗ ಅವರು ಸುಳ್ಳು ಹೇಳಿ ಸಿಕ್ಕಿ ಬಿದ್ದಿದ್ದಾರೆ. ‘ಸಿತಾರೆ ಜಮೀನ್ಪರ್’ ಸಿನಿಮಾ ಈ ಮೊದಲು ಥಿಯೇಟರ್ನಲ್ಲಿ ರಿಲೀಸ್ ಆಯಿತು. ಆ ಬಳಿಕ ಯೂಟ್ಯೂಬ್ನಲ್ಲಿ ರಿಲೀಸ್ ಆಯಿತು. ಈ ವೇಳೆ ಆಮಿರ್ ಖಾನ್ ಹೇಳಿದ ಸುಳ್ಳು ಈಗ ಹೊರ ಬಿದ್ದಿದೆ. ಅವರನ್ನು ಸಾಕಷ್ಟು ಟ್ರೋಲ್ ಮಾಡುತ್ತಾ ಇದ್ದಾರೆ.
ಆಮಿರ್ ಖಾನ್ ಅವರು ‘ಸಿತಾರೆ ಜಮೀನ್ ಪರ್’ ಸಿನಿಮಾವನ್ನು ಒಟಿಟಿಗೆ ಮಾರಾಟ ಮಾಡಲಿರಲಿಲ್ಲ. ಚಿತ್ರಮಂದಿರಗಳಲ್ಲಿ ಭಾರಿ ಹಿಟ್ ಆದ ಈ ಚಿತ್ರ ಯೂಟ್ಯೂಬ್ನಲ್ಲಿ ಬಿಡುಗಡೆ ಮಾಡಲಾಯಿತು. ಯೂಟ್ಯೂಬ್ನಲ್ಲಿ ಯಾರು ಬೇಕಾದರೂ ಕೇವಲ 100 ರೂಪಾಯಿ ನೀಡಿ ಸಿನಿಮಾ ನೋಡಬಹುದಿತ್ತು. ಒಮ್ಮೆ ಪಾವತಿಸಿದರೆ 48 ಗಂಟೆಗಳವರೆಗೆ ಈ ಚಿತ್ರ ನೋಡುವ ಅವಕಾಶ ಇತ್ತು. ಹೆಚ್ಚು ಜನರಿಗೆ ತಲುಪಬೇಕು ಎಂಬ ಕಾರಣಕ್ಕೆ ನಾವು ಈ ರೀತಿ ಮಾಡಿದ್ದೆವು ಎಂದು ಅವರು ಹೇಳಿದ್ದರು.
ಆ ಸಮಯದಲ್ಲಿ ಆಮಿರ್ ಖಾನ್ ಮಾತನಾಡಿದ್ದು ಕೇಳಿ, ಸಿನಿಮಾ ಒಟಿಟಿಗೆ ಬರೋದಿಲ್ಲ, ಅವರಿಗೆ ಜನರ ಬಗ್ಗೆ ಸಾಕಷ್ಟು ಪ್ರೀತಿ ಇದೆ ಎಂದೆಲ್ಲ ಜನರು ಅಂದುಕೊಂಡಿದ್ದರು. ಆದರೆ, ಇದು ಇದು ಸುಳ್ಳು ಎಂಬುದು ಈಗ ಗೊತ್ತಾಗಿದೆ. ಏಕೆಂದರೆ, ಸೋನಿ ಲಿವ್ ಅಲ್ಲಿ ಈ ಸಿನಿಮಾ ಪ್ರಸಾರ ಕಾಣಲಿದೆ. ದಿನಾಂಕ ಇನ್ನೂ ಫೈನಲ್ ಆಗಿಲ್ಲ.
ಇದನ್ನೂ ಓದಿ: ‘ಧುರಂದರ್’ ಗೆಲುವಿನ ಬಗ್ಗೆ ಆಮಿರ್ ಖಾನ್ಗೆ ಇಲ್ಲ ಪೂರ್ಣ ಸಂತೋಷ
ಸದ್ಯ ಆಮಿರ್ ಖಾನ್ ಅವರನ್ನು ಎಲ್ಲರೂ ಟ್ರೋಲ್ ಮಾಡುತ್ತಿದ್ದಾರೆ. ಅವರು ನಡೆದುಕೊಂಡ ರೀತಿ ಸರಿ ಅಲ್ಲ ಎಂದು ಅನೇಕರು ಹೇಳಿದ್ದಾರೆ. ದುಡ್ಡಿಗಾಗಿ ಅವರು ಸುಳ್ಳು ಹೇಳಿದ್ದಾರೆ ಎಂದೆಲ್ಲ ಅವರು ಆರೋಪಿಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.




