‘ಪುಷ್ಪ 2’ ಚಿತ್ರದ 10 ಸಾವಿರ ಟಿಕೆಟ್ ಗಿವ್​ಅವೇ ಕೊಟ್ಟ ಎಬಿ ಡಿವಿಲಿಯರ್ಸ್

ಎಬಿಡಿ ಅವರಿಗೆ ಭಾರತದ ಜೊತೆ ಒಳ್ಳೆಯ ನಂಟಿದೆ. ಇದಕ್ಕೆ ಕಾರಣ ಆಗಿರೋದು ಐಪಿಎಲ್. ಎಬಿಡಿ ಅವರು ಆರ್​ಸಿಬಿ ಪರ ಆಡಿದ್ದರು. ಅವರಿಗೆ ಕರ್ನಾಟಕ ಹಾಗೂ ಭಾರತದಲ್ಲಿ ಅಪಾರ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಅವರು 10 ಸಾವಿರ ‘ಪುಷ್ಪ 2’ ಟಿಕೆಟ್ ಗಿವ್ ಅವೇ ಮಾಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ತಂದಿದೆ.

‘ಪುಷ್ಪ 2’ ಚಿತ್ರದ 10 ಸಾವಿರ ಟಿಕೆಟ್ ಗಿವ್​ಅವೇ ಕೊಟ್ಟ ಎಬಿ ಡಿವಿಲಿಯರ್ಸ್
ಎಬಿಡಿ-ಪುಷ್ಪ 2
Follow us
ರಾಜೇಶ್ ದುಗ್ಗುಮನೆ
|

Updated on: Dec 03, 2024 | 12:05 PM

‘ಪುಷ್ಪ 2’ ಚಿತ್ರದ ಹೈಪ್ ಜೋರಾಗಿದೆ. ಈ ಸಿನಿಮಾಗೆ ವಿಶ್ವಾದ್ಯಂತ ಕ್ರೇಜ್ ಸೃಷ್ಟಿ ಆಗಿದೆ. ಡಿಸೆಂಬರ್ 5ರಂದು ಈ ಸಿನಿಮಾ ವಿಶ್ವ ಮಟ್ಟದಲ್ಲಿ ರಿಲೀಸ್ ಆಗಲಿದೆ. ಈ ಚಿತ್ರವನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ಈ ಚಿತ್ರಕ್ಕೆ ಅನೇಕ ಸೆಲೆಬ್ರಿಟಿಗಳು ಬೆಂಬಲ ಕೊಟ್ಟಿದ್ದಾರೆ. ಈ ಸಿನಿಮಾಗೆ ಆರ್​ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಅವರು ಟಿಕೆಟ್ ಗಿವ್​ಅವೇ ಮಾಡಿದ್ದಾರೆ. ಈ ಟ್ವೀಟ್ ವೈರಲ್ ಆಗಿದೆ.

ಎಬಿಡಿ ಅವರಿಗೆ ಭಾರತದ ಜೊತೆ ಒಳ್ಳೆಯ ನಂಟಿದೆ. ಇದಕ್ಕೆ ಕಾರಣ ಆಗಿರೋದು ಐಪಿಎಲ್. ಎಬಿಡಿ ಅವರು ಆರ್​ಸಿಬಿ ಪರ ಆಡಿದ್ದರು. ಅವರಿಗೆ ಕರ್ನಾಟಕ ಹಾಗೂ ಭಾರತದಲ್ಲಿ ಅಪಾರ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಅವರು 10 ಸಾವಿರ ‘ಪುಷ್ಪ 2’ ಟಿಕೆಟ್ ಗಿವ್ ಅವೇ ಮಾಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ತಂದಿದೆ.

ಬೆಟ್ಟಿಂಗ್ ಆ್ಯಪ್ ಒಂದರ ಪ್ರಮೋಷನ್​ಗೆ ಈ ಗಿವ್​ಅವೇನ ಮಾಡಿದ್ದಾರೆ ಎಬಿಡಿ. ಈ ಆ್ಯಪ್​ನಲ್ಲಿ 100 ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಹಣವನ್ನು ಡಿಪೋಸಿಟ್ ಮಾಡಬೇಕು. ಇದರಲ್ಲಿ 100 ರೂಪಾಯಿಗಿಂತ ಹೆಚ್ಚಿನ ಹಣ ಡಿಪೋಸಿಟ್ ಮಾಡಿದ ಮೊದಲ 10 ಸಾವಿರ ಮಂದಿಗೆ ‘ಪುಷ್ಪ 2’ ಟಿಕೆಟ್ ಕೊಡೋದಾಗಿ ಎಬಿಡಿ ಹೇಳಿದ್ದಾರೆ. ಶನಿವಾರ (ಡಿಸೆಂಬರ್ 7) ಈ ಕ್ಯಾಂಪೇನ್ ಪೂರ್ಣಗೊಳ್ಳಲಿದೆ.

ಎಬಿಡಿ ಕೂಡ ‘ಪುಷ್ಪ 2’ ಚಿತ್ರದ ಟಿಕೆಟ್ ಗಿವ್ ಅವೇ ನೀಡಿರೋದು ಅನೇಕರಿಗೆ ಖುಷಿ ಕೊಟ್ಟಿದೆ. ಅವರು ಪ್ರಮೋಟ್ ಮಾಡ್ತಿರೋದು ಬೆಟ್ಟಿಂಗ್ ಆ್ಯಪ್. ಈ ಕಾರಣಕ್ಕೆ ಕೆಲವರು ಈ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಇನ್ನೂ ಕೆಲವರು ‘ಪುಷ್ಪ 2’ ಚಿತ್ರದ ಪ್ರಮೋಷನ್ ಆಯ್ತು ಎಂದು ಸಂತಸ ಹೊರಹಾಕಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರಕ್ಕಾಗಿ ಮಗಳನ್ನೇ ದೂರ ಇಟ್ಟ ಅಲ್ಲು ಅರ್ಜುನ್

‘ಪುಷ್ಪ 2’ ಚಿತ್ರ ಡಿಸೆಂಬರ್ 5ರಂದು ರಿಲೀಸ್ ಆಗಲಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದರು. ಅಲ್ಲು ಅರ್ಜುನ್ ನಟನೆಯ ಈ ಚಿತ್ರಕ್ಕೆ, ಸುಕುಮಾರ್ ನಿರ್ದೇಶನ ಇದೆ. ಅಲ್ಲು ಅರ್ಜುನ್ ಜೊತೆ ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ನಟಿಸಿದ್ದಾರೆ. ಈ ಚಿತ್ರಕ್ಕೆ ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ