AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ಪ್ರಮಾಣವಚನ ನೋಡಲು ಬರಲಿಲ್ಲ ಪತ್ನಿ, ಮಕ್ಕಳು; ಮಿಂಚಿದ್ದು ಮಾತ್ರ ತ್ರಿಶಾ

ದಕ್ಷಿಣ ಭಾರತದ ಚಿತ್ರರಂಗದ ಸ್ಟಾರ್ ನಟ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಐತಿಹಾಸಿಕ ಕ್ಷಣದಲ್ಲಿ ವಿಜಯ್ ಅವರ ಪತ್ನಿ ಮತ್ತು ಮಕ್ಕಳ ಗೈರುಹಾಜರಿ ಬಗ್ಗೆ ಮಾತ್ರ ಸೋಷಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ಚರ್ಚೆ ಮಾಡುತ್ತಿದ್ದಾರೆ. ಆ ಕುರಿತ ವರದಿ ಇಲ್ಲಿದೆ..

ವಿಜಯ್ ಪ್ರಮಾಣವಚನ ನೋಡಲು ಬರಲಿಲ್ಲ ಪತ್ನಿ, ಮಕ್ಕಳು; ಮಿಂಚಿದ್ದು ಮಾತ್ರ ತ್ರಿಶಾ
Trisha Krishnan, Vijay Family
ಮದನ್​ ಕುಮಾರ್​
|

Updated on: May 10, 2026 | 3:10 PM

Share

ನಟ ದಳಪತಿ ವಿಜಯ್ (Vijay) ಅವರು ರಾಜಕಾರಣಿಯಾಗಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಭಾನುವಾರ (ಮೇ 10) ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅವರು ಅಧಿಕಾರ ಸ್ವೀಕರಿಸಿದರು. ಈ ಸಂಭ್ರಮದ ಕ್ಷಣದಲ್ಲಿ ವಿಜಯ್ ಅವರ ತಂದೆ ಎಸ್.ಎ. ಚಂದ್ರಶೇಖರ್ ಮತ್ತು ತಾಯಿ ಶೋಭಾ ಚಂದ್ರಶೇಖರ್ ಅವರು ಮುಂದಿನ ಸಾಲಿನಲ್ಲಿ ಕುಳಿತು ಮಗನ ಸಾಧನೆಯನ್ನು ಕಂಡು ಹೆಮ್ಮೆಪಟ್ಟರು. ಆಪ್ತ ಗೆಳತಿ ತ್ರಿಶಾ ಕೃಷ್ಣನ್ ಕೂಡ ಈ ಕ್ಷಣಕ್ಕೆ ಸಾಕ್ಷಿ ಆದರು. ಆದರೆ, ಇಡೀ ಸಮಾರಂಭದಲ್ಲಿ ವಿಜಯ್ ಪತ್ನಿ ಸಂಗೀತಾ (Vijay wife Sangeetha) ಮತ್ತು ಮಕ್ಕಳ ಅನುಪಸ್ಥಿತಿ ಎದ್ದು ಕಾಣುತ್ತಿತ್ತು.

ವಿಜಯ್ ಅವರ ಪತ್ನಿ ಸಂಗೀತಾ ಸ್ವರ್ಣಲಿಂಗಂ, ಪುತ್ರ ಜೇಸನ್ ಸಂಜಯ್ ಮತ್ತು ಪುತ್ರಿ ದಿವ್ಯಾ ಸಾಶಾ ಈ ಮಹತ್ವದ ಕಾರ್ಯಕ್ರಮಕ್ಕೆ ಬರದಿರುವುದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ‘ಇಂತಹ ಐತಿಹಾಸಿಕ ಕ್ಷಣದಲ್ಲಿ ವಿಜಯ್ ಅವರ ಕುಟುಂಬ ಜೊತೆಗಿರಬೇಕಿತ್ತು. ಪತ್ನಿ ಬರದಿದ್ದರೂ ಪರವಾಗಿಲ್ಲ, ಮಕ್ಕಳನ್ನಾದರೂ ಆಹ್ವಾನಿಸಬೇಕಿತ್ತು’ ಎಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ಸಂಗೀತಾ ಅವರು ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ವಿಜಯ್ ಅವರ ಜೀವನದಲ್ಲಿ ಮತ್ತೊಬ್ಬ ನಟಿಯ ಪ್ರವೇಶವಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಬೆನ್ನಲ್ಲೇ, ವಿಜಯ್ ಅವರ ಆಪ್ತ ಸ್ನೇಹಿತೆ ಎನ್ನಲಾದ ನಟಿ ತ್ರಿಶಾ ಕೃಷ್ಣನ್ ಅವರು ಪ್ರಮಾಣವಚನ ಸಮಾರಂಭಕ್ಕೆ ಆಗಮಿಸಿರುವುದು ವದಂತಿಗಳಿಗೆ ಮತ್ತಷ್ಟು ತುಪ್ಪ ಸುರಿದಂತಾಗಿದೆ. ಇದು ಅಭಿಮಾನಿಗಳ ವಲಯದಲ್ಲಿ ಪರ-ವಿರೋಧದ ಚರ್ಚೆಗೆ ಕಾರಣ ಆಗಿದೆ.

‘ಒಬ್ಬ ಅಭಿಮಾನಿಯಾಗಿ ನನಗೆ ಇದು ಪರ್ಸನಲ್ ಆಗಿ ನೋವುಂಟು ಮಾಡಿದೆ. ವಿಜಯ್ ಅವರ ವೈಯಕ್ತಿಕ ಜೀವನ ಏನೇ ಇರಲಿ, ಮಕ್ಕಳಾದರೂ ಅವರ ಯಶಸ್ಸಿನ ಭಾಗವಾಗಬೇಕಿತ್ತು’ ಎಂದು ಅಭಿಮಾನಿಯೊಬ್ಬರು ಎಕ್ಸ್ (ಟ್ವಿಟರ್) ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ವಿಜಯ್ ಬೆಂಬಲಕ್ಕೆ ನಿಂತಿದ್ದು, ‘ಅವರು ಪ್ರಬುದ್ಧ ವ್ಯಕ್ತಿಗಳು. ಅವರ ನಿರ್ಧಾರ ಅವರಿಗೆ ಬಿಟ್ಟಿದ್ದು. ನಮಗೆ ಬೇಕಿರುವುದು ಒಬ್ಬ ಒಳ್ಳೆಯ ಮುಖ್ಯಮಂತ್ರಿ ಅಷ್ಟೇ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ವಿಜಯ್ ಪ್ರಮಾಣವಚನ ಸಮಾರಂಭಕ್ಕೆ ಬಂದು ಮೊದಲ ಸಾಲಿನಲ್ಲೇ ಕುಳಿತ ತ್ರಿಶಾ

ಒಟ್ಟಾರೆಯಾಗಿ, ರಾಜಕೀಯವಾಗಿ ವಿಜಯ್ ಅವರಿಗೆ ಇದು ದೊಡ್ಡ ಗೆಲುವಾಗಿದ್ದರೂ, ಕುಟುಂಬದ ಈ ಅಂತರವು ಅವರ ಅಭಿಮಾನಿಗಳಲ್ಲಿ ಸಣ್ಣದೊಂದು ನೋವು ಉಳಿಸಿದೆ. ಶೀಘ್ರದಲ್ಲೇ ವಿಜಯ್ ಅವರ ವಿಚ್ಛೇದನದ ಅರ್ಜಿ ವಿಚಾರಣೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾದ ವಿಜಯ್​​ಗೆ ಶುಭ ಕೋರಿದ ಪ್ರಧಾನಿ ಮೋದಿ
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾದ ವಿಜಯ್​​ಗೆ ಶುಭ ಕೋರಿದ ಪ್ರಧಾನಿ ಮೋದಿ
'ಉಚಿತ ವಿದ್ಯುತ್' ಯೋಜನೆಗೆ ಸಹಿ ಹಾಕಿದ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್
'ಉಚಿತ ವಿದ್ಯುತ್' ಯೋಜನೆಗೆ ಸಹಿ ಹಾಕಿದ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್
Live: ಆರ್ಟ್ ಆಫ್ ಲಿವಿಂಗ್​ನಲ್ಲಿ ಪ್ರಧಾನಿ ಮೋದಿ ಭಾಷಣ, ನೇರ ಪ್ರಸಾರ
Live: ಆರ್ಟ್ ಆಫ್ ಲಿವಿಂಗ್​ನಲ್ಲಿ ಪ್ರಧಾನಿ ಮೋದಿ ಭಾಷಣ, ನೇರ ಪ್ರಸಾರ
ಮೋದಿಗೆ 13ಕೆಜಿ ತೂಕದ ಬೆಳ್ಳಿ ಪ್ರತಿಮೆ ನೀಡಿ ಸನ್ಮಾನಿಸಿದ ಬಿಜೆಪಿ ನಾಯಕರು
ಮೋದಿಗೆ 13ಕೆಜಿ ತೂಕದ ಬೆಳ್ಳಿ ಪ್ರತಿಮೆ ನೀಡಿ ಸನ್ಮಾನಿಸಿದ ಬಿಜೆಪಿ ನಾಯಕರು
ಬಿಎಸ್​ವೈ ಕೈ ಹಿಡಿದು ಮಾತನಾಡಿಸಿದ ನರೇಂದ್ರ ಮೋದಿ!
ಬಿಎಸ್​ವೈ ಕೈ ಹಿಡಿದು ಮಾತನಾಡಿಸಿದ ನರೇಂದ್ರ ಮೋದಿ!
Live: ಹೆಚ್​ಎಎಲ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ, ನೇರ ಪ್ರಸಾರ
Live: ಹೆಚ್​ಎಎಲ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ, ನೇರ ಪ್ರಸಾರ