AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾರ್ಕ್ ಆ್ಯಂಟನಿ’ ಶೂಟಿಂಗ್ ವೇಳೆ ಅವಘಡ: ಕೂದಲೆಳೆ ಅಂತರದಲ್ಲಿ ಪಾರಾದ ನಟ ವಿಶಾಲ್

ತೆಲುಗು ನಟ ವಿಶಾಲ್​ ನಟಿಸುತ್ತಿರುವ ಮಾರ್ಕ್​​ ಆಂಟೋನಿ ಚಿತ್ರದ ಶೂಟಿಂಗ್​ ವೇಳೆ ಅವಘಡ ಸಂಭವಿಸಿದ್ದು, ದೊಡ್ಡ ಅಪಘಾತದಿಂದ ವಿಶಾಲ್ ಅವರು ಪಾರಾಗಿರುವಂತಹ ಘಟನೆ ನಡೆದಿದೆ.

‘ಮಾರ್ಕ್ ಆ್ಯಂಟನಿ’ ಶೂಟಿಂಗ್ ವೇಳೆ ಅವಘಡ: ಕೂದಲೆಳೆ ಅಂತರದಲ್ಲಿ ಪಾರಾದ ನಟ ವಿಶಾಲ್
‘ಮಾರ್ಕ್ ಌಂಟನಿ’ ಶೂಟಿಂಗ್ ವೇಳೆ ಸಂಭವಿಸಿದ ಅಪಘಾತImage Credit source: opindia.com
ಗಂಗಾಧರ​ ಬ. ಸಾಬೋಜಿ
|

Updated on:Feb 22, 2023 | 9:52 PM

Share

ತೆಲುಗು ನಟ ವಿಶಾಲ್​ ನಟಿಸುತ್ತಿರುವ ‘ಮಾರ್ಕ್ ಆ್ಯಂಟನಿ’ (Mark Antony) ಚಿತ್ರದ ಶೂಟಿಂಗ್​ ವೇಳೆ ಅವಘಡ ಸಂಭವಿಸಿದ್ದು, ದೊಡ್ಡ ಅಪಘಾತದಿಂದ ವಿಶಾಲ್ ಅವರು ಪಾರಾಗಿರುವಂತಹ ಘಟನೆ ನಡೆದಿದೆ. ಇತ್ತೀಚೆಗೆ ಚೆನ್ನೈನ ಸ್ಟುಡಿಯೋದರಲ್ಲಿ ‘ಮಾರ್ಕ್ ಆ್ಯಂಟನಿ’ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಸಿನಿಮಾಗಾಗಿ ಲಾರಿ​ಗೆ ಸಂಬಂಧಿಸಿದ ದೃಶ್ಯವನ್ನು ಚಿತ್ರತಂಡ ಸೆರೆಹಿಡಿಯಲಾಗುತ್ತಿತ್ತು. ಈ ವೇಳೆ ಲಾರಿ ಡ್ರೈವರ್ ನಿಯಂತ್ರಣ ತಪ್ಪಿದ್ದು, ಎಲ್ಲಿ ಲಾರಿ ನಿಲ್ಲಬೇಕೋ ಅಲ್ಲಿ ನಿಲ್ಲದೆ ಮುಂದಕ್ಕೆ ನುಗ್ಗಿದೆ. ಅಲ್ಲೇ ಕೆಳಗಡೆ ಮಲಗಿದ್ದ ವಿಶಾಲ್​ ಅವರ ಪಕ್ಕದಲ್ಲೇ ಲಾರಿ ಹಾದು ಹೋಗಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯಣದಿಂದ ಪಾರಾಗಿದ್ದಾರೆ. ಸದ್ಯ ವಿಶಾಲ್​ ಅಪಘಾತದಿಂದ ಪಾರಾಗಿರುವ ವಿಚಾರ ತಿಳಿದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಈ ವಿಚಾರವಾಗಿ ಖುದ್ದು ವಿಶಾಲ್​ ಅವರು ಮಾಹಿತಿ ನೀಡಿದ್ದಾರೆ.

ಮಾರ್ಕ್​​ ಆಂಟೋನಿ ಚಿತ್ರದ ಚಿತ್ರೀಕರಣದ ವೇಳೆ ನಡೆದ ಅಪಘಾತದ ಕುರಿತಾಗಿ ವಿಶಾಲ್​ ಅವರು ಸೊಶೀಯಲ್​ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಕೆಲವೇ ಕ್ಷಣ ಸ್ವಲ್ಪವೇ ದೂರದಲ್ಲಿ ನನ್ನ ಸಾವು ಕಾಣಿಸಿತು. ದೇವರಿಗೆ ಧನ್ಯವಾದ ತಿಳಿಸುತ್ತೇನೆ. ಅವಘಡದಲ್ಲಿ ಯಾರಿಗೂ ಯಾವುದೇ ರೀತಿಯ ತೊಂದರೆ ಆಗಿಲ್ಲ. ಸ್ವಲ್ಪ ಸಮಯದ ಬಳಿಕ ಮತ್ತೆ ಶೂಟಿಂಗ್ ಮುಂದುವರೆಸಲಾಯಿತು’ ಎಂದು ವಿಶಾಲ್​ ಅವರು ತಮ್ಮ ಟ್ವೀಟರ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Rashmika Mandanna: ಮಿಲಾನ್​ಗೆ ಹಾರುವ ಮುನ್ನ ತಮ್ಮ ಸೌಂದರ್ಯದ ಗುಟ್ಟು ರಟ್ಟು ಮಾಡಿದ ರಶ್ಮಿಕಾ ಮಂದಣ್ಣ

ಇದನ್ನೂ ಓದಿ: Martin Teaser: ಮಾರ್ಟಿನ್ ಸಿನಿಮಾ ಟೀಸರ್ ನೋಡಲು ಟಿಕೆಟ್! ಕೊಟ್ಟ ಹಣ ಸತ್ಕಾರ್ಯಕ್ಕೆ ಬಳಕೆ

ಅವಘಡ ಸಂಭವಿಸಿದ ಸ್ಥಳದಲ್ಲಿ ವಿಶಾಲ್​ ಅವರು ಸೇರಿದಂತೆ ಅನೇಕ ಸಹ ಕಲಾವಿದರು, 100ಕ್ಕೂ ಹೆಚ್ಚು ಕಾರ್ಮಿಕರು, ತಂತ್ರಜ್ಞರು ಇದ್ದರು. ಲಾರಿ ನಿಯಂತ್ರಣ ಕಳೆದುಕೊಂಡು ತಮ್ಮ ಬಳಿ ಬರುತ್ತಿರುವುದನ್ನು ನೋಡಿ ಅದರಿಂದ ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ. ಮೇಲ್ನೋಟಕ್ಕೆ ಇದು ತಾಂತ್ರಿಕ ದೋಷದಿಂದ ಸಂಭವಿಸಲಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಅಪಘಾತದ ವಿಡಿಯೋ ಸೊಶೀಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:49 pm, Wed, 22 February 23

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ