Acharya Poster: ‘ಆಚಾರ್ಯ’ ಸಿನಿಮಾದಲ್ಲಿ ರಾಮ್​ ಚರಣ್​ ಲುಕ್​ ಬಹಿರಂಗ

Ram Charan: ವಿದ್ಯಾರ್ಥಿಗಳ ನಾಯಕ ಸಿದ್ಧ ಹೆಸರಿನ ಪಾತ್ರದಲ್ಲಿ ರಾಮ್​ ಚರಣ್​ ಕಾಣಿಸಿಕೊಳ್ಳುತ್ತಿದ್ದಾರೆ. ಕೊವಿಡ್​ ಕಾರಣದಿಂದ ಸಿನಿಮಾ ಶೂಟಿಂಗ್ ಸಂಪೂರ್ಣವಾಗಿ ನಿಂತಿತ್ತು.

Acharya Poster: ‘ಆಚಾರ್ಯ’ ಸಿನಿಮಾದಲ್ಲಿ ರಾಮ್​ ಚರಣ್​ ಲುಕ್​ ಬಹಿರಂಗ
‘ಆಚಾರ್ಯ’ ಸಿನಿಮಾದಲ್ಲಿ ರಾಮ್​ ಚರಣ್​ ಲುಕ್​ ಬಹಿರಂಗ
Follow us
| Updated By: ರಾಜೇಶ್ ದುಗ್ಗುಮನೆ

Updated on:Jul 10, 2021 | 8:23 PM

ರಾಮ್​ ಚರಣ್​ ಸದ್ಯ ಎರಡು ದೊಡ್ಡದೊಡ್ಡ ಪ್ರಾಜೆಕ್ಟ್​ನಲ್ಲಿ ನಟಿಸುತ್ತಿದ್ದಾರೆ. ಎಸ್​.ಎಸ್​. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ರಾಮ್​ ಚರಣ್​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದರ ಜತೆಗೆ ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾದಲ್ಲಿಯೂ ರಾಮ್​ ಚರಣ್​ ಬಣ್ಣ ಹಚ್ಚುತ್ತಿದ್ದಾರೆ. ಈ ಚಿತ್ರದ ಫಸ್ಟ್​ ಪೋಸ್ಟರ್​ ರಿಲೀಸ್​ ಆಗಿದ್ದು, ರಾಮ್​ ಚರಣ್​ ಲುಕ್​ ಬಹಿರಂಗೊಂಡಿದೆ.

ವಿದ್ಯಾರ್ಥಿಗಳ ನಾಯಕ ಸಿದ್ಧ ಹೆಸರಿನ ಪಾತ್ರದಲ್ಲಿ ರಾಮ್​ ಚರಣ್​ ಕಾಣಿಸಿಕೊಳ್ಳುತ್ತಿದ್ದಾರೆ. ಕೊವಿಡ್​ ಕಾರಣದಿಂದ ಸಿನಿಮಾ ಶೂಟಿಂಗ್ ಸಂಪೂರ್ಣವಾಗಿ ನಿಂತಿತ್ತು. ಈಗ ಕೊರೊನಾ ಕಡಿಮೆ ಆಗುತ್ತಿದ್ದು, ಶೂಟಿಂಗ್​ಗೆ ಮತ್ತೆ ಅವಕಾಶ ನೀಡಲಾಗಿದೆ. ಈ ಕಾರಣಕ್ಕೆ ಅವರು ಮತ್ತೆ ಸಿನಿಮಾದ ಸೆಟ್​​ ಸೇರಿಕೊಂಡಿದ್ದಾರೆ.

‘ಆಚಾರ್ಯ’ ಪಾತ್ರದಲ್ಲಿ ಚಿರಂಜೀವಿ ನಟಿಸುತ್ತಿದ್ದಾರೆ. ಕೊರಟಾಲ ಶಿವ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈಗಾಗಲೇ ಶೂಟಿಂಗ್ ಪೂರ್ಣಗೊಳ್ಳಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ಕೆಲಸಗಳು ನಿಂತಿದ್ದವು. ಈಗ ಕೊನೆಯ ಹಂತದ ಶೂಟಿಂಗ್​ ನಡೆಯುತ್ತಿದೆ. ಅಂದಹಾಗೆ, ರಾಮ್​ ಚರಣ್​ ಈ ಚಿತ್ರದಲ್ಲಿ ಹೆಚ್ಚು ಹೊತ್ತು ಕಾಣಿಸಿಕೊಳ್ಳುವುದಿಲ್ಲ. ಇದೊಂದು ಅತಿಥಿ ಪಾತ್ರ. ಸದ್ಯ, ರಾಮ್​ ಚರಣ್​ ಲುಕ್​ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

ಇನ್ನು, ಆರ್​ಆರ್​ಆರ್​ ಚಿತ್ರದಲ್ಲಿ ರಾಮ್​ ಚರಣ್​ ಅಲ್ಲುರಿ ಸೀತಾರಾಮ ರಾಜು ಪಾತ್ರದಲ್ಲಿ ನಟಿಸುತ್ತಿದ್ದಾರೆ. ತೆಲುಗಿನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ಕನ್ನಡ, ತಮಿಳು, ಹಿಂದಿ ಸೇರಿದಂತೆ ಹಲವು ಭಾಷೆಗಳಿಗೆ ಡಬ್​ ಆಗಿ ತೆರೆ ಕಾಣಲಿದೆ. ಇದೇ ವರ್ಷ ಅಕ್ಟೋಬರ್​ 13ರಂದು ಸಿನಿಮಾ ತೆರೆಕಾಣಿಸಬೇಕು ಎಂದು ನಿರ್ಮಾಪಕರು ಪ್ಲ್ಯಾನ್​ ಮಾಡಿಕೊಂಡಿದ್ದಾರೆ. ಆದರೆ ಲಾಕ್​ಡೌನ್ ಕಾರಣದಿಂದ ಚಿತ್ರದ ಕೆಲಸಗಳು ಲೇಟ್​ ಆಗಿರುವುದರಿಂದ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ ಆದರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ: RRR: ಬಹುದಿನಗಳಿಂದ ಕಾದಿದ್ದ ಅಭಿಮಾನಿಗಳಿಗೆ ಆರ್​ಆರ್​ಆರ್​ ತಂಡದಿಂದ ಸಿಕ್ತು ಬಿಗ್​ ನ್ಯೂಸ್​

ಮತ್ತೆ ಮತ್ತೆ ಆಲಿಯಾ ಭಟ್​ ಬೇಕು ಎಂದು ಬಯಸಿದ ರಾಮ್​ ಚರಣ್​; ಏನಿದು ವಿಷ್ಯ?

Published On - 8:01 pm, Sat, 10 July 21

ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ