ತ್ರಿಬಲ್ ಪಾರ್ಟ್ನಲ್ಲಿ ಬಂದ ಅಜಿತ್; ಹೊಸ ಸಿನಿಮಾಗಾಗಿ ಮೂರು ಅವತಾರ
ದೊಡ್ಡ ಬಜೆಟ್ ಸಿನಿಮಾಗಳನ್ನು ಸಂಕ್ರಾಂತಿ ಸಂದರ್ಭದಲ್ಲಿ ರಿಲೀಸ್ ಮಾಡೋಕೆ ಎಲ್ಲರೂ ಇಷ್ಟಪಡುತ್ತಾರೆ. ಅದೇ ರೀತಿ ‘ಗುಡ್ ಬ್ಯಾಡ್ ಅಗ್ಲಿ’ ಚಿತ್ರವನ್ನು ಪೊಂಗಲ್ ಸಂದರ್ಭದಲ್ಲೇ ರಿಲೀಸ್ ಮಾಡಲಾಗುತ್ತಿದೆ. ಈ ಸಿನಿಮಾಗಳ ಜೊತೆ ಯಾವ ಯಾವ ಸಿನಿಮಾಗಳು ಸ್ಪರ್ಧೆಗೆ ಇಳಿಯಲಿವೆ ಎನ್ನುವ ಕುತೂಹಲ ಮೂಡಿದೆ.
ತಮಿಳು ನಟ ಅಜಿತ್ ಕುಮಾರ್ (Ajith Kumar) ಅವರು ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆ ಬಗ್ಗೆ ಇತ್ತೀಚೆಗೆ ಘೋಷಣೆ ಆಗಿತ್ತು. ಈಗ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ. ಇದರಲ್ಲಿ ಅವರು ತ್ರಿಬಲ್ ರೋಲ್ನಲ್ಲಿ ಕಾಣಿಸಿಕೊಳ್ಳುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ಇದು ಅಜಿತ್ ಅವರ 63ನೇ ಸಿನಿಮಾ ಆಗಿದ್ದು, ಮೈತ್ರಿ ಮೂವಿ ಮೇಕರ್ಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಈ ಸಿನಿಮಾ 2025ರ ಸಂಕ್ರಾಂತಿ ಸಂದರ್ಭದಲ್ಲಿ ರಿಲೀಸ್ ಆಗಲಿದೆ.
‘ಗುಡ್ ಬ್ಯಾಡ್ ಅಗ್ಲಿ’ ಚಿತ್ರದ ಪೋಸ್ಟರ್ ಗಮನ ಸೆಳೆದಿದೆ. ಇದರಲ್ಲಿ ಮೂರು ಅಜಿತ್ನ ತೋರಿಸಲಾಗಿದೆ. ಮಧ್ಯದಲ್ಲಿರೋ ಅಜಿತ್ ಅವರು ಸಖತ್ ದಪ್ಪ ಕಾಣುತ್ತಿದ್ದಾರೆ. ಅವರ ಕೈಗೆ ಟ್ಯಾಟೂ ಇದೆ. ತುಂಬಾನೇ ಗಂಭೀರವಾಗಿಯೂ ಕಾಣಿಸುತ್ತಾರೆ. ಮತ್ತೊಂದರಲ್ಲಿ ಅವರು ಮಧ್ಯಬೆಟ್ಟು ತೋರಿಸುತ್ತಿದ್ದು, ಬ್ಲರ್ ಮಾಡಲಾಗಿದೆ. ಮತ್ತೊಂದರಲ್ಲಿ ಅಜಿತ್ ಅವರು ಹೊಡೆಯೋಕೆ ರೆಡಿ ಆಗಿದ್ದಾರೆ. ಟೈಟಲ್ಗೆ ತಕ್ಕಂತೆ ಸಿನಿಮಾ ಮೂಡಿ ಬಂದಿದೆ.
ಇದನ್ನೂ ಓದಿ: ಅಜಿತ್ ಕುಮಾರ್ ಚಿತ್ರಕ್ಕೆ ಹಾಲಿವುಡ್ ಸಿನಿಮಾ ಟೈಟಲ್; ‘ಪುಷ್ಪ’ ನಿರ್ಮಾಪಕನಿಂದ ಬಂಡವಾಳ
ದೊಡ್ಡ ಬಜೆಟ್ ಸಿನಿಮಾಗಳನ್ನು ಸಂಕ್ರಾಂತಿ ಸಂದರ್ಭದಲ್ಲಿ ರಿಲೀಸ್ ಮಾಡೋಕೆ ಎಲ್ಲರೂ ಇಷ್ಟಪಡುತ್ತಾರೆ. ಅದೇ ರೀತಿ ‘ಗುಡ್ ಬ್ಯಾಡ್ ಅಗ್ಲಿ’ ಚಿತ್ರವನ್ನು ಪೊಂಗಲ್ ಸಂದರ್ಭದಲ್ಲೇ ರಿಲೀಸ್ ಮಾಡಲಾಗುತ್ತಿದೆ. ಈ ಸಿನಿಮಾಗಳ ಜೊತೆ ಯಾವ ಯಾವ ಸಿನಿಮಾಗಳು ಸ್ಪರ್ಧೆಗೆ ಇಳಿಯಲಿವೆ ಎನ್ನುವ ಕುತೂಹಲ ಮೂಡಿದೆ.
ದೇವಿ ಶ್ರೀ ಪ್ರಸಾದ್ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅಧಿಕ್ ರವಿಚಂದ್ರನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇದು ಇವರಿಬ್ಬರ ಕಾಂಬಿನೇಷನ್ನ ಮೊದಲ ಸಿನಿಮಾ. ಸದ್ಯ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ. ಶೀಘ್ರವೇ ಚಿತ್ರದ ಶೂಟಿಂಗ್ ನಡೆಯಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.