AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳಿಗೆ ಆಪತ್ಬಾಂಧವನಾದ ಅಲ್ಲು ಅರ್ಜುನ್; 900 ಫ್ಯಾನ್ಸ್​ಗೆ ಇನ್ಶೂರೆನ್ಸ್

ಸ್ಟಾರ್ ನಟ ಅಲ್ಲು ಅರ್ಜುನ್ ಹೈದರಾಬಾದ್‌ನಲ್ಲಿ ಅಭಿಮಾನಿ ಸಂಘದ ಸದಸ್ಯರನ್ನು ಭೇಟಿಯಾಗಿದ್ದಾರೆ. ಆರು ಗಂಟೆಗಳ ಕಾಲ ನಿಂತೇ ಫೋಟೋ ನೀಡಿದ ನಟ, ಅಭಿಮಾನಿಗಳಿಗೆ ಉಚಿತ ಅಪಘಾತ ವಿಮೆ ಘೋಷಿಸಿದ್ದಾರೆ. ರಾಜ್ಯ ಸಮಿತಿ ಸದಸ್ಯರಿಗೆ 5 ಲಕ್ಷ ಹಾಗೂ ಜಿಲ್ಲಾ ಸದಸ್ಯರಿಗೆ 3 ಲಕ್ಷ ರೂಪಾಯಿ ವಿಮೆ ಸಿಗಲಿದ್ದು, ಇದು ದೇಶದಲ್ಲೇ ಮೊದಲ ಪ್ರಯತ್ನವಾಗಿದೆ.

ಅಭಿಮಾನಿಗಳಿಗೆ ಆಪತ್ಬಾಂಧವನಾದ ಅಲ್ಲು ಅರ್ಜುನ್; 900 ಫ್ಯಾನ್ಸ್​ಗೆ ಇನ್ಶೂರೆನ್ಸ್
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Jul 29, 2026 | 6:55 AM

Share

ಮುಖ್ಯಾಂಶಗಳು

  • ಫ್ಯಾನ್ಸ್ ಪಾಲಿಗೆ ದೇವರಾದ ಅಲ್ಲು ಅರ್ಜುನ್
  • ಟ್ರೋಲ್ ಸಂಸ್ಕೃತಿಗೆ ಬ್ರೇಕ್ ಹಾಕಿದ ಐಕಾನ್ ಸ್ಟಾರ್
  • ಅಭಿಮಾನಿಗಳ ಸುರಕ್ಷತೆಗೆ ಅಲ್ಲು ಹೊಸ ಇತಿಹಾಸ!

ಟಾಲಿವುಡ್ ನಟ ಅಲ್ಲು ಅರ್ಜುನ್ (Allu Arjun) ತಮ್ಮ ಅಭಿಮಾನಿಗಳಿಗೆ ಏನಾದರೂ ಆದರೆ ಸ್ಪಂದಿಸುತ್ತಾರೆ. ಅವರು ಈ ಮೊದಲು ಕಷ್ಟದಲ್ಲಿ ಇರುವ ಸಾಕಷ್ಟು ಫ್ಯಾನ್ಸ್ ಭೇಟಿ ಮಾಡಿದ ಉದಾಹರಣೆ ಇದೆ. ಈಗ ಅವರು ಫ್ಯಾನ್ಸ್​ಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಅಭಿಮಾನಿಗಳ ಬೇಟಿ ಕಾರ್ಯಕ್ರಮದಲ್ಲಿ ಅವರು ತಮ್ಮ ಫ್ಯಾನ್ಸ್ ಅಸೋಸಿಯೇಷನ್ ಸದಸ್ಯರಿಗೆ ಉಚಿತ ಅಪಘಾತ ವಿಮೆ ಘೋಷಿಸಿದ್ದಾರೆ. ಈ ಮೂಲಕ ಸ್ಟಾರ್ ನಟನೊಬ್ಬ ತನ್ನ ಅಭಿಮಾನಿ ಬಳಗಕ್ಕೆ ನೇರವಾಗಿ ಇನ್ಶೂರೆನ್ಸ್ ಮಾಡಿಸಿದ ದೇಶದ ಮೊದಲ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ.

ಆರು ಗಂಟೆ ಕಾಲ ನಿಂತೇ ಫೋಟೋ ನೀಡಿದ ಸ್ಟಾರ್

ಹೈದರಾಬಾದ್‌ನಲ್ಲಿ ನಡೆದ ಈ ಕಾರ್ಯಕ್ರಮ ಬರೋಬ್ಬರಿ ಆರು ಗಂಟೆಗಳ ಕಾಲ ನಡೆಯಿತು. ಅಲ್ಲು ಅರ್ಜುನ್ ಅವರು ಅಷ್ಟು ಸಮಯವೂ ನಿಂತುಕೊಂಡೇ ಅಭಿಮಾನಿಗಳನ್ನು ಬರಮಾಡಿಕೊಂಡರು. ಏಳು ರಾಜ್ಯಗಳಿಂದ ಬಂದ ಸುಮಾರು 1,000ಕ್ಕೂ ಹೆಚ್ಚು ಅಭಿಮಾನಿಗಳನ್ನು ವೈಯಕ್ತಿಕವಾಗಿ ಭೇಟಿಯಾದರು. ಪ್ರತಿಯೊಬ್ಬರ ಜೊತೆಗೂ ತಾಳ್ಮೆಯಿಂದ ಫೋಟೋಗೆ ಫೋಸ್ ನೀಡಿದರು. ಅಭಿಮಾನಿಗಳನ್ನು ಅಪ್ಪಿ, ಹಸ್ತಲಾಘವ ನೀಡಿ ಪ್ರೀತಿ ಹಂಚಿದರು. ಬಂದಿದ್ದ ಎಲ್ಲಾ ಅಭಿಮಾನಿಗಳಿಗೆ ವಿಶೇಷ ಊಟದ ವ್ಯವಸ್ಥೆ ಕೂಡ ಮಾಡಲಾಗಿತ್ತು.

ಅಭಿಮಾನಿಗಳಿಗೆ ಲಕ್ಷ ಲಕ್ಷ ರೂಪಾಯಿ ಇನ್ಶೂರೆನ್ಸ್

ಈ ಸಮಾರಂಭದ ಪ್ರಮುಖ ಹೈಲೈಟ್ ಎಂದರೆ ಅಪಘಾತ ವಿಮೆ ಘೋಷಣೆ. ಅಲ್ಲು ಅರ್ಜುನ್ ಫ್ಯಾನ್ಸ್ ಅಸೋಸಿಯೇಷನ್ ಸದಸ್ಯರಿಗೆ ಈ ಸೌಲಭ್ಯ ಸಿಗಲಿದೆ. ರಾಜ್ಯ ಸಮಿತಿ ಸದಸ್ಯರಿಗೆ 5 ಲಕ್ಷ ರೂಪಾಯಿ ವಿಮೆ ಸಿಗಲಿದೆ. ಜಿಲ್ಲಾ ಸಮಿತಿ ಸದಸ್ಯರಿಗೆ 3 ಲಕ್ಷ ರೂಪಾಯಿ ವಿಮೆ ದೊರೆಯಲಿದೆ. ಯಾವುದೇ ಪ್ರವೇಶ ಶುಲ್ಕ ಅಥವಾ ಪೇಯ್ಡ್ ಮೆಂಬರ್‌ಶಿಪ್ ಇಲ್ಲದೆ ಈ ವಿಮೆ ನೀಡಲಾಗುತ್ತಿದೆ. ಇದರಿಂದ ಸುಮಾರು 900ಕ್ಕೂ ಹೆಚ್ಚು ಅಭಿಮಾನಿಗಳಿಗೆ ನೇರ ಪ್ರಯೋಜನ ಸಿಗಲಿದೆ.

ಇದನ್ನೂ ಓದಿ: ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ

ಟ್ರೋಲ್ ಮಾಡಬೇಡಿ, ಸಮಾಜಕ್ಕೆ ಒಳ್ಳೆಯದು ಮಾಡಿ

ಇದೇ ವೇಳೆ ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಕಿವಿಮಾತು ಹೇಳಿದರು. ನಿಮ್ಮ ಶಕ್ತಿ ಮತ್ತು ಉತ್ಸಾಹವನ್ನು ಒಳ್ಳೆಯ ಕೆಲಸಗಳಿಗೆ ಬಳಸಿ ಎಂದು ಕರೆ ನೀಡಿದರು. ಸಮಾಜಕ್ಕೆ ಉಪಯುಕ್ತವಾಗುವ ನಿಟ್ಟಿನಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಿ ಎಂದರು. ಸಾಮಾಜಿಕ ಜಾಲತಾಣಗಳಲ್ಲಿ ಇತರ ನಟರನ್ನು ಅಥವಾ ಅವರ ಅಭಿಮಾನಿಗಳನ್ನು ಟ್ರೋಲ್ ಮಾಡಬೇಡಿ ಎಂದು ಮನವಿ ಮಾಡಿದರು. ನೆಚ್ಚಿನ ನಟನ ಈ ಕಾಳಜಿ ಮತ್ತು ಅಪೂರ್ವ ನಡೆಗೆ ಅಭಿಮಾನಿಗಳು ಮನಸೋತಿದ್ದಾರೆ.

ಪ್ರಶ್ನೆ: ಅಲ್ಲು ಅರ್ಜುನ್ ಮುಂದಿನ ಸಿನಿಮಾ ಯಾವುದು? ಉತ್ತರ: ರಾಕಾ

ಪ್ರಶ್ನೆ: ಅಲ್ಲು ಅರ್ಜುನ್ ಪತ್ನಿ ಹೆಸರೇನು? ಉತ್ತರ: ಸ್ನೇಹಾ ರೆಡ್ಡಿ

ಪ್ರಶ್ನೆ: ಅಲ್ಲು ಅರ್ಜುನ್ ಮಕ್ಕಳ ಹೆಸರೇನು? ಉತ್ತರ: ಅಲ್ಲು ಅಯಾನ್ ಹಾಗೂ ಅಲ್ಲ ಅರ್ಹಾ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!