1.8 ಕೋಟಿ ರೂ. ಬಾಕಿ ಉಳಿಸಿಕೊಂಡ ಆರೋಪ; ನಟ ಆರ್ಯ ವಿರುದ್ಧ ಕೇಸ್

ತಮಿಳು ಚಿತ್ರರಂಗದ ಖ್ಯಾತ ನಟ ಆರ್ಯ ವಿರುದ್ಧ ಹೈದರಾಬಾದ್‌ನಲ್ಲಿ ಭರ್ಜರಿ ವಂಚನೆ ಪ್ರಕರಣ ದಾಖಲಾಗಿದೆ. 'ಅನಂತನ್ ಕಾಡು' ಸಿನಿಮಾ ಶೂಟಿಂಗ್‌ಗಾಗಿ ಹೈದರಾಬಾದ್ ಮೂಲದ ಸಂಸ್ಥೆಯಿಂದ ಉಪಕರಣಗಳನ್ನು ಪಡೆದು, 1.8 ಕೋಟಿಗೂ ಅಧಿಕ ಬಾಕಿ ಹಣ ಪಾವತಿಸದೆ ವಂಚಿಸಿರುವ ಗಂಭೀರ ಆರೋಪ ನಟನ ಮೇಲಿದೆ. ಹಣ ಕೇಳಲು ಹೋದ ಮ್ಯಾನೇಜರ್‌ಗೆ ಬೆದರಿಕೆ ಹಾಕಿರುವ ಆರೋಪವೂ ಕೇಳಿಬಂದಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

1.8 ಕೋಟಿ ರೂ. ಬಾಕಿ ಉಳಿಸಿಕೊಂಡ ಆರೋಪ; ನಟ ಆರ್ಯ ವಿರುದ್ಧ ಕೇಸ್
ಆರ್ಯ

Updated on: Jul 13, 2026 | 10:55 AM

ಮುಖ್ಯಾಂಶಗಳು

  • ₹1.8 ಕೋಟಿ ಬಾಡಿಗೆ ಹಣಕ್ಕೆ ಪಂಗನಾಮ
  • ಹೈದರಾಬಾದ್‌ನಲ್ಲಿ ನಟ ಆರ್ಯ ವಿರುದ್ಧ ಎಫ್‌ಐಆರ್
  • ಮಾತು ತಪ್ಪಿ ಒಪ್ಪಂದ ಮುರಿದ 'ಅನಂತನ್ ಕಾಡು' ಚಿತ್ರತಂಡ

ತಮಿಳು ಚಿತ್ರರಂಗದ ಪ್ರಸಿದ್ಧ ನಟ ಆರ್ಯ ವಿರುದ್ಧ ಹೈದರಾಬಾದ್‌ನಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಶೂಟಿಂಗ್ ಉಪಕರಣಗಳನ್ನು ಬಾಡಿಗೆಗೆ ಪಡೆದು ಹಣ ಪಾವತಿಸದ ಆರೋಪ ಇವರ ಮೇಲಿದೆ. ಹೈದರಾಬಾದ್ ಮೂಲದ ಸಂಸ್ಥೆಯೊಂದಕ್ಕೆ 1.8 ಕೋಟಿ ರೂಪಾಯಿಗೂ ಅಧಿಕ ಬಾಕಿ ಹಣ ನೀಡಬೇಕಾಗಿದೆ. ಈ ಸಂಬಂಧ ಸಂಸ್ಥೆಯು ಪೊಲೀಸರಿಗೆ ದೂರು ನೀಡಿದೆ.

ಭರವಸೆ ನೀಡಿದ್ದ ಆರ್ಯ

‘ತಾಹರ್ ಸಿನಿ ಟೆಕ್ನಿಕ್’ ಸಂಸ್ಥೆಯು ಜುಲೈ 10 ರಂದು ಪೊಲೀಸರಿಗೆ ಈ ದೂರು ನೀಡಿದೆ. ಆರ್ಯ ನಟನೆಯ ‘ಅನಂತನ್ ಕಾಡು’ ಸಿನಿಮಾದ ಶೂಟಿಂಗ್‌ಗಾಗಿ ಉಪಕರಣಗಳನ್ನು ಪಡೆಯಲಾಗಿತ್ತು. ಈ ವೇಳೆ ಚಿತ್ರದ ನಾಯಕ ನಟ ಆರ್ಯ ಪ್ರೊಡಕ್ಷನ್ ಹೌಸ್ ಎಲ್ಲಾ ಹಣವನ್ನು ಚುಕ್ತಾ ಮಾಡುತ್ತದೆ ಎಂದು ಭರವಸೆ ಕೊಟ್ಟಿದ್ದರು.

ಒಪ್ಪಂದ ಮುರಿದ ಚಿತ್ರತಂಡ

ಈ ಭರವಸೆಯ ಮೇರೆಗೆ 2025ರ ಫೆಬ್ರವರಿಯಲ್ಲಿ ಎರಡೂ ಸಂಸ್ಥೆಗಳ ನಡುವೆ ಒಪ್ಪಂದವಾಗಿತ್ತು. ಹೈದರಾಬಾದ್‌ನಿಂದ ಕೇರಳಕ್ಕೆ ಡಿಜಿಟಲ್ ಕ್ಯಾಮೆರಾಗಳು ಮತ್ತು ಲೈಟಿಂಗ್ ಉಪಕರಣಗಳನ್ನು ಸರಬರಾಜು ಮಾಡಲಾಗಿತ್ತು. ಒಟ್ಟು ಒಪ್ಪಂದದ ಮೊತ್ತ 2.12 ಕೋಟಿ ರೂಪಾಯಿ ಆಗಿತ್ತು. ಆದರೆ ಉಪಕರಣಗಳನ್ನು ಬಳಸಿಕೊಂಡ ನಂತರ ಚಿತ್ರತಂಡ ಹಣ ನೀಡದೆ ವಂಚಿಸಿದೆ. 32 ಲಕ್ಷ ರೂಪಾಯಿ ನೀಡಿ ಇನ್ನುಳಿದ 1.8 ಕೋಟಿ ರೂಪಾಯಿಯನ್ನು ಬಾಕಿ ಉಳಿಸಿಕೊಂಡಿದೆ.

ಇದನ್ನೂ ಓದಿ: ಅಪ್ರಾಪ್ತೆ ಜೊತೆ ಕಾರ್ತಿಕ್ ಆರ್ಯನ್ ಡೇಟಿಂಗ್? ಇಬ್ಬರ ಮಧ್ಯೆ 18 ವರ್ಷ ವಯಸ್ಸಿನ ಅಂತರ

ಮ್ಯಾನೇಜರ್‌ಗೆ ಬೆದರಿಕೆ ಹಾಕಿದ ನಟ

ಸಿನಿಮಾ ಬಿಡುಗಡೆಗೆ ಮುನ್ನ ಎಲ್ಲಾ ಬಾಕಿ ಹಣವನ್ನು ತೀರಿಸುವುದಾಗಿ ಚಿತ್ರತಂಡ ಹೇಳಿತ್ತು. ಹಣ ಪಾವತಿಸಿದ ನಂತರವೇ ಸಂಸ್ಥೆಯಿಂದ ‘ನೋ ಡ್ಯೂಸ್ ಸರ್ಟಿಫಿಕೇಟ್’ ಪಡೆಯುವುದಾಗಿ ಒಪ್ಪಿಕೊಂಡಿತ್ತು. ಆದರೆ ಹಲವು ಬಾರಿ ನೆನಪಿಸಿದರೂ ಚಿತ್ರತಂಡ ಹಣ ನೀಡಿಲ್ಲ. ಬಾಕಿ ಹಣ ಕೇಳಲು ಹೋದ ಸಂಸ್ಥೆಯ ಮ್ಯಾನೇಜರ್‌ಗೆ ನಟ ಆರ್ಯ ಮತ್ತು ನಿರ್ಮಾಪಕರು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us