AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರರ ಉದ್ದೇಶ ಹಾಳು ಮಾಡಲು ಕಾಶ್ಮೀರಕ್ಕೆ ಹೋದ ನಟ ಅತುಲ್ ಕುಲಕರ್ಣಿ

ಭಯೋತ್ಪಾದಕ ದಾಳಿಯ ನಂತರ ಕಾಶ್ಮೀರದ ಪ್ರವಾಸೋದ್ಯಮ ಕುಸಿದಿದೆ. ನಟ ಅತುಲ್ ಕುಲಕರ್ಣಿ ಅವರು ಧೈರ್ಯ ತೋರಿ ಕಾಶ್ಮೀರಕ್ಕೆ ಭೇಟಿ ನೀಡಿ, ಪ್ರವಾಸಿಗರನ್ನು ಆಹ್ವಾನಿಸಿದ್ದಾರೆ. ಅವರ ಈ ಕ್ರಿಯೆ ಪ್ರವಾಸೋದ್ಯಮ ಪುನಶ್ಚೇತನಕ್ಕೆ ಸಹಾಯ ಮಾಡಲಿದೆ ಎಂದು ನಿರೀಕ್ಷಿಸಲಾಗಿದೆ. ಕಾಶ್ಮೀರದ ಸೌಂದರ್ಯವನ್ನು ಜಗತ್ತಿಗೆ ತೋರಿಸುವ ಮೂಲಕ ಅವರು ಭಯೋತ್ಪಾದನೆಯನ್ನು ಎದುರಿಸಲು ಪ್ರಯತ್ನಿಸುತ್ತಿದ್ದಾರೆ.

ಉಗ್ರರ ಉದ್ದೇಶ ಹಾಳು ಮಾಡಲು ಕಾಶ್ಮೀರಕ್ಕೆ ಹೋದ ನಟ ಅತುಲ್ ಕುಲಕರ್ಣಿ
ಅತುಲ್ ಕುಲಕರ್ಣಿ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Apr 28, 2025 | 7:53 AM

Share

ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಬೈಸ್ರಾನ್ ಕಣಿವಯೆಲ್ಲಿರುವ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದರು. ಈ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದರು. ಇದರಲ್ಲಿ ಕರ್ನಾಟಕದವರೂ ಸೇರಿದ್ದಾರೆ. ಪಹಲ್ಗಾಮ್ (Pahalgam Attack) ಘಟನೆಯ ನಂತರ, ಪ್ರವಾಸಿಗರಲ್ಲಿ ಭಯ ಮೂಡಿದೆ. ಯಾರೊಬ್ಬರೂ ಇಲ್ಲಿಗೆ ಬರಲು ಧೈರ್ಯ ಮಾಡುತ್ತಿಲ್ಲ. ಇದರಿಂದ ಪ್ರವಾಸೋದ್ಯಮವನ್ನೇ ನಂಬಿಕೊಂಡಿದ್ದ ಸ್ಥಳೀಯರು ಭಯ ಬಿದ್ದಿದ್ದಾರೆ. ಆದರೆ, ನಟ ಅತುಲ್ ಕುಲಕರ್ಣಿ ಅವರು ಜಮ್ಮು-ಕಾಶ್ಮೀರಕ್ಕೆ ತೆರಳಿದ್ದು, ಪ್ರವಾಸಿಗರ ಬಳಿ ಇಲ್ಲಿಗೆ ಬರುವಂತೆ ಕೋರುತ್ತಿದ್ದಾರೆ.

ಭಯೋತ್ಪಾದಕ ದಾಳಿಯಿಂದಾಗಿ ಅನೇಕ ಜನರು ಕಾಶ್ಮೀರಕ್ಕೆ ಹೋಗಲು ಹೆದರುತ್ತಾ ಇದ್ದಾರೆ. ಕೆಲವರು ಮತ್ತೆಂದೂ ಕಾಶ್ಮೀರಕ್ಕೆ ಹೋಗುವುದಿಲ್ಲ ಎಂದು ಶಪಥ ಮಾಡಿದ್ದಾರೆ. ಸ್ಥಳೀಯರು ಮಾತ್ರ ಇಲ್ಲಿಗೆ ಬರುವಂತೆ ಕೋರುತ್ತಿದ್ದಾರೆ. ಅದೇ ರೀತಿ, ನಟ ಅತುಲ್ ಕುಲಕರ್ಣಿ ಸ್ವತಃ ಕಾಶ್ಮೀರಕ್ಕೆ ಹೋಗುವ ಮೂಲಕ ದೊಡ್ಡ ಸಂದೇಶವನ್ನು ನೀಡಿದ್ದಾರೆ.

ಇದನ್ನೂ ಓದಿ
Image
ನಾನಿಗೆ ಕನ್ನಡ ಪಾಠ ಮಾಡಿದ ಶ್ರೀನಿಧಿ ಶೆಟ್ಟಿ; ಎಷ್ಟು ಕ್ಯೂಟ್ ನೋಡಿ
Image
ಮುಂಜಾನೆ ಎದ್ದು ತಮ್ಮದೇ ಮೂತ್ರ ಕುಡಿಯುತ್ತಾರೆ ನಟ ಪರೇಶ್ ರಾವಲ್
Image
ಮೆಗಾಸ್ಟಾರ್ ಚಿರಂಜೀವಿ ನಟನೆಯ ಬ್ಲಾಕ್ ಬಸ್ಟರ್ ಸಿನಿಮಾ ಮರು ಬಿಡುಗಡೆ
Image
20 ವರ್ಷಗಳ ಪ್ರಯತ್ನದ ಬಳಿಕ ಕೊನೆಗೂ ಸಿಕ್ತು ‘3 ಇಡಿಯಟ್ಸ್’ ಶಾಲೆಗೆ ಮಾನ್ಯತೆ

ಅತುಲ್ ಕುಲಕರ್ಣಿ ಮುಂಬೈನಿಂದ ಶ್ರೀನಗರಕ್ಕೆ ಪ್ರಯಾಣಿಸುವಾಗ ವಿಮಾನದಿಂದ ತೆಗೆದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಏಪ್ರಿಲ್-ಮೇ ತಿಂಗಳುಗಳಲ್ಲಿ ಕಾಶ್ಮೀರಕ್ಕೆ ಪ್ರವಾಸಿಗರ ದಂಡೇ ಇರುತ್ತದೆ. ಆದರೆ ದಾಳಿಯ ನಂತರ, ವಿಮಾನವೂ ಖಾಲಿ ಇದೆ. ಈ ವಿಮಾನವು ಯಾವಾಗಲೂ ಪ್ರಯಾಣಿಕರಿಂದ ತುಂಬಿರುತ್ತದೆ ಎಂದು ಸಿಬ್ಬಂದಿ ಅತುಲ್‌ಗೆ ಮಾಹಿತಿ ನೀಡಿದರು. ‘ನಾವು ಈ ಜಾಗಗಳನ್ನು ಮತ್ತೆ ತುಂಬಬೇಕು’ ಎಂದು ಅವರು ಈ ಫೋಟೋದಲ್ಲಿ ಬರೆದಿದ್ದಾರೆ.

‘ಬನ್ನಿ, ಕಾಶ್ಮೀರಕ್ಕೆ ಹೋಗೋಣ.. ನಾನು ಬಂದಿದ್ದೇನೆ, ನೀವೂ ಬನ್ನಿ..’ ಎಂದು ಅವರು ದೇಶವಾಸಿಗಳಲ್ಲಿ ಮನವಿ ಮಾಡಿದ್ದಾರೆ. ಕಾಶ್ಮೀರದ ಪ್ರವಾಸೋದ್ಯಮದ ಮೇಲೆ ಪರಿಣಾಮ ಬೀರುವುದು ಭಯೋತ್ಪಾದಕರ ಉದ್ದೇಶವಾಗಿತ್ತು. ಆದರೆ ಅತುಲ್ ಅವರ ಉದ್ದೇಶ ಈಡೇರಲು ಬಿಡುವುದಿಲ್ಲ ಎಂಬ ಸಂದೇಶವನ್ನು ನೀಡಿದ್ದಾರೆ.

ಇದನ್ನೂ ಓದಿ: ಜಮ್ಮು-ಕಾಶ್ಮೀರ: ಕುಪ್ವಾರದಲ್ಲಿ ಮನೆಯ ಎದುರೇ ವ್ಯಕ್ತಿಯೊಬ್ಬರಿಗೆ ಗುಂಡು ಹಾರಿಸಿ ದುಷ್ಕರ್ಮಿ ಪರಾರಿ

‘ಈ ವಿಮಾನಗಳು ಭರ್ತಿಯಾಗಿದ್ದವು. ನಾವು ಅವುಗಳನ್ನು ಪುನಃ ತುಂಬಿಸಬೇಕಾಗಿದೆ. ನಾವು ಭಯೋತ್ಪಾದನೆಯನ್ನು ಸೋಲಿಸಲು ಬಯಸುತ್ತೇವೆ’ ಎಂದು ಅವರು ವಿಮಾನ ಪ್ರಯಾಣದ ಫೋಟೋಗಳನ್ನು ಪೋಸ್ಟ್ ಮಾಡಿ ಬರೆದಿದ್ದಾರೆ. ಅವರು ತಮ್ಮ ಇನ್‌ಸ್ಟಾ ಸ್ಟೋರಿಯಲ್ಲಿ ಕಾಶ್ಮೀರದ ವೀಡಿಯೊಗಳನ್ನು ಸಹ ಪೋಸ್ಟ್ ಮಾಡಿದ್ದಾರೆ. ಭಯೋತ್ಪಾದಕ ದಾಳಿಯನ್ನು ಪ್ರತಿಭಟಿಸಲು ಅಲ್ಲಿನ ನಾಗರಿಕರು ರ್ಯಾಲಿ ನಡೆಸುತ್ತಿರುವುದನ್ನು ಇದು ತೋರಿಸುತ್ತದೆ. ಅತುಲ್ ಅವರು ಕನ್ನಡದಲ್ಲಿ ‘ಆ ದಿನಗಳು’, ‘ಉಗ್ರಂ’, ‘ಯಕ್ಷ’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿನೋದ್ ಪ್ರಭಾಕರ್ ನಟನೆಯ ‘ಬಲರಾಮನ ದಿನಗಳು’ ಸಿನಿಮಾದಲ್ಲಿ ಅತುಲ್ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ