ಮದುವೆಗೆ ಬರುವಂತೆ ಯಶ್-ರಾಧಿಕಾ ದಂಪತಿಗೆ ಆಹ್ವಾನ ನೀಡಿದ ಚಿಕ್ಕಣ್ಣ

ಕನ್ನಡದ ಜನಪ್ರಿಯ ನಟ ಚಿಕ್ಕಣ್ಣ ಮಂಡ್ಯದ ಪಾವನಾ ಅವರೊಂದಿಗೆ ಆಗಸ್ಟ್ 29ರಂದು ಹಸೆಮಣೆ ಏರಲಿದ್ದಾರೆ. ಮೈಸೂರಿನಲ್ಲಿ ನಡೆಯಲಿರುವ ಈ ಮದುವೆಗೆ ನಟ ಯಶ್-ರಾಧಿಕಾ ದಂಪತಿ ಸೇರಿದಂತೆ ಹಲವು ಗಣ್ಯರಿಗೆ ಚಿಕ್ಕಣ್ಣ ಆಹ್ವಾನ ನೀಡಿದ್ದಾರೆ. 'ರಾಜಾಹುಲಿ' ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಯಶ್ ಜೊತೆ ಚಿಕ್ಕಣ್ಣ ಒಟ್ಟಾಗಿ ಅಭಿನಯಿಸಿದ್ದರು. ಇಬ್ಬರ ನಡುವಿನ ಆತ್ಮೀಯತೆ ಮತ್ತು ಸ್ನೇಹ ಈಗಲೂ ಹಾಗೆಯೇ ಮುಂದುವರಿದಿದೆ.

ಮದುವೆಗೆ ಬರುವಂತೆ ಯಶ್-ರಾಧಿಕಾ ದಂಪತಿಗೆ ಆಹ್ವಾನ ನೀಡಿದ ಚಿಕ್ಕಣ್ಣ
ಚಿಕ್ಕಣ್ಣ-ಯಶ್-ರಾಧಿಕಾ

Updated on: Aug 13, 2026 | 2:24 PM

ಮುಖ್ಯಾಂಶಗಳು

  • ಬ್ಯಾಚುಲರ್ ಲೈಫ್‌ಗೆ ಗುಡ್‌ಬೈ ಹೇಳಿದ 'ರಾಜಾಹುಲಿ' ದೋಸ್ತ್
  • ಯಶ್‌ಗೆ ಚಿಕ್ಕಣ್ಣ ಮದುವೆ ಆಹ್ವಾನ
  • ಮೈಸೂರಿನಲ್ಲಿ ಆಗಸ್ಟ್ 29ಕ್ಕೆ ಕಲ್ಯಾಣ

ಕನ್ನಡ ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಹಾಗೂ ಹೀರೋ ಚಿಕ್ಕಣ್ಣ ಅವರು ತಮ್ಮ ಬ್ಯಾಚುಲರ್ ಲೈಫ್‌ಗೆ ಗುಡ್‌ಬೈ ಹೇಳಲು ಸಜ್ಜಾಗಿದ್ದಾರೆ. ಅವರು ಶೀಘ್ರವೇ ವಿವಾಹ ಆಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿಯನ್ನು ಭೇಟಿಯಾಗಿ ತಮ್ಮ ವಿವಾಹದ ಆಮಂತ್ರಣ ಪತ್ರಿಕೆಯನ್ನು ನೀಡಿದ್ದಾರೆ. ಬಹಳ ಕಷ್ಟಪಟ್ಟು ಚಿತ್ರರಂಗಕ್ಕೆ ಬಂದು ತಮ್ಮದೇ ಆದ ಪ್ರೇಕ್ಷಕ ವರ್ಗವನ್ನು ಸಂಪಾದಿಸಿರುವ ಚಿಕ್ಕಣ್ಣ, ‘ರಾಜಾಹುಲಿ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಯಶ್ ಜೊತೆ ಒಟ್ಟಾಗಿ ಅಭಿನಯಿಸಿದ್ದರು. ಇಬ್ಬರ ನಡುವಿನ ಆತ್ಮೀಯತೆ ಮತ್ತು ಸ್ನೇಹ ಈಗಲೂ ಹಾಗೆಯೇ ಮುಂದುವರಿದಿದೆ.

ಇದೇ ಬಾಂಧವ್ಯದಿಂದಾಗಿ ಚಿಕ್ಕಣ್ಣ ಅವರು ವೈಯಕ್ತಿಕವಾಗಿ ತೆರಳಿ ಯಶ್ ಹಾಗೂ ರಾಧಿಕಾ ದಂಪತಿಗೆ ಮದುವೆ ಆಹ್ವಾನ ನೀಡಿದ್ದಾರೆ. ಕೇವಲ ರಾಕಿಂಗ್ ಸ್ಟಾರ್ ದಂಪತಿ ಮಾತ್ರವಲ್ಲದೆ ರಾಜಕೀಯ ಹಾಗೂ ಚಲನಚಿತ್ರ ರಂಗದ ಹಲವು ಗಣ್ಯರಿಗೆ ಚಿಕ್ಕಣ್ಣ ಸೆಲೆಬ್ರಿಟಿಗಳಿಗೆ ಆಮಂತ್ರಣ ಪತ್ರಿಕೆ ತಲುಪಿಸುತ್ತಿದ್ದಾರೆ. ಚಿಕ್ಕಣ್ಣ ಅವರ ವಿವಾಹ ಮಹೋತ್ಸವವು ಮೈಸೂರಿನಲ್ಲಿ ಆಗಸ್ಟ್ 29 ಮತ್ತು 30 ರಂದು ಅದ್ದೂರಿಯಾಗಿ ನೆರವೇರಲಿದ್ದು, ಮದುವೆ ಸಂಭ್ರಮಕ್ಕೆ ತಯಾರಿಗಳು ಭರದಿಂದ ಸಾಗಿವೆ.

ಚಿಕ್ಕಣ್ಣ ಅವರು ಕೈಹಿಡಿಯಲಿರುವ ಹುಡುಗಿಯ ಹೆಸರು ಪಾವನಾ. ಇವರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿಯಾಗಿದ್ದು, ಇದು ಹಿರಿಯರು ನೋಡಿ ನಿಶ್ಚಯಿಸಿರುವ ಮದುವೆಯಾಗಿದೆ. ಸದ್ದಿಲ್ಲದೆ ಮದುವೆ ನಿಶ್ಚಯ ಕಾರ್ಯಕ್ರಮ ಹಾಗೂ ಹೂ ಮುಡಿಸುವ ಶಾಸ್ತ್ರವನ್ನು ಕುಟುಂಬಸ್ಥರು ಪೂರ್ಣಗೊಳಿಸಿದ್ದರು.

ಇದನ್ನೂ ಓದಿ: ಕಾಶಿಯಲ್ಲಿ ಮುಗಿಯಿತು ಚಿಕ್ಕಣ್ಣ ನಟನೆಯ ‘ಲಕ್ಷ್ಮಿಪುತ್ರ’ ಸಿನಿಮಾ ಕ್ಲೈಮ್ಯಾಕ್ಸ್ ಶೂಟಿಂಗ್

ಹಿಂದೆ ವಿವಿಧ ಟಾಕ್ ಶೋಗಳು ಹಾಗೂ ವೇದಿಕೆಗಳಲ್ಲಿ ತಮ್ಮ ಮದುವೆ ವಿಷಯ ಪ್ರಸ್ತಾಪವಾದಾಗಲೆಲ್ಲಾ ತಮಾಷೆ ಮಾಡುತ್ತಾ ಹಾರಿಕೆ ಉತ್ತರ ನೀಡುತ್ತಿದ್ದ ಚಿಕ್ಕಣ್ಣ, ಈಗ ಕೊನೆಗೂ ಗೃಹಸ್ಥಾಶ್ರಮಕ್ಕೆ ಕಾಲಿಡುತ್ತಿದ್ದಾರೆ. ದೀರ್ಘಕಾಲದ ಬ್ಯಾಚುಲರ್ ಲೈಫ್‌ಗೆ ವಿದಾಯ ಹೇಳಿ ಹೊಸ ಜೀವನಕ್ಕೆ ಹೆಜ್ಜೆ ಇಡುತ್ತಿರುವ ಚಿಕ್ಕಣ್ಣ ಹಾಗೂ ಪಾವನಾ ಜೋಡಿಗೆ ಅಭಿಮಾನಿಗಳು ಮತ್ತು ಚಿತ್ರರಂಗದ ಮಿತ್ರರು ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:13 pm, Thu, 13 August 26

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us