ನಟ ಚಿರಂಜೀವಿ (Chiranjeevi) ಅವರಿಗೆ ಈಗ 68 ವರ್ಷ ವಯಸ್ಸು. ಅವರು ಈಗಲೂ ಆ್ಯಕ್ಷನ್ ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಚಿರಂಜೀವಿ ಅವರು ಫಿಟ್ನೆಸ್ಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ. ಹೀಗಾಗಿ ಅವರು ವರ್ಕೌಟ್ ಮಾಡಲು ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ. ಈಗ ಅವರು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಭರ್ಜರಿ ವರ್ಕೌಟ್ ಮಾಡುತ್ತಿರುವುದು ಕಂಡು ಬಂದಿದೆ. ಅವರು ಇಷ್ಟೆಲ್ಲ ರೆಡಿ ಆಗುತ್ತಿರುವುದು ‘ವಿಶ್ವಂಬರ’ ಚಿತ್ರಕ್ಕಾಗಿ. ಈ ಫ್ಯಾಂಟಸಿ ಸಿನಿಮಾದಲ್ಲಿ ಅವರು ಮುಖ್ಯ ಪಾತ್ರ ಮಾಡುತ್ತಿದ್ದಾರೆ.
2023ರಲ್ಲಿ ಚಿರಂಜೀವಿ ನಟನೆಯ ‘ಭೋಲಾ ಶಂಕರ್’ ಸಿನಿಮಾ ರಿಲೀಸ್ ಆಯಿತು. ಆದರೆ, ಅಂದುಕೊಂಡ ರೀತಿಯಲ್ಲಿ ಸಿನಿಮಾ ಮೂಡಿ ಬರಲಿಲ್ಲ. ಈ ಚಿತ್ರ ಸಾಧಾರಣ ಗಳಿಕೆ ಮಾಡಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿತು. ಸೋಲನ್ನು ಮರೆತು ಚಿರಂಜೀವಿ ಹೊಸ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ವಸಿಷ್ಠ ನಿರ್ದೇಶನದ ಈ ಚಿತ್ರ ಚಿರಂಜೀವಿ ಅವರ 156ನೇ ಸಿನಿಮಾ ಅನ್ನೋದು ವಿಶೇಷ.
Gearing up .. And raring to go #Vishwambhara pic.twitter.com/VeUj0yhN35
— Chiranjeevi Konidela (@KChiruTweets) February 1, 2024
ಫ್ಯಾಂಟಸಿ ಸಿನಿಮಾ ಆಗಿರುವುದರಿಂದ ಪಾತ್ರ ಕೂಡ ಬೇರೆ ರೀತಿಯಲ್ಲೇ ಇರಲಿದೆ. ಅವರು ಹೊಸ ಅವತಾರ ತಾಳಲು ಬಾಡಿ ಬಿಲ್ಡ್ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕಾಗಿ ಚಿರಂಜೀವಿ ಅವರು ಸಖತ್ ವರ್ಕೌಟ್ ಮಾಡುತ್ತಿದ್ದಾರೆ. ನವೆಂಬರ್ 2023ರಲ್ಲಿ ಈ ಚಿತ್ರ ಸೆಟ್ಟೇರಿದೆ. ಈ ಚಿತ್ರಕ್ಕೆ ಆಸ್ಕರ್ ವಿಜೇತ ಎಂಎಂ ಕೀರವಾಣಿ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಈ ಚಿತ್ರದ ಬಜೆಟ್ 150 ಕೋಟಿ ರೂಪಾಯಿಗೂ ಅಧಿಕವಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಸಿನಿಮಾದಲ್ಲಿ ಯಾರೆಲ್ಲ ನಟಿಸುತ್ತಿದ್ದಾರೆ ಎನ್ನುವ ವಿಚಾರವನ್ನು ತಂಡ ಬಿಟ್ಟುಕೊಟ್ಟಿಲ್ಲ.
ಇದನ್ನೂ ಓದಿ: ರಾಮನಾಗಿ ಮಹೇಶ್ ಬಾಬು, ಹನುಮಂತನಾಗಿ ಚಿರಂಜೀವಿ? ಇದು ‘ಜೈ ಹನುಮಾನ್’ ಪ್ಲ್ಯಾನ್
ಇದಲ್ಲದೆ, ಬೋಯಪತಿ ಶ್ರೀನು ನಿರ್ದೇಶನ ಮಾಡುತ್ತಿರುವ ಚಿತ್ರದಲ್ಲೂ ಚಿರಂಜೀವಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆಯೂ ನಿರೀಕ್ಷೆ ಮೂಡಿದೆ. ಇತ್ತೀಚೆಗೆ ಚಿರಂಜೀವಿ ಅವರಿಗೆ ಪದ್ಮ ವಿಭೂಷಣ ಅವಾರ್ಡ್ ಸಿಕ್ಕಿದೆ. ಇದರಿಂದ ಅವರು ಖುಷಿಯಾಗಿದ್ದಾರೆ. ಸಿನಿಮಾ ರಂಗಕ್ಕೆ ಚಿರಂಜೀವಿ ನೀಡಿದ ಕೊಡುಗೆ ಆಧರಿಸಿ ಈ ಅವಾರ್ಡ್ ನೀಡಲಾಗಿದೆ. ಇದನ್ನು ಅವರ ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:05 am, Thu, 1 February 24