AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಸಮನ್ಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್, ವಿಜಯಲಕ್ಷ್ಮೀ

ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಾನೂನಿನ ಸಂಕಷ್ಟ ಎದುರಿಸುತ್ತಿರುವ ನಟ ದರ್ಶನ್ ಅವರು ಪಟ್ಟೆ ತಲೆ ಹೆಬ್ಬಾತುಗಳನ್ನು ಸಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಮೆಟ್ಟಿಲು ಏರಿದ್ದಾರೆ. ತಮಗೆ ನೀಡಿರುವ ಸಮನ್ಸ್ ರದ್ದುಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಸಮನ್ಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್, ವಿಜಯಲಕ್ಷ್ಮೀ
Darshan, VijayalakshmiImage Credit source: Instagram/viji.darshan
ರಮೇಶ್​ ಎಮ್​.
| Edited By: |

Updated on: Sep 09, 2026 | 4:58 PM

Share

ವನ್ಯಜೀವಿ ತಳಿಯ ಪಟ್ಟೆ ತಲೆ ಹೆಬ್ಬಾತುಗಳನ್ನು ಸಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ನ್ಯಾಯಾಲಯ ನೀಡಿದ್ದ ಸಮನ್ಸ್ ಪ್ರಶ್ನಿಸಿ ನಟ ದರ್ಶನ್, ಅವರ ಪತ್ನಿ ವಿಜಯಲಕ್ಷ್ಮೀ ಹಾಗೂ ಫಾರ್ಮ್‌ಹೌಸ್ ಮ್ಯಾನೇಜರ್ ನಾಗರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಾಲಯ ನೀಡಿದ ಸಮನ್ಸ್ ಹಾಗೂ ತಮ್ಮ ವಿರುದ್ಧದ ವನ್ಯಜೀವಿ ಕಾಯ್ದೆಯಡಿಯ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ದರ್ಶನ್ ಮತ್ತು ತಂಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಪ್ರಕರಣದ ಹಿನ್ನೆಲೆ:

2023ರ ಜನವರಿ 21ರಂದು ಅರಣ್ಯಾಧಿಕಾರಿಗಳು ನಟ ದರ್ಶನ್ ಅವರಿಗೆ ಸೇರಿದ ಫಾರ್ಮ್‌ಹೌಸ್ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಸಂರಕ್ಷಿತ ವ್ಯಾಪ್ತಿಗೆ ಬರುವ 4 ಪಟ್ಟೆ ತಲೆ ಹೆಬ್ಬಾತುಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಟಿ. ನರಸೀಪುರ ಕೋರ್ಟ್‌ಗೆ ಖಾಸಗಿ ದೂರು ದಾಖಲಿಸಿದ್ದರು.

ವಿಚಾರಣೆ ನಡೆಸಿದ ಟಿ. ನರಸೀಪುರ ನ್ಯಾಯಾಲಯವು ದರ್ಶನ್, ವಿಜಯಲಕ್ಷ್ಮೀ ಹಾಗೂ ನಾಗರಾಜ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಅದನ್ನು ಪ್ರಶ್ನಿಸಿ ಈ ಮೂವರು ಈಗ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಫಾರ್ಮ್‌ಹೌಸ್‌ನಲ್ಲಿ ಕಾಣಿಸಿಕೊಂಡ ಪಟ್ಟೆ ತಲೆ ಹೆಬ್ಬಾತುಗಳ ಬಗ್ಗೆ ಅರ್ಜಿಯಲ್ಲಿ ವಿವರ ನೀಡಲಾಗಿದೆ.

ಇದನ್ನೂ ಓದಿ: ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು

ಅರ್ಜಿಯಲ್ಲಿ ಏನಿದೆ?

‘ಫಾರ್ಮ್‌ಹೌಸ್‌ನಲ್ಲಿ ಬೇರೆ ಬೇರೆ ಜಾತಿಯ ಪಕ್ಷಿಗಳಿದ್ದವು. ಆ ಪಕ್ಷಿಗಳೊಂದಿಗೆ ಈ 4 ಪಟ್ಟೆ ತಲೆ ಹೆಬ್ಬಾತುಗಳು ಹೇಗೋ ಬಂದು ಸೇರಿಕೊಂಡಿದ್ದವು. ಅರಣ್ಯಾಧಿಕಾರಿಗಳು ತಪಾಸಣೆ ನಡೆಸಿದ ನಂತರವಷ್ಟೇ ಈ ವಿಷಯ ನಮಗೆ ತಿಳಿಯಿತು. ನಾವು ಆ ಪಕ್ಷಿಗಳನ್ನು ಸಾಕಿರಲಿಲ್ಲ’ ಎಂದು ಅರ್ಜಿಯಲ್ಲಿ ಸ್ಪಷ್ಟನೆ ನೀಡಲಾಗಿದೆ. ಅಲ್ಲದೆ, ವಿಜಯಲಕ್ಷ್ಮೀ ಅವರು ಫಾರ್ಮ್‌ಹೌಸ್‌ಗೆ ಭೇಟಿ ನೀಡುವುದಿಲ್ಲ ಹಾಗೂ ದರ್ಶನ್ ಕೂಡ ಅಪರೂಪಕ್ಕೊಮ್ಮೆ ಮಾತ್ರ ಭೇಟಿ ನೀಡುತ್ತಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ