AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pavithra Gowda Detained: ನಟ ದರ್ಶನ್ ಗೆಳತಿ ಪವಿತ್ರಾಗೌಡ ಪೊಲೀಸರ ವಶಕ್ಕೆ

ಪವಿತ್ರ ಗೌಡ ಪೊಲೀಸ್​ ವಶಕ್ಕೆ: ಬೆಂಗಳೂರಿನಲ್ಲಿ ನಟ ದರ್ಶನ್ ಗೆಳತಿ ಪವಿತ್ರಾಗೌಡರನ್ನು ಆರ್​​.ಆರ್​.ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ನಟ ದರ್ಶನ್ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದರೆ.

Pavithra Gowda Detained: ನಟ ದರ್ಶನ್ ಗೆಳತಿ ಪವಿತ್ರಾಗೌಡ ಪೊಲೀಸರ ವಶಕ್ಕೆ
ನಟ ದರ್ಶನ್, ಗೆಳತಿ ಪವಿತ್ರಾಗೌಡ
Follow us
Mangala RR
| Updated By: ಆಯೇಷಾ ಬಾನು

Updated on:Jun 11, 2024 | 11:39 AM

ಬೆಂಗಳೂರು, ಜೂನ್.11: ಕೊಲೆ ಪ್ರಕರಣದಲ್ಲಿ ಪೊಲೀಸರು ನಟ ದರ್ಶನ್ (Darshan Thoogudeepa) ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಬೆಳವಣಿಗೆ ನಡೆದಿದೆ. ಬೆಂಗಳೂರಿನಲ್ಲಿ ನಟ ದರ್ಶನ್ ಗೆಳತಿ ಪವಿತ್ರಾಗೌಡರನ್ನು (Pavithra Gowda) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರ್​​.ಆರ್​.ನಗರ ಠಾಣೆಯ ಪೊಲೀಸರು ಪವಿತ್ರಾಗೌಡಳನ್ನು ವಶಕ್ಕೆ ಪಡೆದಿದ್ದಾರೆ.

ಪವಿತ್ರಾಗೌಡಳನ್ನು ಕಾಮಾಕ್ಷಿ ಪಾಳ್ಯ‌ ಸ್ಟೇಷನ್​ಗೆ ಕರೆ ತಂದ ಪೊಲೀಸ್

ಪವಿತ್ರಾಗೌಡಳನ್ನು ವಶಕ್ಕೆ ಪಡೆದ ಆರ್.ಆರ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಮಾರ್ಕಂಡಯ್ಯ ಅವರು ಕಾಮಾಕ್ಷಿ ಪಾಳ್ಯ‌ ಪೊಲೀಸ್ ಸ್ಟೇಷನ್ ಗೆ ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ ಜೊತೆ ಅವರ ಅಕ್ಕ ಕೂಡ ಠಾಣೆಗೆ ಆಗಮಿಸಿದ್ದಾರೆ.

ಈ ಕೊಲೆ ಪ್ರಕರಣದಲ್ಲಿ​​ ನಟ ದರ್ಶನ್​ ಸೇರಿದಂತೆ 10 ಜನರನ್ನು ವಿಜಯನಗರ ಎಸಿಪಿ ಚಂದನ್​ ತಂಡ ಬಂಧಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಮೈಸೂರಿನ ಱಡಿಸನ್​ ಹೋಟೆಲ್​ನಲ್ಲಿ ದರ್ಶನ್​ ಅರೆಸ್ಟ್ ಮಾಡಲಾಗಿದ್ದು ನಟ ದರ್ಶನ್ ಸೇರಿದಂತೆ ಪಟ್ಟಣಗೆರೆ ಜಯಣ್ಣ ಪುತ್ರ ವಿನಯ್​, ಕಿರಣ್, ಮಧು, ಲಕ್ಷ್ಮಣ್​, ಆನಂದ್​​, ರಾಘವೇಂದ್ರ ಸೇರಿ 10 ಜನರನ್ನು ಅರೆಸ್ಟ್ ಮಾಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದರ್ಶನ್ ಗೆಳತಿ ಪವಿತ್ರಾಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನ: ಪೊಲೀಸ್ ಆಯುಕ್ತ ನೀಡಿದ ಮಾಹಿತಿ

ಮೈಸೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಡಿಸಿಪಿ ಗಿರೀಶ್, ಎಸಿಪಿ ಚಂದನ್​ರಿಂದ ನಟ ದರ್ಶನ್​ ವಿಚಾರಣೆ ನಡೆಯುತ್ತಿದೆ. ಅನ್ನಪೂರ್ಣೇಶ್ವರಿನಗರ ಠಾಣೆ ಬಳಿ ಕೆಎಸ್​ಆರ್​ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಕೊಲೆಯಾದ ರೇಣುಕಾಸ್ವಾಮಿ ದರ್ಶನ್ ಅಭಿಮಾನಿ

ಇನ್ನು ಅಚ್ಚರಿ ಎಂದರೆ ಕೊಲೆಯಾದ ರೇಣುಕಾಸ್ವಾಮಿ ದರ್ಶನ್ ಅಭಿಮಾನಿ ಎಂಬ ಮಾಹಿತಿ ಸಿಕ್ಕಿದೆ. ದರ್ಶನ್, ವಿಜಯಲಕ್ಷ್ಮೀ ಸಂಸಾರ ಬಗ್ಗೆ ಯೋಚನೆ ಮಾಡ್ತಿದ್ದ ಸ್ವಾಮಿ, ದಂಪತಿ ಸಂಸಾರದಲ್ಲಿ ಪವಿತ್ರಾಗೌಡ ಬರುತ್ತಿದ್ದಾಳೆಂದು ತಿಳಿದು ಮೆಸೇಜ್ ಮಾಡಿದ್ದ. ಪವಿತ್ರಾಗೌಡಗೆ ಮೆಸೇಜ್ ಮಾಡುತ್ತಿರುವುದನ್ನು ತಿಳಿದ ಬಳಿಕ ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:26 am, Tue, 11 June 24

ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ
ಅಕ್ಕಿ ಸಾಗಿಸುತ್ತಿದ್ದ ಸರಕು ಸಾಗಣೆ ವಾಹನದಲ್ಲಿ 41 ಮೂಟೆಗಳು ಪತ್ತೆ
ಅಕ್ಕಿ ಸಾಗಿಸುತ್ತಿದ್ದ ಸರಕು ಸಾಗಣೆ ವಾಹನದಲ್ಲಿ 41 ಮೂಟೆಗಳು ಪತ್ತೆ