‘ಬ್ಯಾಡ್ ಮ್ಯಾನರ್ಸ್’ ಟ್ರೈಲರ್ ಬಿಡುಗಡೆ ಮಾಡಲಿರುವ ದರ್ಶನ್: ಲೈವ್ ಇಲ್ಲಿ ನೋಡಿ
Bad Manners: ಅಭಿಷೇಕ್ ಅಂಬರೀಶ್ ನಟಿಸಿ, ದುನಿಯಾ ಸೂರಿ ನಿರ್ದೇಶನ ಮಾಡಿರುವ 'ಬ್ಯಾಡ್ ಮ್ಯಾನರ್ಸ್' ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಟ್ರೈಲರ್ ಅನ್ನು ನಟ ದರ್ಶನ್ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದ ಲೈವ್ ಇಲ್ಲಿ ವೀಕ್ಷಿಸಿ.
ಅಭಿಷೇಕ್ ಅಂಬರೀಶ್ (Abhishek Ambareesh) ನಟನೆಯ ‘ಬ್ಯಾಡ್ ಮ್ಯಾನರ್ಸ್‘ (Bad Manners) ಸಿನಿಮಾ ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ದುನಿಯಾ ಸೂರಿ ನಿರ್ದೇಶನ ಮಾಡಿ, ಅಭಿಷೇಕ್ ಅಂಬರೀಶ್ ನಟಿಸಿರುವ ಈ ಸಿನಿಮಾದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಸಿನಿಮಾವನ್ನು ಅದ್ಧೂರಿಯಾಗಿ ತೆರೆಗೆ ತರಲು ನಿರ್ಮಾಪಕರು ಹಾಗೂ ವಿತರಣೆ ಹಕ್ಕು ಖರೀದಿ ಮಾಡಿರುವ ಜಯಣ್ಣ ಫಿಲ್ಮ್ಸ್ ಯೋಜನೆ ಹಾಕಿಕೊಂಡಿದ್ದಾರೆ. ಸಿನಿಮಾದ ಪ್ರಚಾರವನ್ನೂ ಅದ್ಧೂರಿಯಾಗಿ ಆರಂಭವಾಗಿದೆ. ಇಂದು ಬೆಂಗಳೂರಿನ ಮಾಗಡಿ ರಸ್ತೆಯ ಜಿಟಿ ಮಾಲ್ನಲ್ಲಿ ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಡೆಯುತ್ತಿದ್ದು, ನಟ ದರ್ಶನ್, ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದ ಲೈವ್ ಅನ್ನು ಇಲ್ಲಿ ವೀಕ್ಷಿಸಿ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos