ಒಂದು ಕೋಟಿ ರೂಪಾಯಿ ದೇಣಿಗೆಯನ್ನು ಕಾರ್ತಿ ಕೈಗೆ ನೀಡಿದ ನಟ ಧನುಷ್
ಅನೇಕ ವರ್ಷಗಳಿಂದ ನಟ ಧನುಷ್ ಅವರು ಚಿತ್ರರಂಗದಲ್ಲಿ ಹೀರೋ ಆಗಿ ಮಿಂಚುತ್ತಿದ್ದಾರೆ. ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುವ ಅವರು, ಸಾಮಾಜಿಕ ಕೆಲಸಗಳನ್ನು ಮಾಡುವ ಮೂಲಕವೂ ಜನಮನ ಗೆದ್ದಿದ್ದಾರೆ. ಈಗ ಅವರು 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಧನುಷ್ ಅವರ ಈ ಕಾರ್ಯಕ್ಕೆ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಭೇಷ್ ಎಂದಿದ್ದಾರೆ.
ತಮಿಳಿನ ಖ್ಯಾತ ನಟ ಧನುಷ್ (Dhanush) ಅವರು ಹಲವು ಕಾರಣದಿಂದ ಸುದ್ದಿ ಆಗುತ್ತಿದ್ದಾರೆ. ಈಗ ಅವರು ಬರೋಬ್ಬರಿ 1 ಕೋಟಿ ರೂಪಾಯಿ ದಾನ ಮಾಡಿದ್ದಾರೆ. ಕಾಲಿವುಡ್ ನಟ ಕಾರ್ತಿ (Karthi) ಕೈಗೆ ಧನುಷ್ ಅವರು ಒಂದು ಕೋಟಿ ರೂಪಾಯಿಯ ಚೆಕ್ ನೀಡಿದ್ದಾರೆ. ಅಷ್ಟಕ್ಕೂ ಧನುಷ್ ಅವರು ಇಷ್ಟು ದೊಡ್ಡ ಮೊತ್ತವನ್ನು ನೀಡಿದ್ದು ಯಾಕೆ? ಕಲಾವಿದರಿಗೋಸ್ಕರ! ಹೌದು, ಕಲಾವಿದರ ಸಂಘದ (Nadigar Sangam) ಹೊಸ ಕಟ್ಟಡ ನಿರ್ಮಾಣದ ಸಲುವಾಗಿ ಅವರು 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಅವರಿಗೆ ಸಂಘದ ಕಡೆಯಿಂದ ಧನ್ಯವಾದ ತಿಳಿಸಲಾಗಿದೆ.
ಧನುಷ್ ಅವರು ಅನೇಕ ವರ್ಷಗಳಿಂದ ಚಿತ್ರರಂಗದಲ್ಲಿ ಸ್ಟಾರ್ ನಟನಾಗಿ ಮಿಂಚುತ್ತಿದ್ದಾರೆ. ಪ್ರತಿ ಸಿನಿಮಾಗೆ ಅವರು ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಸಾಮಾಜಿಕ ಕೆಲಸ ಮಾಡುವಲ್ಲಿಯೂ ಅವರು ಹಿಂದೆ ಬಿದ್ದಿಲ್ಲ. ಅದಕ್ಕೆ ಸಾಕ್ಷಿ ಎಂಬಂತೆ ಅವರು ಈಗ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಅವರ ಈ ಕೆಲಸಕ್ಕೆ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸಿದ್ದಾರೆ.
ಚೆನ್ನೈನಲ್ಲಿ ಇರುವ ದಕ್ಷಿಣ ಭಾರತ ಕಲಾವಿದರ ಸಂಘಕ್ಕೆ ಹೊಸ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಅದಕ್ಕಾಗಿ ದೇಣಿಗೆ ಸಂಗ್ರಹಿಸಲಾಗುತ್ತಿದೆ. ಸಂಘದ ಅಧ್ಯಕ್ಷ ನಾಸರ್, ಖಜಾಂಚಿ ಕಾರ್ತಿ ಅವರಿಗೆ ಧನುಷ್ ಚೆಕ್ ನೀಡಿದ್ದಾರೆ. ಈ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಟ್ರೇಡ್ ವಿಶ್ಲೇಷಕ ರಮೇಶ್ ಬಾಲಾ ಅವರು ಈ ವಿಚಾರವನ್ನು ಎಕ್ಸ್ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ಧನುಷ್ ಪುತ್ರನನ್ನು ಹುಡುಕಿಕೊಂಡು ಬಂದ ಪೊಲೀಸರು; ರಜನಿ ಮೊಮ್ಮಗ ಯಾತ್ರಾ ಮಾಡಿದ ತಪ್ಪು ಏನು?
ಈ ಮೊದಲು ಕಮಲ್ ಹಾಸನ್, ದಳಪತಿ ವಿಜಯ್ ಅವರು ಕೂಡ ಕಲಾವಿದರ ಸಂಘಕ್ಕೆ ತಲಾ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದರು. ಸಂಘದ ಮುಖ್ಯ ಕಾರ್ಯದರ್ಶಿ ಆಗಿರುವ ವಿಶಾಲ್ ಅವರು ಈ ವರ್ಷ ಮಾರ್ಚ್ನಲ್ಲಿ ಕಮಲ್ ಹಾಸನ್ ಮತ್ತು ದಳಪತಿ ವಿಜಯ್ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಧನ್ಯವಾದ ಅರ್ಪಿಸಿದ್ದರು. ಅನೇಕ ಸೆಲೆಬ್ರಿಟಿಗಳು ತಮ್ಮ ಕೈಲಾದ ದೇಣಿಗೆ ನೀಡುತ್ತಿದ್ದಾರೆ.
South Indian Artistes’ Association member – Actor Dhanush donated a sum of rupees 1,00,00,000/- (1Crore) from his personal fund towards the construction of New Nadigar Sangam Building. He presented the cheque to SIAA President Thiru. Nassar, Treasurer Thiru. Karthi, and… pic.twitter.com/IO4qHZWxUj
— Ramesh Bala (@rameshlaus) May 13, 2024
ಸಿನಿಮಾ ವಿಚಾರಕ್ಕೆ ಬರುವುದಾದರೆ, ಧನುಷ್ ಅವರು ನಟಿಸಿದ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾ ಕಳೆದ ವರ್ಷ ಬಿಡುಗಡೆಯಾಗಿ ಸೋತಿತು. ಈಗ ಅವರು ‘ಕುಬೇರ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಕೂಡ ನಟಿಸುತ್ತಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಇದಲ್ಲದೇ ‘ರಾಯನ್’ ಚಿತ್ರಕ್ಕೆ ಧನುಷ್ ಅವರು ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯ ಪಾತ್ರ ನಿಭಾಯಿಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.