Dhanush: ಮಾಜಿ ಪತ್ನಿಯ ಚಿತ್ರಕ್ಕೆ ವಿಶ್ ಮಾಡಿದ ತಮಿಳು ನಟ ಧನುಷ್; ಆದರೆ…

ಹಿಂದೂ ಹಾಗೂ ಮುಸ್ಲಿಂ ಧರ್ಮಗಳ ನಡುವೆ ನಡೆಯುವ ಘರ್ಷಣೆ ಮತ್ತು ಸಾಮರಸ್ಯದ ಕಥೆಯನ್ನು ‘ಲಾಲ್​ ಸಲಾಂ’ ಚಿತ್ರ ಹೇಳಲಿದೆ. ಈ ಬಗ್ಗೆ ಟ್ರೇಲರ್​ನಲ್ಲಿ ಸುಳಿವು ನೀಡಲಾಗಿದೆ. ‘ಎಲ್ಲ ದೇವರೂ ಒಂದೇ’ ಎನ್ನುವ ಡೈಲಾಗ್ ಟ್ರೇಲರ್​ನಲ್ಲಿ ಹೈಲೈಟ್ ಆಗಿದೆ. ಈ ಚಿತ್ರಕ್ಕೆ ಧನುಷ್ ವಿಶ್ ಮಾಡಿದ್ದಾರೆ.

Dhanush: ಮಾಜಿ ಪತ್ನಿಯ ಚಿತ್ರಕ್ಕೆ ವಿಶ್ ಮಾಡಿದ ತಮಿಳು ನಟ ಧನುಷ್; ಆದರೆ...
ರಜನಿ-ಐಶ್ವರ್ಯಾ-ಧನುಷ್
Follow us
ರಾಜೇಶ್ ದುಗ್ಗುಮನೆ
|

Updated on: Feb 07, 2024 | 11:08 AM

ನಟ ಧನುಷ್ (Dhanush) ಹಾಗೂ ರಜನಿಕಾಂತ್ ಮಗಳು ಐಶ್ವರ್ಯಾ ಹಲವು ವರ್ಷಗಳ ಕಾಲ ಸುಖವಾಗಿ ಸಂಸಾರ ನಡೆಸಿದ್ದರು. ನಂತರ ಇಬ್ಬರೂ ಬೇರೆ ಆಗುವ ನಿರ್ಧಾರಕ್ಕೆ ಬಂದರು. ಇಬ್ಬರೂ ವಿಚ್ಛೇದನ ಪಡೆದಿದ್ದಾರೆ. ಡಿವೋರ್ಸ್ ಪಡೆದ ಬಳಿಕ ಒಬ್ಬರ ಮುಖವನ್ನು ಒಬ್ಬರು ನೋಡಿಕೊಳ್ಳುತ್ತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳನ್ನು ಹೇಳಿಕೊಳ್ಳುತ್ತಿಲ್ಲ. ಈಗಲೂ ಅದು ಮುಂದುವರಿದಿದೆ. ರಜನಿಕಾಂತ್ ನಟಿಸಿದ್ದಾರೆ ಎನ್ನುವ ಕಾರಣಕ್ಕೆ ‘ಲಾಲ್ ಸಲಾಂ’ ಚಿತ್ರಕ್ಕೆ ಧನುಷ್ ಶುಭಾಶಯ ಕೋರಿದ್ದಾರೆ. ಆದರೆ, ಎಲ್ಲಿಯೂ ಅವರು ಪತ್ನಿಯ ಹೆಸರನ್ನು ಉಲ್ಲೇಖ ಮಾಡಿಲ್ಲ.

ಐಶ್ವರ್ಯಾ ರಜನಿಕಾಂತ್ ‘ಲಾಲ್ ಸಲಾಂ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ರಜನಿಕಾಂತ್ ಒಂದು ಪ್ರಮುಖ ಅತಿಥಿ ಪಾತ್ರ ಮಾಡುತ್ತಿದ್ದಾರೆ. ವಿಷ್ಣು ವಿಶಾಲ್, ವಿಕ್ರಾಂತ್, ಧನ್ಯಾ ಬಾಲಕೃಷ್ಣನ್, ವಿವೇಕ್ ಪ್ರಸನ್ನ, ಕೆಎಸ್ ರವಿ ಕುಮಾರ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿದೆ. ಈ ಟ್ರೇಲರ್​ನ ಧನುಷ್ ಹಂಚಿಕೊಂಡು ತಂಡಕ್ಕೆ ಶುಭಕೋರಿದ್ದಾರೆ.

ಇದನ್ನೂ ಓದಿ: ಧನುಷ್​ ಪುತ್ರನನ್ನು ಹುಡುಕಿಕೊಂಡು ಬಂದ ಪೊಲೀಸರು; ರಜನಿ ಮೊಮ್ಮಗ ಯಾತ್ರಾ ಮಾಡಿದ ತಪ್ಪು ಏನು?

‘ತಂಡಕ್ಕೆ ನನ್ನ ಶುಭ ಹಾರೈಕೆ. ಒಳ್ಳೆಯದಾಗಲಿ’ ಎಂದಿರುವ ಧನುಷ್, ‘ಸೂಪರ್​ಸ್ಟಾರ್’ ಹ್ಯಾಶ್​ಟ್ಯಾಗ್ ಹಾಕಿದ್ದಾರೆ. ಆದರೆ, ಅವರು ಎಲ್ಲಿಯೂ ಐಶ್ವರ್ಯಾ ಹೆಸರನ್ನು ಉಲ್ಲೇಖ ಮಾಡಿಲ್ಲ. ಅವರನ್ನು ಟ್ಯಾಗ್ ಕೂಡ ಮಾಡಿಲ್ಲ. ಇದನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ. ಪತ್ನಿ ಸಿನಿಮಾಗೆ ಶುಭಕೋರಿದ ಮೇಲೆ ಅವರ ಪತ್ನಿಯ ಹೆಸರನ್ನು ಉಲ್ಲೇಖ ಮಾಡಲು ಏನು ಸಮಸ್ಯೆ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

‘ಲಾಲ್​ ಸಲಾಂ’ ಸಿನಿಮಾ ಹಿಂದೂ ಹಾಗೂ ಮುಸ್ಲಿಂ ಧರ್ಮಗಳ ನಡುವೆ ನಡೆಯುವ ಘರ್ಷಣೆ ಮತ್ತು ಸಾಮರಸ್ಯದ ಕಥೆಯನ್ನು ಹೇಳಲಿದೆ. ಈ ಬಗ್ಗೆ ಟ್ರೇಲರ್​ನಲ್ಲಿ ಸುಳಿವು ನೀಡಲಾಗಿದೆ. ‘ಎಲ್ಲ ದೇವರೂ ಒಂದೇ’ ಎನ್ನುವ ಡೈಲಾಗ್ ಟ್ರೇಲರ್​ನಲ್ಲಿ ಹೈಲೈಟ್ ಆಗಿದೆ. ಸಿನಿಮಾದಲ್ಲಿ ಆ್ಯಕ್ಷನ್ ಕೂಡ ಇದೆ. ‘ಲಾಲ್ ಸಲಾಂ’ ಚಿತ್ರಕ್ಕೆ ಎ.ಆರ್​. ರೆಹಮಾನ್​ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಸಿನಿಮಾ ನಿರೀಕ್ಷೆ ಬಗ್ಗೆ ಮೂಡಿದೆ. ಟ್ರೇಲರ್​ ಬಿಡುಗಡೆ ಬಳಿಕ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಫೆಬ್ರವರಿ 9ರಂದು ಈ ಚಿತ್ರ ರಿಲೀಸ್ ಆಗಲಿದೆ. ರೆಹಮಾನ್ ಅವರು ಸಿನಿಮಾ ಬಗ್ಗೆ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ