AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ ಹಾದಿಯಲ್ಲಿ ಧನುಷ್; ರಾಜಕೀಯ ಪ್ರವೇಶದ ಸುಳಿವು ನೀಡಿದ ನಟ

Dhanush Flag: ಕಾಲಿವುಡ್ ಸ್ಟಾರ್ ನಟ ಧನುಷ್ ತಮ್ಮ ಅಭಿಮಾನಿ ಸಂಘದ ಕಾರ್ಯಕ್ರಮದಲ್ಲಿ ಸಮಾಜ ಸೇವೆಗೆ ಕರೆ ನೀಡಿದ್ದಾರೆ. ಅಭಿಮಾನಿ ಸಂಘದ ಹೊಸ ಧ್ವಜ ಅನಾವರಣಗೊಳಿಸಿದ್ದಾರೆ ಅನ್ನೋದು ವಿಶೇಷ.  ಇದು ಮುಖ್ಯಮಂತ್ರಿ ವಿಜಯ್ ಹಾದಿಯಲ್ಲೇ ಧನುಷ್ ರಾಜಕೀಯಕ್ಕೆ ಬರುವ ಮುನ್ಸೂಚನೆ ಎಂದು ಚರ್ಚೆಯಾಗುತ್ತಿದೆ.

ದಳಪತಿ ವಿಜಯ್ ಹಾದಿಯಲ್ಲಿ ಧನುಷ್; ರಾಜಕೀಯ ಪ್ರವೇಶದ ಸುಳಿವು ನೀಡಿದ ನಟ
ವಿಜಯ್ ಹಾಗೂ ಧನುಷ್
ರಾಜೇಶ್ ದುಗ್ಗುಮನೆ
|

Updated on:Jul 27, 2026 | 2:57 PM

Share

ಮುಖ್ಯಾಂಶಗಳು

  • ಸಿನಿಮಾ ಬಿಟ್ಟು ಸಮಾಜ ಸೇವೆಗೆ ಮುಂದಾಗಿ ಎಂದ ಧನುಷ್
  • ಅಭಿಮಾನಿಗಳಿಗೆ ನಟ ಧನುಷ್ ನೀಡಿದ ಕರೆಗೆ ಎಲ್ಲರಲ್ಲೂ ಅಚ್ಚರಿ
  • ಅಭಿಮಾನಿ ಸಂಘದ ಹೊಸ ಧ್ವಜ ಹಾರಿಸಿದ ಧನುಷ್

ದಳಪತಿ ವಿಜಯ್ ಬಳಿಕ ತಮಿಳು ಚಿತ್ರರಂಗದ ಸ್ಟಾರ್ ನಟ ಧನುಷ್ ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ? ಇಂತಹದೊಂದು ಹೊಸ ಚರ್ಚೆ ಈಗ ಕಾಲಿವುಡ್ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿದೆ. ಭಾನುವಾರ ಚೆನ್ನೈನಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಅಭಿಮಾನಿಗಳನ್ನು ಉದ್ದೇಶಿಸಿ ಅವರು ಆಡಿದ ಮಾತುಗಳು ಈ ಅನುಮಾನಕ್ಕೆ ಕಾರಣವಾಗಿವೆ. ಕೇವಲ ಸಿನಿಮಾ ಅಷ್ಟೇ ಅಲ್ಲದೆ ಸಮಾಜ ಸೇವೆಗೆ ಒಟ್ಟಾಗುವಂತೆ ಧನುಷ್ ಕರೆ ನೀಡಿದ್ದಾರೆ. ಇದು ಅವರ ರಾಜಕೀಯ ಪ್ರವೇಶದ ಮುನ್ಸೂಚನೆ ಎನ್ನಲಾಗುತ್ತಿದೆ.

ಅಭಿಮಾನಿಗಳ ಶಕ್ತಿಗೆ ಹೊಸ ಉದ್ದೇಶ:

ಚೆನ್ನೈನಲ್ಲಿ ಧನುಷ್ ಅಭಿಮಾನಿ ಸಂಘ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರಕ್ಕೆ ಭಾರಿ ಜನಸಾಗರ ಹರಿದುಬಂದಿತ್ತು. ಈ ವೇದಿಕೆಯಲ್ಲಿ ಮಾತನಾಡಿದ ಧನುಷ್ ಅವರು ಅಭಿಮಾನಿ ಬಳಗದ ಒಗ್ಗಟ್ಟನ್ನು ಶ್ಲಾಘಿಸಿದರು. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನರು ಒಂದೆಡೆ ಸೇರಿರುವುದರ ಹಿಂದೆ ದೊಡ್ಡ ಶಕ್ತಿ ಇದೆ ಎಂದರು. ಈ ಒಗ್ಗಟ್ಟಿಗೆ ಸಿನಿಮಾ ಮೀರಿದ ಒಂದು ದೊಡ್ಡ ಉದ್ದೇಶ ಸಿಗಬೇಕು ಎಂದು ಅವರು ಆಶಯ ವ್ಯಕ್ತಪಡಿಸಿದರು.

ಹೆಚ್ಚಿನ ಸಮಾಜ ಸೇವೆಗೆ ಧನುಷ್ ಕರೆ:

ಕೇವಲ ಸಿನಿಮಾಗಳ ಆಡಿಯೋ ಲಾಂಚ್ ಹಾಗೂ ಅಭಿಮಾನಿಗಳ ಭೇಟಿಗೆ ಮಾತ್ರ ಸೀಮಿತವಾಗಬೇಡಿ ಎಂದು ಧನುಷ್ ತಿಳಿಸಿದರು. ನಿಮ್ಮ ಸುತ್ತಮುತ್ತಲಿನ ಜನರ ಕಷ್ಟಗಳಿಗೆ ಸ್ಪಂದಿಸಿ ಎಂದರು. ಸ್ಥಳೀಯ ಪ್ರದೇಶಗಳ ಜನರ ಅಗತ್ಯಗಳನ್ನು ಅರ್ಥಮಾಡಿಕೊಳ್ಳಿ ಎಂದು ಕರೆ ನೀಡಿದರು. ಜನರಿಗೆ ಸಾಧ್ಯವಾದಷ್ಟು ಸಹಾಯ ಮಾಡಲು ಅಭಿಮಾನಿಗಳಿಗೆ ಸೂಚಿಸಿದರು. ಇದೇ ಕಾರ್ಯಕ್ರಮದಲ್ಲಿ ಧನುಷ್ ಅವರು ತಮ್ಮ ಅಭಿಮಾನಿ ಸಂಘದ ಹೊಸ ಧ್ವಜವನ್ನು ಅನಾವರಣಗೊಳಿಸಿದರು. ಇದು ಸದ್ಯ ತಮಿಳುನಾಡಿನಲ್ಲಿ ಭಾರಿ ಕುತೂಹಲ ಮೂಡಿಸಿದೆ.

ದಳಪತಿ ವಿಜಯ್ ಹಾದಿ ನೆನಪಿಸಿದ ಧನುಷ್:

ಧನುಷ್ ಅವರ ಈ ನಡೆ ತಮಿಳುನಾಡಿನ ಇಂದಿನ ಮುಖ್ಯಮಂತ್ರಿ ದಳಪತಿ ವಿಜಯ್ ಅವರ ಆರಂಭದ ದಿನಗಳನ್ನು ನೆನಪಿಸುತ್ತಿದೆ. ವಿಜಯ್ ಕೂಡ ತಮ್ಮ ರಾಜಕೀಯ ಪಕ್ಷ ‘ತಮಿಳಗ ವೆಟ್ರಿ ಕಳಗಂ’ ಸ್ಥಾಪಿಸುವ ಮುನ್ನ ಇದೇ ರೀತಿ ಅಭಿಮಾನಿ ಸಂಘಗಳ ಮೂಲಕ ತಳಮಟ್ಟದಲ್ಲಿ ಸಮಾಜ ಸೇವೆ ಮಾಡಿದ್ದರು. ಅದೇ ಹಾದಿಯನ್ನು ಧನುಷ್ ತುಳಿಯುತ್ತಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ತಮಿಳುನಾಡಿಗೆ ಧನುಷ್ ಅವರಂತಹ ಸುಶಿಕ್ಷಿತ ಹಾಗೂ ಧೈರ್ಯವಂತ ನಾಯಕರ ಅಗತ್ಯವಿದೆ ಎಂದು ಫ್ಯಾನ್ಸ್ ಅಭಿಪ್ರಾಯಪಡುತ್ತಿದ್ದಾರೆ. ಧನುಷ್ 2031ರ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಸಾಮಾಜಿಕ ಕಳಕಳಿಯ ಸಿನಿಮಾ

ನಟ ಧನುಷ್ ಅವರು ಇತ್ತೀಚಿನ ವರ್ಷಗಳಲ್ಲಿ ಕೇವಲ ಕಮರ್ಷಿಯಲ್ ಸಿನಿಮಾಗಳಿಗೆ ಸೀಮಿತವಾಗದೆ, ಸಮಾಜದಲ್ಲಿನ ತಾರತಮ್ಯ, ಶೋಷಣೆ ಮತ್ತು ಕೆಳವರ್ಗದ ಜನರ ಹಕ್ಕುಗಳನ್ನು ಪ್ರತಿಪಾದಿಸುವಂತಹ ಗಂಭೀರ ಕಥಾಹಂದರ ಹೊಂದಿರುವ ಚಿತ್ರಗಳನ್ನು ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ರಾಷ್ಟ್ರ ಪ್ರಶಸ್ತಿ ವಿವಾದ; ಇನ್ನೂ ಉತ್ತಮ ಚಿತ್ರಗಳಿದ್ದವು ಎಂಬುದನ್ನು ಒಪ್ಪಿಕೊಂಡ ಧನುಷ್

ವೆಟ್ರಿಮಾರನ್ ನಿರ್ದೇಶನದ ‘ಅಸುರನ್’ ಚಿತ್ರದಲ್ಲಿ ಭೂಮಿ ಮತ್ತು ಶಿಕ್ಷಣದ ಹಕ್ಕಿಗಾಗಿ ಹೋರಾಡುವ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು. ಆ ಬಳಿಕ ಬಂದ ಮಾರಿ ಸೆಲ್ವರಾಜ್ ಅವರ ‘ಕರ್ಣನ್’ ಚಿತ್ರದಲ್ಲಿ ಹಳ್ಳಿಯ ಜನರ ಮೇಲಾಗುವ ಪೊಲೀಸ್ ದೌರ್ಜನ್ಯ ಮತ್ತು ಸಾಮಾಜಿಕ ಅಸಮಾನತೆಯ ವಿರುದ್ಧ ಧ್ವನಿ ಎತ್ತುವ ಮೂಲಕ ಗಮನ ಸೆಳೆದಿದ್ದರು. ಇತ್ತೀಚೆಗೆ ತೆರೆಕಂಡ ‘ಕ್ಯಾಪ್ಟನ್ ಮಿಲರ್’ ಚಿತ್ರದಲ್ಲೂ ಕೂಡ ಬ್ರಿಟಿಷರ ಮತ್ತು ಸ್ಥಳೀಯ ಜಮೀನ್ದಾರರ ದಬ್ಬಾಳಿಕೆಯ ವಿರುದ್ಧ ಹೋರಾಡುವ ಕ್ರಾಂತಿಕಾರಿಯ ಪಾತ್ರಕ್ಕೆ ಅವರು ಜೀವ ತುಂಬಿದ್ದರು. ಈ ಸಾಲು ಸಾಲು ಸಿನಿಮಾಗಳಲ್ಲಿ ಸಮಾಜ ಸೇವೆ, ಸಮಾನತೆ ಮತ್ತು ಜನಪರ ಹೋರಾಟದ ಸಂದೇಶಗಳಿರುವುದು, ಅವರು ತಳಮಟ್ಟದ ಜನರ ಮನಗೆದ್ದು ರಾಜಕೀಯ ಪ್ರವೇಶ ಮಾಡಲು ವ್ಯವಸ್ಥಿತವಾಗಿ ನಡೆಸುತ್ತಿರುವ ಪೂರ್ವ ಸಿದ್ಧತೆಯ ಸೂಚನೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:52 pm, Mon, 27 July 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್