AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನ್ವೀರ್ ವಿರುದ್ಧ ಆರ್.ಆರ್. ನಗರ ಠಾಣೆಯಲ್ಲಿ ದೂರು: ದರ್ಶನ್ ಮ್ಯಾನೇಜರ್ ನಾಗರಾಜ್‌ ಗಂಭೀರ ಆರೋಪ

ಕೆಲವು ವಿಷಯಗಳ ಕುರಿತು ಮಾತನಾಡಲು ವಿಜಯಲಕ್ಷ್ಮಿ ದರ್ಶನ್ ಹಾಗೂ ಮ್ಯಾನೇಜರ್ ನಾಗರಾಜ್ ಅವರು ನಟ ಧನ್ವೀರ್ ಅವರ ಮನೆಗೆ ತೆರಳಿದ್ದರು. ಆಗ ಮನೆಯಲ್ಲಿ ಧನ್ವೀರ್ ಇರಲಿಲ್ಲ. ಬಳಿಕ ಫೋನ್ ಕರೆ ಮಾಡಿ ನಾಗರಾಜ್​ಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ದೂರು ದಾಖಲಿಸಿಕೊಂಡಿರುವ ಆರ್.ಆರ್. ನಗರ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಧನ್ವೀರ್ ವಿರುದ್ಧ ಆರ್.ಆರ್. ನಗರ ಠಾಣೆಯಲ್ಲಿ ದೂರು: ದರ್ಶನ್ ಮ್ಯಾನೇಜರ್ ನಾಗರಾಜ್‌ ಗಂಭೀರ ಆರೋಪ
Dhanveer Gowda, Darshan
ರಾಚಪ್ಪಾಜಿ ನಾಯ್ಕ್
| Edited By: |

Updated on:Oct 23, 2026 | 6:30 PM

Share

ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ವಿವಾದ ಮುನ್ನೆಲೆಗೆ ಬಂದಿದೆ. ನಟ ದರ್ಶನ್ ಅವರ ಮ್ಯಾನೇಜರ್ ಹಾಗೂ ಪಿಎ ನಾಗರಾಜ್ ಅವರು ನೀಡಿದ ದೂರಿನ ಆಧಾರದ ಮೇಲೆ ನಟ ಧನ್ವೀರ್ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿ ನಗರ (ಆರ್.ಆರ್. ನಗರ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೋನ್ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ಧನ್ವೀರ್ ಮೇಲೆ ಕೇಳಿಬಂದಿದೆ.

ಕೆಲ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲು ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ಮ್ಯಾನೇಜರ್ ನಾಗರಾಜ್ ಅವರು ನಟ ಧನ್ವೀರ್ ಅವರ ಮನೆಗೆ ತೆರಳಿದ್ದರು. ಆದರೆ, ಆ ಸಂದರ್ಭದಲ್ಲಿ ನಟ ಧನ್ವೀರ್ ಮನೆಯಲ್ಲಿ ಇರಲಿಲ್ಲ. ಇದರಿಂದಾಗಿ ವಿಜಯಲಕ್ಷ್ಮಿ ಹಾಗೂ ನಾಗರಾಜ್ ಅವರು ವಾಪಸ್ ಬಂದಿದ್ದರು.

ಮನೆಗೆ ಬಂದ ಬಳಿಕ ನಾಗರಾಜ್ ಅವರಿಗೆ ಫೋನ್ ಕರೆ ಮಾಡಿರುವ ನಟ ಧನ್ವೀರ್, ಫೋನ್ ಸಂಭಾಷಣೆಯಲ್ಲಿ ಏಕವಚನದಲ್ಲಿ ನಿಂದಿಸಿ, ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಕುರಿತು ನೊಂದ ನಾಗರಾಜ್ ಅವರು ಆರ್.ಆರ್. ನಗರ ಪೊಲೀಸ್ ಠಾಣೆಗೆ ತೆರಳಿ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ. ಸದ್ಯ ದೂರು ದಾಖಲಿಸಿಕೊಂಡಿರುವ ಆರ್.ಆರ್. ನಗರ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದು, ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.

ಇತ್ತೀಚೆಗೆ ವಿಜಯಲಕ್ಷ್ಮಿ ಅವರು ಇನ್‌ಸ್ಟಾಗ್ರಾಮ್ ಸ್ಟೋರಿ ಮೂಲಕ ಒಂದು ಸಂದೇಶ ನೀಡಿದ್ದರು. ಡಿ ಬಾಸ್ ದರ್ಶನ್ ಅವರ ಹೆಸರನ್ನು ಸ್ವಹಿತಾಸಕ್ತಿಗಾಗಿ ಬಳಸಿಕೊಳ್ಳುವವರಿಗೆ ಮತ್ತು ವಿವಾದಗಳನ್ನು ಸೃಷ್ಟಿಸುವವರಿಗೆ ಸ್ಪಷ್ಟ ಹಾಗೂ ಕಟು ಸಂದೇಶ ರವಾನಿಸಿದ್ದರು. ಇದರ ಜೊತೆಗೆ ಚಾಮರಾಜನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಟ ಧನ್ವೀರ್ ಗೌಡ ಅವರು ದರ್ಶನ್ ಪರವಾಗಿ ದ್ವನಿ ಎತ್ತಿದ್ದು, ವಿರೋಧಿಗಳಿಗೆ ತಿರುಗೇಟು ನೀಡಿದ್ದರು.

ಇದನ್ನೂ ಓದಿ: ‘ನಾಯಿ-ನರಿಗಳು ಏನೇ ಕುತಂತ್ರ ಮಾಡಿದ್ರೂ ದರ್ಶನ್ ಹೊರಬರ್ತಾರೆ’; ಯುವ ದಸರಾ ವೇದಿಕೆಯಲ್ಲಿ ಧನ್ವೀರ್ ಮಾತು

‘ನಿಮ್ಮ ಡಿ ಬಾಸ್ ಹೆಸರು ಮೆಚ್ಚುಗೆಗಿರಲಿ, ಟೀಕೆಗಿರಲಿ, ಸ್ವಹಿತ ಸಾಧನೆಯ ಸಾಧನವಾಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ. ಅಭಿಪ್ರಾಯದಲ್ಲಿ ಪ್ರಾಮಾಣಿಕತೆ ಇರಲಿ, ಮಾತಿನಲ್ಲಿ ಗೌರವವಿರಲಿ. ಎಲ್ಲರಿಗೂ ವಿಜಯದಶಮಿಯ ಹಾರ್ದಿಕ ಶುಭಾಶಯಗಳು’ ಎಂದು ಬರೆಯುವ ಮೂಲಕ ಅನಗತ್ಯ ಹೇಳಿಕೆಗಳು ಹಾಗೂ ದುರ್ಬಳಕೆಗೆ ಕಡಿವಾಣ ಹಾಕುವಂತೆ ಮನವಿ ತಮ್ಮ ಪೋಸ್ಟ್‌ನಲ್ಲಿ ವಿಜಯಲಕ್ಷ್ಮಿ ಅವರು ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:29 pm, Fri, 23 October 26

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More