16ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ನಟ ಕಿಶೋರ್ ರಾಯಭಾರಿ

ನಟ ಕಿಶೋರ್​ ಅವರಿಗೆ ಇರುವ ಜನಪ್ರಿಯತೆ ಅಪಾರ. ಜಾಗತಿಕ ಮನ್ನಣೆ ಪಡೆದಿರುವ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಕಿಶೋರ್​ ಅವರು ಈ ವರ್ಷದ ಪ್ರಚಾರ ರಾಯಭಾರಿಯಾಗಿ ನೇಮಕ ಆಗಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಪೋಸ್ಟ್​ ಮಾಡಿದ್ದು, ಕಿಶೋರ್​ಗೆ ಅಭಿನಂದನೆ ತಿಳಿಸಿದ್ದಾರೆ.

16ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ನಟ ಕಿಶೋರ್ ರಾಯಭಾರಿ
Kishore
Follow us
ಮದನ್​ ಕುಮಾರ್​
|

Updated on: Jan 09, 2025 | 6:44 PM

​ದಕ್ಷಿಣ ಭಾರತ ಮತ್ತು ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದ ಖ್ಯಾತ ನಟ ಕಿಶೋರ್ ಕುಮಾರ್ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ​ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. 2024-2025ನೇ ಸಾಲಿನ 16ನೇ ಬೆಂಗಳೂರು ಇಂಟರ್​ನ್ಯಾಷನಲ್​ ಫಿಲ್ಮ್​ ಫೆಸ್ಟಿವಲ್​ ಮಾರ್ಚ್ 1ರಿಂದ 8ರ ತನಕ ಬೆಂಗಳೂರಿನಲ್ಲಿ ಆಯೋಜನೆಗೊಳ್ಳಲಿದೆ. ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರದ ಸಲುವಾಗಿ ಕಿಶೋರ್ ಅವರನ್ನು ರಾಯಭಾರಿಯನ್ನಾಗಿ ಮಾಡಲಾಗಿದೆ.

ಕಿಶೋರ್​ ಅವರಿಗೆ ದೇಶಾದ್ಯಂತ ಖ್ಯಾತಿ ಇದೆ. ಅಭಿನಯದ ಮೂಲಕ ಅವರು ಅಪಾರ ಜನಪ್ರಿಯತೆ ಹೊಂದಿದ್ದಾರೆ. ಕನ್ನಡ ಮಾತ್ರವಲ್ಲದೇ ದಕ್ಷಿಣದ ಇತರೆ ಭಾಷೆಯ ಸಿನಿಮಾಗಳಲ್ಲಿ ಹಾಗೂ ಹಿಂದಿ ಸಿನಿಮಾಗಳಲ್ಲಿ ಕೂಡ ಅವರು ಅಭಿನಯಿಸಿ ಮನೆಮಾತಾಗಿದ್ದಾರೆ. ಅವರನ್ನು ಬೆಂಗಳೂರು ಫಿಲ್ಮ್​ ಫೆಸ್ಟಿವಲ್​ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿರುವುದಾಗಿ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಲ್ಜಿಯಂನ FIAPF ಅಂತಾರಾಷ್ಟ್ರೀಯ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದೆ. 8 ದಿನಗಳ ಕಾಲ ನಡೆಯುವ ಈ ಸಿನಿಮೋತ್ಸವದಲ್ಲಿ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುತ್ತಮ ಸಿನಿಮಾಗಳ ಪ್ರದರ್ಶನ ನಡೆಯಲಿದೆ. ಅಲ್ಲದೇ, ಸಿನಿಮಾಗಳಿಗೆ ಸಂಬಂಧಿಸಿದ ಕಾರ್ಯಾಗಾರಗಳು, ವಿಚಾರ ಸಂಕಿರಣಗಳು ಕೂಡ ಇರಲಿವೆ. ಸಿನಿಮಾಸಕ್ತರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಹಾಲಿವುಡ್​ಗೆ ಬಿತ್ತು ಬೆಂಕಿ, ಪ್ರಾಣ ಉಳಿಸಿಕೊಳ್ಳಲು ಊರು ಬಿಟ್ಟ ಸೆಲೆಬ್ರಿಟಿಗಳು

​16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಸಭೆ ನಡೆಸಿ, ಸಿನಿಮೋತ್ಸವದ ದಿನಾಂಕ ಘೋಷಿಸಿದರು. ಬಳಿಕ ಮಾತನಾಡಿ, ‘ಈ ಬಾರಿ ಸರ್ವ ಜನಾಂಗದ ಶಾಂತಿಯ ತೋಟ ಶೀರ್ಷಿಕೆಯಡಿ ಸಿನಿಮೋತ್ಸವ ನಡೆಯಲಿದೆ. ಚಿತ್ರೋತ್ಸವಕ್ಕೆ ದೇಶ-ವಿದೇಶಗಳಿಂದ ಅತ್ಯುನ್ನತ ಸಿನಿಮಾಗಳನ್ನು ತರುವ ಕುರಿತು ಮತ್ತು ದೇಶ-ವಿದೇಶಗಳ ಸಿನಿಮಾ ರಂಗದ ಗಣ್ಯಾತಿಗಣ್ಯರು ಚಿತ್ರೋತ್ಸವದಲ್ಲಿ ಭಾಗವಹಿಸಲು ವ್ಯವಸ್ಥೆ ಮಾಡಲಾಗಿದೆ’ ಎಂದು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್