AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pawan Kalyan: ಎರಡು ದಶಕಗಳ ನಂತರ ಮಾರ್ಷಲ್ ಆರ್ಟ್ಸ್ ಅಭ್ಯಾಸಕ್ಕೆ ಮರಳಿದ ನಟ ಪವನ್​ ಕಲ್ಯಾಣ್

ಟಾಲಿವುಡ್​​ ಪವರ್​ ಸ್ಟಾರ್​​ ಪವನ್​ ಕಲ್ಯಾಣ್ ಅವರು 'ಹರಿ ಹರ ವೀರ ಮಲ್ಲು' ಚಿತ್ರದಲ್ಲಿ ಬ್ಯೂಸಿ ಆಗಿದ್ದಾರೆ. ಇದರ ಮಧ್ಯೆ ಎರಡು ದಶಕಗಳ ನಂತರ ಮಾರ್ಷಲ್ ಆರ್ಟ್ಸ್ ಕಲಿಯುತ್ತಿದ್ದೇನೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

Pawan Kalyan: ಎರಡು ದಶಕಗಳ ನಂತರ ಮಾರ್ಷಲ್ ಆರ್ಟ್ಸ್ ಅಭ್ಯಾಸಕ್ಕೆ ಮರಳಿದ ನಟ ಪವನ್​ ಕಲ್ಯಾಣ್
ನಟ ಪವನ್​ ಕಲ್ಯಾಣ್
TV9 Web
| Edited By: |

Updated on:Dec 10, 2022 | 9:19 PM

Share

ಟಾಲಿವುಡ್​​ ಪವರ್​ ಸ್ಟಾರ್​​ ಪವನ್​ ಕಲ್ಯಾಣ್ (pawan kalyan) ನಟರಾಗಿ ಮಾತ್ರವಲ್ಲದೆ, ರಾಜಕೀಯ ನಾಯಕರಾಗಿಯೂ ಗಮನ ಸೆಳೆಯುತ್ತಿದ್ದಾರೆ. ಸಿನಿಮಾ ಮತ್ತು ರಾಜಕೀಯ ಎರಡು ಕ್ಷೇತ್ರವನ್ನು ಒಟ್ಟಿಗೆ ಅವರು ಬ್ಯಾಲೆನ್ಸ್​ ಮಾಡುತ್ತಿದ್ದಾರೆ. ಸದ್ಯ ರಾಧಾ ಕೃಷ್ಣ (ಕ್ರಿಶ್) ಜಗರ್ಲಮುಡಿ ನಿರ್ದೇಶನದ ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ ಬ್ಯೂಸಿ ಆಗಿದ್ದಾರೆ. ಈ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ‘ಹರಿ ಹರ ವೀರ ಮಲ್ಲು’ (Hari Hara Veera Mallu) ಚಿತ್ರಕ್ಕಾಗಿ ನಟ ಪವನ್​ ಕಲ್ಯಾಣ್ ಅವರು ಮಾರ್ಷಲ್​ ಆರ್ಟ್ಸ್​​ ಕೂಡ ಕಲಿಯುತ್ತಿದ್ದಾರೆ. ಸದ್ಯ ಈ ಕುರಿತಾಗಿ ಪವನ್​ ಕಲ್ಯಾಣ್ ಅವರು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​​ ಒಂದನ್ನು ಹಂಚಿಕೊಂಡಿದ್ದು, ಕೈಯಲ್ಲಿ ಕಠಾರಿ ಹಿಡಿದು ಪೋಸ್​ ನೀಡಿದ್ದಾರೆ.

‘ಹರಿ ಹರ ವೀರ ಮಲ್ಲು’ ಚಿತ್ರ ಸೆಟ್​ ಏರಿ ಬಹಳ ದಿನಗಳಾಗಿವೆ. ಈ ಚಿತ್ರದಲ್ಲಿ ಪವನ್ ಕಲ್ಯಾಣ್ ರಾಬಿನ್ ಹುಡ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಆದರೆ ಇದುವರೆಗೂ ಚಿತ್ರತಂಡದಿಂದ ಯಾವುದೇ ಅಪ್​ಡೇಟ್​​ ಬಂದಿರಲಿಲ್ಲ. ಇದರಿಂದಾಗಿ ಪವನ್​ ಕಲ್ಯಾಣ್ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು. ಸದ್ಯ ಸಮರ ಕಲೆಗಳನ್ನು ಅಭ್ಯಾಸ ಮಾಡಲು ಪ್ರಾರಂಭಿಸಿರುವುದಾಗಿ ಪವನ್​ ಕಲ್ಯಾಣ್​ ಮಾಹಿತಿ ಹಂಚಿಕೊಂಡಿದ್ದಾರೆ. ಇದು ಅಭಿಮಾನಿಗಳಿಗೆ ಖುಷಿ ತಂದಿದೆ. ‘ಎರಡು ದಶಕಗಳ ನಂತರ ಮತ್ತೆ ಮಾರ್ಷಲ್ ಆರ್ಟ್ಸ್ ಅಭ್ಯಾಸ ಮಾಡುತ್ತಿದ್ದೇನೆ’ ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

‘ಹರಿ ಹರ ವೀರು ಮಲ್ಲು’ ಚಿತ್ರ 17ನೇ ಶತಮಾನದ ಮೊಘಲ್ ಸಾಮ್ರಾಜ್ಯದ ಹಿನ್ನೆಲೆಯುಳ್ಳ ಕಥೆಯನ್ನಾಧರಿಸಿದೆ. ಈ ಚಿತ್ರದಲ್ಲಿ ನಟ ಪವನ್​ ಕಲ್ಯಾಣ್​ ಅವರೊಂದಿಗೆ ಬಾಲಿವುಡ್​ನ ಖ್ಯಾತ ನಟ ಬಾಬಿ ಡಿಯೋಲ್ ಮೊಘಲ್ ಚಕ್ರವರ್ತಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜೊತೆಗೆ ನಿಧಿ ಅಗರ್ವಾಲ್, ಅರ್ಜುನ್ ರಾಮ್‌ಪಾಲ್ ಮತ್ತು ನರ್ಗಿಸ್ ಫಖ್ರಿ ಕೂಡ ನಟಿಸಿದ್ದಾರೆ. ಎ.ಎಂ.ರತ್ನಂ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಈ ಚಿತ್ರಕ್ಕಾಗಿ ಪವನ್​ ಕಲ್ಯಾಣ್ ಅವರು 900 ಜನರ ತಂಡದೊಂದಿಗೆ ಚಿತ್ರೀಕರಣ ನಡೆಸಲಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು.

ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಟ ಪವನ್ ಕಲ್ಯಾಣ್​ ಭೇಟಿ; ಇಲ್ಲಿದೆ ವಿಡಿಯೋ

ಪ್ಯಾನ್ ಇಂಡಿಯಾ ರೇಂಜ್​ನಲ್ಲಿ ‘ಹರಿ ಹರ ವೀರು ಮಲ್ಲು’ ಚಿತ್ರ ರೆಡಿಯಾಗುತ್ತಿದ್ದು, ನಿರೀಕ್ಷೆ ಕೂಡ ಹೆಚ್ಚಿಸಿದೆ. ಮೂಲಗಳ ಪ್ರಕಾರ ಚಿತ್ರ ಖರೀದಿಸಲು ಖರೀದಿದಾರರು ಮುಗಿ ಬೀಳುತ್ತಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ನಟ ಪವನ್ ಕಲ್ಯಾಣ್ ಕೆರಿಯರ್​ನಲ್ಲಿ ಭಾರಿ ಪ್ರಮಾಣದಲ್ಲಿ ಬಿಡುಗಡೆಗೂ ಮುಂಚೆಯೇ ಈ ಚಿತ್ರ ಉತ್ತಮ ಬಿಸಿನೆಸ್ ಮಾಡಲು ಮುಂದಾಗಿದೆ ಎನ್ನಲಾಗುತ್ತಿದೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:14 pm, Sat, 10 December 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ