ಶರವೇಗದಲ್ಲಿದ್ದಾರೆ ಡಾರ್ಲಿಂಗ್​​; 2022ರಲ್ಲಿ ಪ್ರಭಾಸ್​ ನಟನೆಯ ಎಷ್ಟು ಸಿನಿಮಾ ರಿಲೀಸ್​

ನಾಗ್​ ಅಶ್ವಿನ್​ ನಿರ್ದೇಶನ ಮಾಡುತ್ತಿರುವ ಚಿತ್ರವನ್ನು ತಾತ್ಕಾಲಿಕವಾಗಿ ‘ಪ್ರಾಜೆಕ್ಟ್​ ಕೆ’ ಎಂದು ಕರೆಯಲಾಗುತ್ತಿದೆ. ಅಮಿತಾಭ್​ ಬಚ್ಚನ್​ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಶರವೇಗದಲ್ಲಿದ್ದಾರೆ ಡಾರ್ಲಿಂಗ್​​; 2022ರಲ್ಲಿ ಪ್ರಭಾಸ್​ ನಟನೆಯ ಎಷ್ಟು ಸಿನಿಮಾ ರಿಲೀಸ್​
ಅಮಿತಾಭ್​, ಪ್ರಭಾಸ್​, ದೀಪಿಕಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 12, 2021 | 4:11 PM

ಟಾಲಿವುಡ್​ನ ಖ್ಯಾತ ನಟ ಪ್ರಭಾಸ್​ ಅವರು ಸಾಕಷ್ಟು ಬ್ಯುಸಿ ಇದ್ದಾರೆ. ಸಾಲುಸಾಲು ಸಿನಿಮಾಗಳು ಅವರ ಕೈಯಲ್ಲಿವೆ. ‘ರಾಧೆ ಶ್ಯಾಮ್​’ ಸಿನಿಮಾ ಜನವರಿ 14ರಂದು ತೆರೆಗೆ ಬರುತ್ತಿದೆ. ಅದಕ್ಕೂ ಮೊದಲೇ ಪ್ರಭಾಸ್​ ಮತ್ತೊಂದು ಸಿನಿಮಾದ ಕೆಲಸ ಆರಂಭಿಸಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಮುಂದಿನ ವರ್ಷ ಪ್ರಭಾಸ್​ ನಟನೆಯ 3 ಸಿನಿಮಾ ರಿಲೀಸ್ ಆದರೂ ಅಚ್ಚರಿ ಏನಿಲ್ಲ ಎನ್ನುತ್ತಿದ್ದಾರೆ ಸಿನಿಮಾ ತಜ್ಞರು.

ಬಾಲಿವುಡ್​ ನಟಿಯರು ದಕ್ಷಿಣ ಭಾರತಕ್ಕೆ ಕಾಲಿಡುವ ಟ್ರೆಂಡ್​ ಆರಂಭವಾಗಿದೆ. ಪ್ರಭಾಸ್​ ನಟನೆಯ ಸಾಹೋ ಸಿನಿಮಾ ಮೂಲಕ ಶ್ರದ್ಧಾ ಕಪೂರ್​ ಟಾಲಿವುಡ್​ಗೆ ಪರಿಚಯಗೊಂಡಿದ್ದರು. ‘ಆರ್​ಆರ್​ಆರ್’​ ಚಿತ್ರದ ಮೂಲಕ ಆಲಿಯಾ ಭಟ್​ ಕೂಡ ದಕ್ಷಿಣದತ್ತ ಮುಖ ಮಾಡಿದ್ದಾರೆ. ಈ ಸಾಲಿಗೆ ಮತ್ತೊಂದು ಸೇರ್ಪಡೆ ದೀಪಿಕಾ ಪಡುಕೋಣೆ. ಕನ್ನಡದ ಮೂಲಕ ಬಣ್ಣದ ಬದುಕು ಆರಂಭಿಸಿದ್ದ ದೀಪಿಕಾ ಬಾಲಿವುಡ್​ನಲ್ಲಿ ನೆಲೆಕಂಡುಕೊಂಡಿದ್ದಾರೆ. ಈಗ ಮತ್ತೆ ದಕ್ಷಿಣದತ್ತ ಮುಖ ಮಾಡಿದ್ದಾರೆ. ಪ್ರಭಾಸ್ ನಟನೆಯ ಮುಂದಿನ ಚಿತ್ರಕ್ಕೆ ಅವರು ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ನಾಗ್​ ಅಶ್ವಿನ್​ ನಿರ್ದೇಶನ ಮಾಡುತ್ತಿರುವ ಚಿತ್ರವನ್ನು ತಾತ್ಕಾಲಿಕವಾಗಿ ‘ಪ್ರಾಜೆಕ್ಟ್​ ಕೆ’ ಎಂದು ಕರೆಯಲಾಗುತ್ತಿದೆ. ಅಮಿತಾಭ್​ ಬಚ್ಚನ್​ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ ರಾಮೋಜಿ ಫಿಲ್ಮ್​ ಸಿಟಿಯಲ್ಲಿ ನಡೆಯುತ್ತಿದೆ.

ನಾಗ್​ ಅಶ್ವಿನ್​-ಪ್ರಭಾಸ್​ ಸಿನಿಮಾ 2022ರ ಅಂತ್ಯಕ್ಕೆ ತೆರೆಗೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಸಿನಿಮಾದಲ್ಲಿ ವಿಎಫ್​ಎಕ್ಸ್​ ಕೆಲಸಗಳು ತುಂಬಾನೇ ಇದೆ. ಹೀಗಾಗಿ, ಸಿನಿಮಾ ಶೂಟಿಂಗ್​​ ಬೇಗ ಪೂರ್ಣಗೊಂಡರೂ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಿಗೆ ಹೆಚ್ಚು ಸಮಯ ಹಿಡಿಯಲಿದೆ. ದೊಡ್ಡ ದೊಡ್ಡ ವಿಎಫ್​ಎಕ್ಸ್​ ಸಂಸ್ಥೆಗಳಿಗೆ ವಿಎಫ್​ಎಕ್ಸ್ ಕೆಲಸ ಮಾಡಿದವರು ಈ ಚಿತ್ರಕ್ಕೂ ಕೆಲಸ ಮಾಡುವ ಸಾಧ್ಯತೆ ಇದೆ. ಈ ಎಲ್ಲಾ ಕಾರಣಗಳಿಗೆ ಈ ಸಿನಿಮಾ ರಿಲೀಸ್​ ಆಗೋದು ಕೊಂಚ ವಿಳಂಬವಾಗಲಿದೆ.

ಸದ್ಯ ಪ್ರಭಾಸ್​ ಕೈಯಲ್ಲಿ ‘ಪ್ರಾಜೆಕ್ಟ್​ ಕೆ’ ಸೇರಿ ನಾಲ್ಕು ಸಿನಿಮಾಗಳಿವೆ. 2019ರಲ್ಲಿ ತೆರೆಗೆ ಬಂದ ‘ಸಾಹೋ’ ಬಳಿಕ ಅವರ ಯಾವ ಚಿತ್ರಗಳೂ ತೆರೆಗೆ ಬಂದಿಲ್ಲ. ‘ರಾಧೆ ಶ್ಯಾಮ್​’ ಜನವರಿ 14ರಂದು ರಿಲೀಸ್​ ಆಗುತ್ತಿದೆ. ‘ಆದಿಪುರುಷ್​’, ‘ಸಲಾರ್​’ ಚಿತ್ರಗಳ ಕೆಲಸಗಳು ಕೂಡ ಭರದಿಂದ ಸಾಗುತ್ತಿವೆ.

ಇದನ್ನೂ ಓದಿ: Prabhas: ಪ್ರವಾಹ ಸಂತ್ರಸ್ತರಿಗೆ 1 ಕೋಟಿ ರೂ. ನೀಡಿದ ಪ್ರಭಾಸ್​; ಇತರೆ ಹೀರೋಗಳು ಕೊಟ್ಟ ಹಣ ಎಷ್ಟು?

150 ಕೋಟಿ ರೂ. ಸಂಭಾವನೆ ಪಡೆದ ಪ್ರಭಾಸ್​; ಇಷ್ಟು ಹಣಕ್ಕೆ ಅವರು ಕೆಲಸ ಮಾಡೋದು ಎಷ್ಟು ದಿನ?

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು