ನಟ ಪ್ರಭಾಸ್ ಫೇವರಿಟ್ ಹೀರೋಯಿನ್ ಯಾರು? ಈ ವಿಡಿಯೋದಲ್ಲಿದೆ ಉತ್ತರ

ನಟ ಪ್ರಭಾಸ್ ‘ಸಲಾರ್’ ಸಿನಿಮಾದ ಮೂಲಕ ಸೆನ್ಸೇಷನಲ್ ಸಕ್ಸಸ್ ಕಂಡಿದ್ದಾರೆ. ಈ ಸಿನಿಮಾ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಪ್ರಭಾಸ್ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಮಧ್ಯೆ ಅವರ ಹಳೆಯ ವಿಡಿಯೋ ಒಂದು ಈಗ ವೈರಲ್ ಆಗಿದೆ. ಇದರಲ್ಲಿ ಅವರು ತಮ್ಮಿಷ್ಟದ ನಾಯಕಿಯ ಹೆಸರು ಹೇಳಿದ್ದಾರೆ.  

ನಟ ಪ್ರಭಾಸ್ ಫೇವರಿಟ್ ಹೀರೋಯಿನ್ ಯಾರು? ಈ ವಿಡಿಯೋದಲ್ಲಿದೆ ಉತ್ತರ
ಪ್ರಭಾಸ್​
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Feb 14, 2024 | 11:48 AM

ಹಲವು ವರ್ಷಗಳ ನಂತರ ನಟ ಪ್ರಭಾಸ್​ಗೆ (Prabhas) ದೊಡ್ಡ ಗೆಲುವು ಸಿಕ್ಕಿದೆ. ಸತತ ಫ್ಲಾಪ್​​ಗಳಿಂದ ಬೇಸತ್ತಿದ್ದ ಅವರು ‘ಸಲಾರ್’ ಸಿನಿಮಾದ ಮೂಲಕ ಸೆನ್ಸೇಷನಲ್ ಸಕ್ಸಸ್ ಕಂಡಿದ್ದಾರೆ. ‘ಕೆಜಿಎಫ್’ (KGF) ಸರಣಿಯ ಮೂಲಕ ಗೆದ್ದು ಬೀಗಿದ್ದ ನಿರ್ದೇಶಕ ಪ್ರಶಾಂತ್ ನೀಲ್​ಗೆ ‘ಸಲಾರ್’ ಸಿನಿಮಾದಿಂದ ಮತ್ತೆ ಗೆಲುವು ಸಿಕ್ಕಿದೆ. ಈ ಚಿತ್ರ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಪ್ರಭಾಸ್ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಮಧ್ಯೆ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ಇದರಲ್ಲಿ ಅವರು ತಮ್ಮಿಷ್ಟದ ನಾಯಕಿಯ ಹೆಸರು ಹೇಳಿದ್ದಾರೆ.

ಪ್ರತೀ ಹೀರೋಗೆ ತಮ್ಮಿಷ್ಟದ ನಾಯಕಿ ಇರುತ್ತಾರೆ. ಪ್ರಭಾಸ್​ಗೆ ಸಾಯಿ ಪಲ್ಲವಿ ಎಂದರೆ ಸಖತ್ ಇಷ್ಟ. ಅವರ ನಟನೆಯನ್ನು ಪ್ರಭಾಸ್ ಮೆಚ್ಚಿಕೊಂಡಿದ್ದಾರೆ. ಪ್ರಭಾಸ್ ಮಾಡಿದ್ದ ಈ ಕಾಮೆಂಟ್‌ಗಳು ಈಗ ವೈರಲ್ ಆಗಿವೆ. ಸಂದರ್ಶನ ಒಂದರಲ್ಲಿ ಆ್ಯಂಕರ್ ‘ನಿಮಗೆ ಯಾವ ನಾಯಕಿಯ ಅಭಿನಯ ಇಷ್ಟ’ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ಪ್ರಭಾಸ್, ‘ಸಾಯಿ ಪಲ್ಲವಿ ಅವರ ಅಭಿನಯ ಇಷ್ಟವಾಗುತ್ತದೆ. ಆದರೆ ನಮ್ಮಿಬ್ಬರಿಗೂ ಎತ್ತರದಲ್ಲಿ ವ್ಯತ್ಯಾಸವಿದೆ’ ಎಂದು ನಗುತ್ತಲೇ ಹೇಳಿದರು ಪ್ರಭಾಸ್.

ಪ್ರಭಾಸ್ ಅವರ ಈ ಕಾಮೆಂಟ್ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ‘ನೀವಿಬ್ಬರೂ ಸೇರಿ ಒಂದು ಸಿನಿಮಾ ಮಾಡಬೇಕು’ ಎಂದು ಕೆಲವರು ಹೇಳಿದ್ದಾರೆ. ‘ಅವರ ಮುಂದಿನ ಚಿತ್ರಗಳಿಗೆ ಸಾಯಿ ಪಲ್ಲವಿಯನ್ನು ನಾಯಕಿಯಾಗಿ ಪರಿಗಣಿಸಿ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಸಾಯಿ ಪಲ್ಲವಿ ಇತ್ತೀಚೆಗೆ ಸಣ್ಣ ಬ್ರೇಕ್ ತೆಗೆದುಕೊಂಡಿದ್ದರು. ಈಗ ಮತ್ತೆ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ನಾಗ ಚೈತನ್ಯ ಜೊತೆ ‘ತಾಂಡೇಲ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಸಾಯಿ ಪಲ್ಲವಿ ಬಗ್ಗೆ ಟ್ವೀಟ್..

View this post on Instagram

A post shared by … (@ajaynavee_offl_)

ಪ್ರಭಾಸ್ ‘ಬಾಹುಬಲಿ 2’ ಬಳಿಕ ಅವರ ಯಾವುದೇ ಸಿನಿಮಾ ಗೆದ್ದಿರಲಿಲ್ಲ. ‘ಸಾಹೋ’, ‘ರಾಧೆ ಶ್ಯಾಮ್’ ಹಾಗೂ ‘ಆದಿಪುರುಷ್’ ಚಿತ್ರಗಳು ಸೋತವು. ಇದರಿಂದ ಪ್ರಭಾಸ್ ಫ್ಯಾನ್ಸ್ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಈಗ ‘ಸಲಾರ್’ ಚಿತ್ರದಿಂದ ಅವರು ಗೆಲುವಿನ ನಗೆ ಬೀರಿದ್ದಾರೆ. ಈ ಸಿನಿಮಾದಲ್ಲಿ ಪ್ರಭಾಸ್ ಜೊತೆ ಪೃಥ್ವಿರಾಜ್​ ಸುಕುಮಾರನ್, ಶ್ರುತಿ ಹಾಸನ್ ಮೊದಲಾದವರು ನಟಿಸಿದ್ದಾರೆ.

ಇದನ್ನೂ ಓದಿ: ಯಾಕೆ ಹೀಗೆ ಆಗಿದ್ದಾರೆ ಪ್ರಭಾಸ್​? ಬಾಡಿದ ಮುಖ ನೋಡಿ ಅಭಿಮಾನಿಗಳಿಗೆ ಚಿಂತೆ

ಪ್ರಭಾಸ್ ಸದ್ಯ ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಮೊದಲಾದವರು ಬಣ್ಣ ಹಚ್ಚಿದ್ದಾರೆ. ಇದಲ್ಲದೆ ‘ರಾಜಾ ಸಾಬ್’ ಹಾಗೂ ‘ಸ್ಪಿರಿಟ್’ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ವರ್ಷಕ್ಕೆ ಎರಡು ಸಿನಿಮಾ ರಿಲೀಸ್ ಮಾಡೋ ಉದ್ದೇಶ ಇಟ್ಟುಕೊಂಡಿರುವ ಅವರು ಅದಕ್ಕೆ ತಕ್ಕಂತೆ ಕೆಲಸ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್