AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prithviraj Sukumaran: ಶೂಟಿಂಗ್ ವೇಳೆ ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್​ ಕಾಲಿಗೆ ಗಾಯ; ನಡೆಯಿತು ಶಸ್ತ್ರಚಿಕಿತ್ಸೆ

ಸಾಹಸ ದೃಶ್ಯಗಳ ಶೂಟಿಂಗ್ ವೇಳೆ ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಸಾಕಾಗುವುದಿಲ್ಲ. ಹೀಗಿದ್ದರೂ ಕೆಲವೊಮ್ಮೆ ಅವಘಡಗಳು ಸಂಭವಿಸುತ್ತವೆ. ಈಗ ಪೃಥ್ವಿರಾಜ್ ಅವರಿಗೂ ಹೀಗೆಯೇ ಆಗಿದೆ.

Prithviraj Sukumaran: ಶೂಟಿಂಗ್ ವೇಳೆ ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್​ ಕಾಲಿಗೆ ಗಾಯ; ನಡೆಯಿತು ಶಸ್ತ್ರಚಿಕಿತ್ಸೆ
ಪೃಥ್ವಿರಾಜ್​ ಸುಕುಮಾರನ್
ರಾಜೇಶ್ ದುಗ್ಗುಮನೆ
|

Updated on: Jun 26, 2023 | 2:41 PM

Share

ಮಲಯಾಳಂನ ಜನಪ್ರಿಯ ನಟ ಪೃಥ್ವಿರಾಜ್​ ಸುಕುಮಾರನ್ (Prithviraj Sukumaran) ಕಾಲಿಗೆ ಗಂಭೀರ ಗಾಯ ಆಗಿದೆ. ಸಿನಿಮಾ ಶೂಟಿಂಗ್ ವೇಳೆ ಸಂಭವಿಸಿದ ಅವಘಡದಲ್ಲಿ ಅವರ ಕಾಲಿಗೆ ಏಟಾಗಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೃಥ್ವಿರಾಜ್​ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಗಿದೆ. ಹೀಗಾಗಿ, ಕೆಲ ವಾರಗಳ ಕಾಲ ಅವರು ವಿಶ್ರಾಂತಿಪಡೆಯಲೇಬೇಕಿದೆ. ಈ ವಿಚಾರ ಕೇಳಿ ಅಭಿಮಾನಿಗಳಿಗೆ ಬೇಸರ ಆಗಿದೆ. ಅವರು ಬೇಗ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಪ್ರಾರ್ಥಿಸುತ್ತಿದ್ದಾರೆ.

ಸಾಹಸ ದೃಶ್ಯಗಳ ಶೂಟಿಂಗ್ ವೇಳೆ ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಸಾಕಾಗುವುದಿಲ್ಲ. ಹೀಗಿದ್ದರೂ ಕೆಲವೊಮ್ಮೆ ಅವಘಡಗಳು ಸಂಭವಿಸುತ್ತವೆ. ಈಗ ಪೃಥ್ವಿರಾಜ್ ಅವರಿಗೂ ಹೀಗೆಯೇ ಆಗಿದೆ. ಅವರು ಮುನ್ನೆಚ್ಚರಿಕೆ ಪಡೆದುಕೊಂಡ ಹೊರತಾಗಿಯೂ ಪೆಟ್ಟಾಗಿದೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ.

‘ವಿಲಾಯತ್ ಬುದ್ಧ’ ಹೆಸರಿನ ಸಿನಿಮಾದಲ್ಲಿ ಪೃಥ್ವಿರಾಜ್ ನಟಿಸುತ್ತಿದ್ದರು. ತಕ್ಷಣ ಅವರನ್ನು ಕೊಚ್ಚಿಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಇಂದು (ಜೂನ್ 26) ಅವರ ಕಾಲಿಗೆ ಶಸ್ತ್ರಚಿಕಿತ್ಸೆ ನಡೆದಿದೆ ಎನ್ನಲಾಗುತ್ತಿದೆ. ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ. ಸದ್ಯ ಈ ಸಿನಿಮಾ ಶೂಟಿಂಗ್ ನಿಂತಿದೆ.

ಪೃಥ್ವಿ ರಾಜ್ ಅವರು ‘ಸಲಾರ್’ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಈಗಾಗಲೇ ಸಿನಿಮಾ ಶೂಟಿಂಗ್ ಪೂರ್ಣಗೊಂಡಿರುವುದರಿಂದ ಈ ಸಿನಿಮಾ ರಿಲೀಸ್​​ಗೆ ಯಾವುದೇ ತೊಂದರೆ ಇಲ್ಲ. ಈ ಚಿತ್ರ ಸೆಪ್ಟೆಂಬರ್ 28ರಂದು ರಿಲೀಸ್ ಆಗಲಿದೆ. ಪ್ರಭಾಸ್ ಮುಖ್ಯಭೂಮಿಕೆಯಲ್ಲಿದ್ದು, ಪ್ರಶಾಂತ್ ನೀಲ್ ನಿರ್ದೇಶಿಸುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ‘ಟೈಸನ್’ ಚಿತ್ರದಲ್ಲಿ ಪೃಥ್ವಿರಾಜ್ ಅವರು ನಟಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ಈ ಚಿತ್ರ 2024ರಲ್ಲಿ ರಿಲೀಸ್ ಆಗಲಿದೆ.

ಇದನ್ನೂ ಓದಿ: ಸಲಾರ್​ಗಾಗಿ ಹೊಸ ಪ್ರಪಂಚ ಸೃಷ್ಟಿಸಿದ್ದಾರೆ ಪ್ರಶಾಂತ್ ನೀಲ್;, ಗೇಮ್ ಆಫ್ ಥ್ರೋನ್ಸ್​ಗೆ ಹೋಲಿಸಿದ ನಟಿ

ಇತ್ತೀಚೆಗೆ ನಟ ವಿಶಾಲ್ ಅವರು ಗಾಯಗೊಂಡಿದ್ದರು. ‘ವಿಜಯ್ ಆ್ಯಂಟನಿ’ ಸಿನಿಮಾ ಶೂಟಿಂಗ್ ವೇಳೆ ಅವರಿಗೆ ಗಾಯ ಆಗಿತ್ತು. ಸಿನಿಮಾ ಸೆಟ್​ನಲ್ಲಿ ಪದೇಪದೇ ಈ ರೀತಿಯ ಅವಘಡಗಳು ಸಂಭವಿಸುತ್ತಿರುವುದು ಸಾಕಷ್ಟು ಆತಂಕ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ