ಆಕ್ಸಿಜನ್​ ಬೇಕು ಎಂದು ಮೋದಿಗೆ ಕೈ ಮುಗಿದು ಬೇಡಿಕೊಂಡಿದ್ದ ನಟ ರಾಹುಲ್​ ಕೊರೊನಾದಿಂದ ನಿಧನ

‘ನನಗೂ ಒಳ್ಳೆಯ ಚಿಕಿತ್ಸೆ ಸಿಕ್ಕಿದ್ದಿದ್ದರೆ ನಾನು ಕೂಡ ಬದುಕುತ್ತಿದ್ದೆ. ಮತ್ತೆ ಜನ್ಮತಾಳಿ ಬಂದು ಒಳ್ಳೆಯ ಕೆಲಸ ಮಾಡುತ್ತೇನೆ’ ಎಂದು ಶನಿವಾರ ಫೇಸ್​ಬುಕ್​ನಲ್ಲಿ ರಾಹುಲ್​ ಬರೆದುಕೊಂಡಿದ್ದರು. ಮರುದಿನವೇ ಅವರು ಮೃತರಾದರು.

ಆಕ್ಸಿಜನ್​ ಬೇಕು ಎಂದು ಮೋದಿಗೆ ಕೈ ಮುಗಿದು ಬೇಡಿಕೊಂಡಿದ್ದ ನಟ ರಾಹುಲ್​ ಕೊರೊನಾದಿಂದ ನಿಧನ
Actor Rahul Vohra dies due to Coronavirus hours after request Narendra Modi for help
Follow us
ಮದನ್​ ಕುಮಾರ್​
|

Updated on: May 10, 2021 | 10:41 AM

ಕೊರೊನಾ ವೈರಸ್​ನಿಂದಾಗಿ ಸಾಯುತ್ತಿರುವ ಸೆಲೆಬ್ರಿಟಿಗಳ ಪಟ್ಟಿ ಬೆಳೆಯುತ್ತಲೇ ಇದೆ. ಪ್ರತಿ ದಿನ ಒಬ್ಬರಲ್ಲ ಒಬ್ಬರು ಕಲಾವಿದರನ್ನು ಈ ಮಹಾಮಾರಿ ಬಲಿ ತೆಗೆದುಕೊಳ್ಳುತ್ತಿದೆ. ಈಗ ನಟ ರಾಹುಲ್​ ವೋಹ್ರಾ ನಿಧನರಾಗಿದ್ದಾರೆ. ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ (ಮೇ9) ಕೊನೆಯುಸಿರೆಳೆದರು. ಅದಕ್ಕೂ ಒಂದು ದಿನ ಮುಂಚೆ ಅವರು ಉತ್ತಮ ಚಿಕಿತ್ಸೆ ಬೇಕು ಎಂದು ಸೋಶಿಯಲ್​ ಮೀಡಿಯಾ ಮೂಲಕ ನರೇಂದ್ರ ಮೋದಿ ಅವರನ್ನು ಕೈ ಮುಗಿದು ಬೇಡಿಕೊಂಡಿದ್ದರು.

‘ನನಗೂ ಒಳ್ಳೆಯ ಚಿಕಿತ್ಸೆ ಸಿಕ್ಕಿದ್ದಿದ್ದರೆ ನಾನು ಕೂಡ ಬದುಕುತ್ತಿದ್ದೆ. ಮತ್ತೆ ಜನ್ಮತಾಳಿ ಬಂದು ಒಳ್ಳೆಯ ಕೆಲಸ ಮಾಡುತ್ತೇನೆ’ ಎಂದು ಶನಿವಾರ ಫೇಸ್​ಬುಕ್​ನಲ್ಲಿ ರಾಹುಲ್​ ಬರೆದುಕೊಂಡಿದ್ದರು. ತಾವಿರುವ ಆಸ್ಪತ್ರೆಯ ಹೆಸರು, ತಮ್ಮ ವಯಸ್ಸು, ಬೆಡ್ ಸಂಖ್ಯೆ ಮುಂತಾದ ವಿವರಗಳನ್ನು ಈ ಪೋಸ್ಟ್​ನಲ್ಲಿ ಬರೆದು, ದಯವಿಟ್ಟು ಸಹಾಯ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಹುಲ್​ ವೋಹ್ರಾ ಟ್ಯಾಗ್​ ಮಾಡಿದ್ದರು. ಅವರು ನಿಧನರಾಗಿರುವ ಸುದ್ದಿಯನ್ನು ನಟ, ನಿರ್ದೇಶಕ, ನಾಟಕಕಾರ ಅರವಿಂದ್​ ಗೌರ್​​ ಖಚಿತ ಪಡಿಸಿದ್ದಾರೆ.

ಕೆಲವೇ ದಿನಗಳ ಹಿಂದೆ ರಾಹುಲ್​ ಅವರಿಗೆ ಕೊರೊನಾ ವೈರಸ್​ ತಗುಲಿತ್ತು. ಆ ಬಗ್ಗೆ ಅವರು ಅಸಹಾಯಕತೆಯಿಂದ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದರು. ‘ನನಗೆ ಕೊವಿಡ್​ ಪಾಸಿಟಿವ್​ ಆಗಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ. ನಾಲ್ಕು ದಿನದಿಂದ ಯಾವುದೇ ಚೇತರಿಕೆ ಕಂಡುಬರುತ್ತಿಲ್ಲ. ನನಗೆ ಎಲ್ಲಿ ಆಕ್ಸಿಜನ್​ ಬೆಡ್​ ಸಿಗಬಹುದು? ನನ್ನ ಆಕ್ಸಿಜನ್​ ಮಟ್ಟ​ ಕಡಿಮೆ ಆಗುತ್ತಲೇ ಇದೆ. ಇಲ್ಲಿ ನೋಡಿಕೊಳ್ಳಲು ಯಾರೂ ಇಲ್ಲ’ ಎಂದು ರಾಹುಲ್​ ಅಂಗಲಾಚಿದ್ದರು.

ರಾಹುಲ್​ ನಿಧನಕ್ಕೆ ಅನೇಕರು ಕಂಬನಿ ಮಿಡಿದಿದ್ದಾರೆ. ಸೋನು ಸೂದ್​ ಅವರಿಗೆ ಈಗ ವಿಚಾರ ತಿಳಿದಿದ್ದರೆ ಖಂಡಿತವಾಗಿಯೂ ರಾಹುಲ್​ ಸಾಯುತ್ತಿರಲಿಲ್ಲ ಎಂದು ಅನೇಕರು ಕಮೆಂಟ್​ ಮಾಡುತ್ತಿದ್ದಾರೆ. ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಕಾಲಿವುಡ್​ ನಿರ್ದೇಶಕ ಕೆವಿ ಆನಂದ್​, ರವಿರತ್ನ ಕಾಳಿದಾಸ ಚಿತ್ರದ ನಿರ್ದೇಶಕ ರೇಣುಕಾ ಶರ್ಮಾ, ನಟ ಶಂಕನಾದ ಅರವಿಂದ್​, ಯುವ ನಿರ್ಮಾಪಕ ಡಿ.ಎಸ್​. ಮಂಜುನಾಥ್​ ಸೇರಿದಂತೆ ಅನೇಕರು ಈ ಮಹಾಮಾರಿಗೆ ಬಲಿ ಆಗಿದ್ದಾರೆ.

ಇದನ್ನೂ ಓದಿ:

ಸಹಾಯಕ್ಕಾಗಿ ಅಂಗಲಾಚಿದ ಕೆಲವೇ ಗಂಟೆಗಳಲ್ಲಿ ಸ್ಟಾರ್​ ನಟಿ ಪಿಯಾ ಸಹೋದರ ಕೊರೊನಾದಿಂದ ನಿಧನ

Ramu Death: ನಿಧನಕ್ಕೂ ಮುನ್ನ ಫೋನ್​ನಲ್ಲಿ ಕೊವಿಡ್​ ಕಷ್ಟ ವಿವರಿಸಿದ್ದ ಕೋಟಿ ರಾಮು

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ