Rajinikanth: ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾದ ಸೂಪರ್​ಸ್ಟಾರ್​ ರಜನಿಕಾಂತ್​

Rajinikanth: ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾದ ಸೂಪರ್​ಸ್ಟಾರ್​ ರಜನಿಕಾಂತ್​
ರಜನಿಕಾಂತ್​

ಇಂದು (ಅಕ್ಟೋಬರ್​ 28) ಸಂಜೆ 4:30ರ ಸುಮಾರಿಗೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದು ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಸಾಮಾನ್ಯ ಪರೀಕ್ಷೆಗೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

TV9kannada Web Team

| Edited By: Rajesh Duggumane

Oct 28, 2021 | 9:38 PM

ಇತ್ತೀಚೆಗಷ್ಟೇ ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿ ಪಡೆದಿದ್ದ ಸೂಪರ್​ ಸ್ಟಾರ್​ ರಜನಿಕಾಂತ್​ ಅವರು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಅಕ್ಟೋಬರ್​ 28) ಸಂಜೆ 4:30ರ ಸುಮಾರಿಗೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದು ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಸಾಮಾನ್ಯ ಪರೀಕ್ಷೆಗೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

‘ಅಣ್ಣಾಥೆ’ ಸಿನಿಮಾದ ಶೂಟಿಂಗ್​ಗಾಗಿ ರಜನಿಕಾಂತ್​ ಹೈದರಾಬಾದ್​ಗೆ ತೆರಳಿದ್ದರು. ಒಂದು ತಿಂಗಳ ಕಾಲ ಅಲ್ಲಿಯೇ ಇದ್ದು, ಶೂಟ್​ ಪೂರ್ಣಗೊಳಿಸಿದ್ದರು. ನಂತರ ಅವರು ಏಕಾಏಕಿ ಅಮೆರಿಕಕ್ಕೆ ತೆರಳಿದ್ದರು. ಅಮೆರಿಕದ ಪ್ರತಿಷ್ಠಿತ ಆಸ್ಪತ್ರೆಯಾದ ಮೆಯೋ ಕ್ಲಿನಿಕ್​ ಎದುರು ರಜನಿಕಾಂತ್​ ನಡೆದುಬರುತ್ತಿರುವ ಫೋಟೋ ವೈರಲ್​ ಆಗಿತ್ತು. ಆಸ್ಪತ್ರೆಗೆ ಭೇಟಿ ನೀಡಿದ ಕಾರಣ ಏನಿರಬಹುದು ಎಂದು ಕೂಡ ಅಭಿಮಾನಿಗಳು ಚಿಂತೆಗೀಡಾಗಿದ್ದರು. ‘ಅಷ್ಟು ತರಾತುರಿಯಲ್ಲಿ ವಿಮಾನ ಹತ್ತಲು ಅವರು ನಿರ್ಧರಿಸಿದ್ದು ಯಾಕೆ? ಕೊವಿಡ್​ ಸಂದರ್ಭದಲ್ಲೂ ವಿದೇಶಕ್ಕೆ ಪ್ರಯಾಣ ಮಾಡುವ ರಿಸ್ಕ್​ ತೆಗೆದುಕೊಳ್ಳುತ್ತಿದ್ದಾರೆ ಎಂದರೆ ಅವರ ಆರೋಗ್ಯದಲ್ಲಿ ಏನೋ ಗಂಭೀರ ಸಮಸ್ಯೆ ಇರಬಹುದು’ ಎಂದು ಕೆಲವು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆತಂಕ ವ್ಯಕ್ತಪಡಿಸಿದ್ದರು.

ಅಕ್ಟೋಬರ್​ 27ರಂದು ‘ಅಣ್ಣಾಥೆ’ ಸಿನಿಮಾದ ಟ್ರೇಲರ್ ರಿಲೀಸ್​ ಆಗಿತ್ತು. ‘ಅಣ್ಣಾಥೆ’ ಸಿನಿಮಾವನ್ನು ಸನ್​ ಪಿಕ್ಚರ್ಸ್​ ನಿರ್ಮಾಣ ಮಾಡುತ್ತಿದೆ. ರಜನಿಕಾಂತ್​, ಕೀರ್ತಿ ಸುರೇಶ್​, ನಯನತಾರಾ, ಮೀನಾ, ಖುಷ್ಬು, ಪ್ರಕಾಶ್ ರಾಜ್, ಜಗಪತಿ ಬಾಬು ಮೊದಲಾದವರು ಪಾತ್ರವರ್ಗದಲ್ಲಿದ್ದಾರೆ. ದೀಪಾವಳಿ ನಿಮಿತ್ತ ಈ ಸಿನಿಮಾ ನವೆಂಬರ್​ 4ರಂದು ತೆರೆಗೆ ಬರುತ್ತಿದೆ.

ಫ್ಯಾಮಿಲಿ ಎಂಟರ್​ಟೇನ್​ಮೆಂಟ್​ ಸಿನಿಮಾಗಳನ್ನು ನಿರ್ದೇಶನ ಮಾಡೋಕೆ ಪಾಂಡಿರಾಜ್​ ಹೆಸರುವಾಸಿ. ರಜನಿ ಜತೆ ಮಾಡುತ್ತಿರುವ ಸಿನಿಮಾ ಕೂಡ ಹೀಗೆಯೇ ಇರಲಿದೆ ಎನ್ನುವುದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿತ್ತು.

ಇದನ್ನೂ ಓದಿ: ಅಣ್ಣಾಥೆ ಶೂಟಿಂಗ್ ಮುಗಿದ ಬೆನ್ನಲ್ಲೇ ಕೊವಿಡ್ ಎರಡನೇ ಡೋಸ್ ಲಸಿಕೆ ಪಡೆದ ರಜನಿಕಾಂತ್

Follow us on

Related Stories

Most Read Stories

Click on your DTH Provider to Add TV9 Kannada