Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೃತವರ್ಷಿಣಿ ನಟ ಶರತ್​ ಬಾಬು ಆರೋಗ್ಯ ಸ್ಥಿತಿ ಗಂಭೀರ

Sarath Babu: ಕನ್ನಡದ ಅಮೃತವರ್ಷಿಣಿ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಶರತ್ ಬಾಬು ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಐಸಿಯುಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಮೃತವರ್ಷಿಣಿ ನಟ ಶರತ್​ ಬಾಬು ಆರೋಗ್ಯ ಸ್ಥಿತಿ ಗಂಭೀರ
ಶರತ್ ಬಾಬು
Follow us
ಮಂಜುನಾಥ ಸಿ.
|

Updated on: Apr 22, 2023 | 11:43 PM

ಕನ್ನಡದ ಅಮೃತವರ್ಷಿಣಿ (Amruthavarshini) ಸೇರಿದಂತೆ ವಿವಿಧ ಭಾಷೆಗಳ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಶರತ್ ಬಾಬು (Sarath Babu) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಶರತ್ ಬಾಬು ಅವರನ್ನು ವಾರದ ಹಿಂದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾದ ಬಳಕ ತುಸು ಚೇತರಿಸಿಕೊಂಡಿದ್ದ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾದ ಕಾರಣ ಹೈದರಾಬಾದ್​ನ ಗಚ್ಚಿಬೌಲಿಯಲ್ಲಿನ ಎಐಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿಯಲ್ಲಿ ಗಂಭೀರ ಬದಲಾವಣೆಗಳಾದ ಕಾರಣ ಅವರನ್ನು ಐಸಿಯುಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರು ಅಥವಾ ಆಸ್ಪತ್ರೆ ವತಿಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲವಾದರೂ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎನ್ನಲಾಗುತ್ತಿದೆ.

1973 ರಲ್ಲಿ ಚಿತ್ರರಂಗ ಪ್ರವೇಶಿಸಿದ ಶರತ್ ಬಾಬು ತೆಲುಗು, ತಮಿಳು ಚಿತ್ರರಂಗದಲ್ಲಿ ಬಹು ಜನಪ್ರಿಯ ನಟರಾಗಿದ್ದವರು. ಸಿನಿಮಾ ನಾಯಕನಾಗಿ, ಎರಡನೇ ನಾಯಕನಾಗಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಒಂದು ಸಮಯದಲ್ಲಿ ಸ್ಟಾರ್ ಆಗಿ ಸಹ ಮೆರೆದಿದ್ದಾರೆ. ರಜನೀಕಾಂತ್​ ಜೊತೆಗೆ ಮುತ್ತು, ಅರುಣಾಚಲಂ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ಶರತ್ ಬಾಬು ನಟಿಸಿದ್ದಾರೆ. ತಮ್ಮ 40 ವರ್ಷದ ಸಿನಿ ಬದುಕಿನಲ್ಲಿ ಸುಮಾರು 200 ಕ್ಕೂ ಹೆಚ್ಚು ಪಾತ್ರಗಳಲ್ಲಿ ಶರತ್ ಬಾಬು ನಟಿಸಿದ್ದಾರೆ.

ಕನ್ನಡದ ಹಲವು ಸಿನಿಮಾಗಳಲ್ಲಿ ಶರತ್ ಬಾಬು ನಟಿಸಿದ್ದಾರೆ. ತುಳಸಿದಳ, ರಣಚಂಡಿ, ಶಕ್ತಿ, ಕಂಪನ, ಗಾಯ, ಹೃದಯ-ಹೃದಯ, ನೀಲ, ನಮ್ಮೆಜಮಾನ್ರು, ಅಮೃತವರ್ಷಿಣಿ ಸಿನಿಮಾದಲ್ಲಿ ಪಾತ್ರವನ್ನು ಕನ್ನಡ ಸಿನಿಮಾ ಪ್ರೇಮಿಗಳು ಮರೆಯುವಂತಿಲ್ಲ. ಕನ್ನಡದ ಪ್ರೀತಿಗಾಗಿ ಧಾರಾವಾಹಿಯಲ್ಲಿಯೂ ಶರತ್ ಬಾಬು ನಟಿಸಿದ್ದಾರೆ. ತೆಲುಗು, ತಮಿಳಿನಲ್ಲಿ ಚಿರಂಜೀವಿ, ಕಮಲ್ ಹಾಸನ್ ಇನ್ನೂ ಹಲವು ಮೇರು ಕಲಾವಿದರೊಟ್ಟಿಗೆ ಶರತ್ ಬಾಬು ನಟಿಸಿದ್ದಾರೆ.

ಇತ್ತೀಚೆಗೆ ಚಿತ್ರರಂಗದಿಂದ ತುಸು ಅಂತರ ಕಾಯ್ದುಕೊಂಡಿದ್ದ ಶರತ್ ಬಾಬು, ಕೊನೆಯದಾಗಿ ಪವನ್ ಕಲ್ಯಾಣ್ ನಟನೆಯ ವಕೀಲ್ ಸಾಬ್ ಸಿನಿಮಾದಲ್ಲಿ ಸಣ್ಣ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಪತ್ರಕರ್ತೆಯೊಬ್ಬರನ್ನು ಅವರು ವಿವಾಹವಾಗಿದ್ದರು ಎಂಬ ಸುದ್ದಿಯೂ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ