ರಜನಿಕಾಂತ್ ಜತೆ ಶಿವಣ್ಣ ನಟನೆ; ವಿಷಯ ಖಚಿತಪಡಿಸಿ ಹೊಸ ಅಪ್​ಡೇಟ್ ನೀಡಿದ ಶಿವರಾಜ್​ಕುಮಾರ್

ರಜನಿ 169ನೇ ಚಿತ್ರಕ್ಕೆ ನೆಲ್ಸನ್ ಆ್ಯಕ್ಷನ್​ಕಟ್​ ಹೇಳುತ್ತಿದ್ದಾರೆ. ಈ ಸಿನಿಮಾದಲ್ಲಿ ರಜನಿ ಹಾಗೂ ಶಿವರಾಜ್​ಕುಮಾರ್ ಒಟ್ಟಾಗಿ ನಟಿಸುತ್ತಿರುವ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ.

ರಜನಿಕಾಂತ್ ಜತೆ ಶಿವಣ್ಣ ನಟನೆ; ವಿಷಯ ಖಚಿತಪಡಿಸಿ ಹೊಸ ಅಪ್​ಡೇಟ್ ನೀಡಿದ ಶಿವರಾಜ್​ಕುಮಾರ್
ರಜಿನಿ-ಶಿವಣ್ಣ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 09, 2022 | 3:58 PM

ರಜನಿಕಾಂತ್ (Rajinikanth) 169ನೇ ಚಿತ್ರದ ಬಗ್ಗೆ ಕನ್ನಡಗರಿಗೂ ನಿರೀಕ್ಷೆ ಸೃಷ್ಟಿ ಆಗಿದೆ. ಇದಕ್ಕೆ ಕಾರಣ ಈ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ (Shivarajkumar) ಕೂಡ ನಟಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಈ ಬಗ್ಗೆ ವರದಿ ಬಿತ್ತರವಾಗಿತ್ತು. ಈಗ ಶಿವರಾಜ್​ಕುಮಾರ್ ಅವರು ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಅಷ್ಟೇ ಅಲ್ಲ, ರಜನಿಕಾಂತ್ ಜತೆ ವಿಶೇಷ ಬಾಂಡಿಂಗ್ ಇರುವ ಬಗ್ಗೆ ಅವರು ಮಾತನಾಡಿದ್ದಾರೆ.

ದಳಪತಿ ವಿಜಯ್ ನಟನೆಯ ‘ಬೀಸ್ಟ್’ ಸಿನಿಮಾ ಹೇಳಿಕೊಳ್ಳುವಂತಹ ಉತ್ತಮ ವಿಮರ್ಶೆ ಪಡೆದುಕೊಂಡಿಲ್ಲ. ಈ ಚಿತ್ರಕ್ಕೆ ನೆಲ್ಸನ್ ದಿಲೀಪ್​ಕುಮಾರ್ ಅವರು ಆ್ಯಕ್ಷನ್​ ಕಟ್​ ಹೇಳಿದ್ದರು. ರಜನಿ 169ನೇ ಚಿತ್ರಕ್ಕೆ ನೆಲ್ಸನ್ ಆ್ಯಕ್ಷನ್​ಕಟ್​ ಹೇಳುತ್ತಿದ್ದಾರೆ. ಈ ಸಿನಿಮಾದಲ್ಲಿ ರಜನಿ ಹಾಗೂ ಶಿವರಾಜ್​ಕುಮಾರ್ ಒಟ್ಟಾಗಿ ನಟಿಸುತ್ತಿರುವ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಬಗ್ಗೆ ಶಿವಣ್ಣ ‘ಸಿನಿಮಾ ಎಕ್ಸ್​ಪ್ರೆಸ್’​ಗೆ ನೀಡಿದ ಸಂದರ್ಶನದಲ್ಲಿ ಒಂದಷ್ಟು ವಿಚಾರ ಹಂಚಿಕೊಂಡಿದ್ದಾರೆ.

‘ರಜನಿಕಾಂತ್ ಜತೆ ನಟಿಸುವುದು ನಿಜಕ್ಕೂ ಉತ್ತಮ ಅವಕಾಶ. ಈ ಚಿತ್ರದಲ್ಲಿ ಅವರ ಜತೆ ತೆರೆ ಹಂಚಿಕೊಳ್ಳುತ್ತಿರುವುದು ಖುಷಿ ನೀಡಿದೆ. ಅವರು ನನ್ನನ್ನು ಬಾಲ್ಯದಿಂದಲೂ ನೋಡಿದ್ದಾರೆ. ಅವರ ಜತೆ ನನಗೆ ವಿಶೇಷ ಬಾಂಧವ್ಯ ಇದೆ. ಸಿನಿಮಾದಲ್ಲಿ ಪಾತ್ರ ಹೇಗೇ ಇರಲಿ, ಈ ಪ್ರಾಜೆಕ್ಟ್​ನ ಭಾಗವಾಗಲು ನನಗೆ ಖುಷಿ ಇದೆ. ಬೆಳ್ಳಿ ಪರದೆಮೇಲೆ ರಜನಿಕಾಂತ್ ಮತ್ತು ನನ್ನನ್ನು ಒಟ್ಟಿಗೆ ನೋಡಿ ಫ್ಯಾನ್ಸ್ ಖುಷಿಪಡುತ್ತಾರೆ ಎಂಬ ಬಗ್ಗೆ ನನಗೆ ಖಾತ್ರಿ ಇದೆ’ ಎಂದಿದ್ದಾರೆ ಶಿವರಾಜ್​ಕುಮಾರ್. ಅವರ ಭಾಗದ ಶೂಟಿಂಗ್ ಬೆಂಗಳೂರು ಅಥವಾ ಮೈಸೂರಿನಲ್ಲಿ ನಡೆಯಲಿದೆ. ಆಗಸ್ಟ್​ ತಿಂಗಳಿಂದ ಚಿತ್ರೀಕರಣ ಆರಂಭವಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ
Image
ಕನ್ನಡದ ‘ಟಾಕೀಸ್​’ ಲಾಂಚ್​ ಮಾಡಿದ ಶಿವಣ್ಣ; ಇದರಲ್ಲಿ ಇದ್ದಾರೆ ಸಾವಿರಕ್ಕೂ ಹೆಚ್ಚು ಕಲಾವಿದರು
Image
‘ಮಗಳ ಪ್ರೊಡಕ್ಷನ್​ನಲ್ಲಿ ನಾನೂ ಒಂದು ವೆಬ್ ಸೀರಿಸ್ ಮಾಡ್ತಾ ಇದೀನಿ’; ಶಿವರಾಜ್​ಕುಮಾರ್ ಅಚ್ಚರಿಯ ಘೋಷಣೆ
Image
ಭೂಗತ ಲೋಕದ ಕಥೆಯಲ್ಲಿ ಶಿವರಾಜ್​​ಕುಮಾರ್; ‘ಓಂ’ ರೀತಿಯಲ್ಲಿ ಹೊಸ ಸಿನಿಮಾ
Image
ದುನಿಯಾ ವಿಜಯ್ ನಿರ್ದೇಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಶಿವರಾಜ್​ಕುಮಾರ್

ಇದನ್ನೂ ಓದಿ: ರಜಿನಿಕಾಂತ್​- ನಾನು ಒಳ್ಳೆಯ ಫ್ರೆಂಡ್ಸ್​, ಆದರೆ ಒಂದು ವಿಚಾರದ ಹೊರತಾಗಿ; ಎಂದ ಕಮಲ್​ ಹಾಸನ್​; ಏನದು?

ಈ ಚಿತ್ರಕ್ಕೆ ಐಶ್ವರ್ಯಾ ರೈ ನಾಯಕಿ

ರಜನಿಕಾಂತ್ ಹಾಗೂ ಐಶ್ವರ್ಯಾ ರೈ ಇಬ್ಬರೂ ‘ರೋಬೋ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಆ ಬಳಿಕ ಐಶ್ವರ್ಯಾ ರೈ ಅವರು ಮತ್ತೆ ದಕ್ಷಿಣದತ್ತ ಮುಖ ಮಾಡಿರಲಿಲ್ಲ. ಈಗ ಅವರು ಕುಟುಂಬದ ಜವಾಬ್ದಾರಿಗಳನ್ನು ನಿಭಾಯಿಸುವುದರಲ್ಲಿ ಬ್ಯುಸಿ ಆಗಿದ್ದಾರೆ. ಈ ಮಧ್ಯೆ ಐಶ್ವರ್ಯಾ ರೈ ಮತ್ತೆ ದಕ್ಷಿಣ ಭಾರತದತ್ತ ಮುಖ ಮಾಡುತ್ತಿದ್ದಾರೆ. ಅವರು ರಜನಿಕಾಂತ್ ನಟನೆಯ 169ನೇ ಚಿತ್ರಕ್ಕೆ ನಾಯಕಿ ಆಗಿ ಆಯ್ಕೆ ಆಗಿದ್ದಾರೆ ಎಂದು ವರದಿ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ