AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರೇ ನನಗೆ ದೇವರು’; ಯುವತಿಯ ಕರಗಿದ ಕನಸಿಗೆ ಮತ್ತೆ ಜೀವ ತುಂಬಿದ ಸೋನು ಸೂದ್

ಆಂಧ್ರಪ್ರದೇಶದ ದೇವಿ ಕುಮಾರಿ ಬಿಎಎಸ್​ಸಿ ಓದುವ ಕನಸು ಕಾಣುತ್ತಿದ್ದರು. ಆದರೆ ಕುಟುಂಬದ ಆರ್ಥಿಕ ಸ್ಥಿತಿ ಆಕೆಯ ವ್ಯಾಸಂಗಕ್ಕೆ ಪೂರಕವಾಗಿರಲಿಲ್ಲ. ಈ ಬಗ್ಗೆ ಅಜಯ್ ಡೇವಿಡ್ ಎಂಬುವವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸೋನು ಸೂದ್ ಬಳಿ ಮನವಿ ಮಾಡಿದ್ದರು. ಇದಕ್ಕೆ ಸೋನು ಸೂದ್ ಉತ್ತರಿಸಿದ್ದಾರೆ.

‘ಅವರೇ ನನಗೆ ದೇವರು’; ಯುವತಿಯ ಕರಗಿದ ಕನಸಿಗೆ ಮತ್ತೆ ಜೀವ ತುಂಬಿದ ಸೋನು ಸೂದ್
ಸೋನು ಸೂದ್
TV9 Web
| Edited By: |

Updated on: Jul 22, 2024 | 2:10 PM

Share

ಬಾಲಿವುಡ್​ನ ಖ್ಯಾತ ನಟ ಸೋನು ಸೂದ್ ತಮ್ಮ ಭರವಸೆಯನ್ನು ಉಳಿಸಿಕೊಂಡಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಬಡ ವಿದ್ಯಾರ್ಥಿನಿಗೆ ಅವರು ಸಹಾಯ ಮಾಡಿದ್ದಾರೆ. ಈ ಮೂಲಕ ಅವರು ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದಿದ್ದಾರೆ. ಕೊವಿಡ್ ಕಾಣಿಸಿಕೊಂಡ ನಂತರದಲ್ಲಿ ಸೋನು ಸೂದ್ ಜನರ ಸಹಾಯಕ್ಕೆ ನಿಂತರು. ಅಲ್ಲಿಂದ ಇಲ್ಲಿಯವರೆಗೆ ಅವರು ಸಾಮಾಜಿಕ ಕೆಲಸಗಳನ್ನು ಮಾಡುತ್ತಲೇ ಬಂದಿದ್ದಾರೆ.

ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಆಸ್ಪರಿ ಮಂಡಲದ ಬಾಣವನೂರಿನ ದೇವಿ ಕುಮಾರಿ ಬಿಎಎಸ್​ಸಿ ಓದುವ ಕನಸು ಕಾಣುತ್ತಿದ್ದರು. ಆದರೆ ಕುಟುಂಬದ ಆರ್ಥಿಕ ಸ್ಥಿತಿ ಆಕೆಯ ವ್ಯಾಸಂಗಕ್ಕೆ ಪೂರಕವಾಗಿರಲಿಲ್ಲ. ಈ ಬಗ್ಗೆ ಅಜಯ್ ಡೇವಿಡ್ ಎಂಬುವವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸೋನು ಸೂದ್ ಬಳಿ ಮನವಿ ಮಾಡಿದ್ದರು. ಸಹಾಯ ಮಾಡುವಂತೆ ಕೋರಿದ್ದರು.

ಇದನ್ನು ನೋಡಿದ ಸೋನು ಸೂದ್ ತಕ್ಷಣ ಪ್ರತಿಕ್ರಿಯಿಸಿದ್ದಾರೆ. ‘ಯಾವುದೇ ಸಂದರ್ಭದಲ್ಲೂ ನಿಮ್ಮ ಅಧ್ಯಯನವನ್ನು ನಿಲ್ಲಿಸಬೇಡಿ. ಕಾಲೇಜಿಗೆ ಹೋಗಲು ಸಿದ್ಧರಾಗಿರಿ’ ಎಂದು ಅವರು ಪ್ರತಿಕ್ರಿಯೆ ನೀಡಿದ್ದರು. ಈಗ ಕೊಟ್ಟ ಮಾತಿನಂತೆ ಸೋನು ಸೂದ್ ದೇವಿ ಕುಮಾರಿಯ ವಿದ್ಯಾಭ್ಯಾಸಕ್ಕೆ ಅಗತ್ಯ ನೆರವು ನೀಡಿದ್ದಾರೆ. ಇದರಿಂದ ಮನೆಯಲ್ಲಿ ವಿದ್ಯಾರ್ಥಿನಿಯರ ಸಂತಸಕ್ಕೆ ಮಿತಿಯೇ ಇಲ್ಲದಂತಾಗಿದೆ.

ಇದನ್ನೂ ಓದಿ: ಸೋನು ಸೂದ್ ವಾಟ್ಸಾಪ್ ಖಾತೆ ಬ್ಲಾಕ್; ಈ ತಪ್ಪು ಮಾಡಿದರೆ ನಿಮಗೂ ಇದೇ ಗತಿ

ಸೋನು ಸೂದ್ ಅವರ ಭಾವಚಿತ್ರವನ್ನು ಪ್ರಿಂಟ್ ಮಾಡಿಸಿ ಅದನ್ನು ಹಿಡಿದು ದೇವಿ ಕುಮಾರಿ ಅವರು ಧನ್ಯವಾದ ಹೇಳಿದ್ದಾರೆ. ‘ನಮ್ಮ ಕುಟುಂಬ ಆರ್ಥಿಕವಾಗಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಆದರೆ, ನನಗೆ ಅಧ್ಯಯನದಲ್ಲಿ ತುಂಬಾ ಆಸಕ್ತಿ. ಮನೆಯ ಪರಿಸ್ಥಿತಿಯಿಂದಾಗಿ ನನ್ನ ತಂದೆ ತಾಯಿ ನನ್ನ ಓದನ್ನು ಮಧ್ಯದಲ್ಲಿ ನಿಲ್ಲಿಸಲು ಬಯಸಿದ್ದರು. ನನ್ನ ಕನಸುಗಳೆಲ್ಲ ಕರಗಿತು ಎಂದು ಬೇಸರದಲ್ಲಿ ಇದ್ದೆ. ಅಂತಹ ಸಮಯದಲ್ಲಿ ಸೋನು ಸೂದ್ ಅವರು ನನ್ನ ಬೆಂಬಲಕ್ಕೆ ನಿಂತರು. ಅವರು ನನ್ನ ಅಧ್ಯಯನಕ್ಕೆ ಬೇಕಾದ ಸಹಾಯವನ್ನು ಮಾಡಿದರು. ಅವರೀಗ ನನಗೆ ದೇವರ ಸಮಾನ’ ಎಂದು ದೇವಿ ಕುಮಾರಿ ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು