AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ನಟ ಸೂರ್ಯ ಕೂಡ ರಾಜಕೀಯಕ್ಕೆ ಬರ್ತಾರಾ? ಸ್ಪಷ್ಟನೆ ಕೊಟ್ಟ ನಟ

ತಮಿಳು ನಟ ಸೂರ್ಯ ರಾಜಕೀಯ ಪ್ರವೇಶದ ಬಗ್ಗೆ ಹಬ್ಬಿದ್ದ ವದಂತಿಗಳಿಗೆ ತೆರೆಳಿದಿದ್ದಾರೆ. ತಾವು ರಾಜಕೀಯಕ್ಕೆ ಬರುವ ಯಾವುದೇ ಯೋಚನೆ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಜಕೀಯ ಬೆಳವಣಿಗೆಗಳನ್ನು ದೂರದಿಂದಲೇ ಸೂಕ್ಷ್ಮವಾಗಿ ಗಮನಿಸುತ್ತೇನೆ ಹೊರತು, ತಾನು ನೇರವಾಗಿ ರಾಜಕೀಯ ಪ್ರವೇಶಿಸುವುದಿಲ್ಲ ಎಂದು ನಟ ಸೂರ್ಯ ಖಡಕ್ ಆಗಿ ತಿಳಿಸಿದ್ದಾರೆ.

ತಮಿಳು ನಟ ಸೂರ್ಯ ಕೂಡ ರಾಜಕೀಯಕ್ಕೆ ಬರ್ತಾರಾ? ಸ್ಪಷ್ಟನೆ ಕೊಟ್ಟ ನಟ
ಸೂರ್ಯ
ರಾಜೇಶ್ ದುಗ್ಗುಮನೆ
|

Updated on: Nov 09, 2026 | 1:32 PM

Share

ಮುಖ್ಯಾಂಶಗಳು

  • ರಾಜಕೀಯ ಪ್ರವೇಶದ ಬಗ್ಗೆ ಮೌನ ಮುರಿದ ನಟ ಸೂರ್ಯ
  • ನನಗೆ ಸರಿಯಾದ ದಾರಿ ತಿಳಿಯದಿದ್ದರೂ ರಾಜಕೀಯಕ್ಕೆ ಬರಲ್ಲ ಎಂದ ಸ್ಟಾರ್ ನಟ
  • ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂರ್ಯ ಕರೆ!

ತಮಿಳು ಚಿತ್ರರಂಗದಲ್ಲಿ ನಟರು ರಾಜಕೀಯಕ್ಕೆ ಪ್ರವೇಶಿಸುವುದು ಹೊಸದಲ್ಲ. ಈಗಾಗಲೇ ಎಂಜಿಆರ್ ಸೇರಿದಂತೆ ಹಲವು ದಿಗ್ಗಜರು ರಾಜಕೀಯದಲ್ಲಿ ತಮ್ಮದೇ ಆದ ಹೆಜ್ಜೆ ಗುರುತುಗಳನ್ನು ಮೂಡಿಸಿದ್ದಾರೆ. ಇದೀಗ ದಳಪತಿ ವಿಜಯ್ ಕೂಡ ರಾಜಕೀಯ ರಂಗಪ್ರವೇಶ ಮಾಡಿ ದೊಡ್ಡ ಸಂಚಲನ ಸೃಷ್ಟಿಸಿದ್ದಾರೆ. ಈ ಬೆಳವಣಿಗೆಗಳ ನಡುವೆ, ತಮಿಳಿನ ಮತ್ತೋರ್ವ ಸ್ಟಾರ್ ನಟ ಸೂರ್ಯ ಅವರು ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಮಹತ್ವದ ಸ್ಪಷ್ಟನೆ ನೀಡಿದ್ದಾರೆ.

ತಮ್ಮ ಸಿನಿಮಾದ ಪ್ರಚಾರದ ವೇಳೆ ನಟ ಸೂರ್ಯ ಅವರು ರಾಜಕೀಯದ ಕುರಿತು ಮಾತನಾಡಿದ್ದಾರೆ. ಅಭಿಮಾನಿಗಳು ಹಾಗೂ ಜನಸಾಮಾನ್ಯರಲ್ಲಿ ಸೂರ್ಯ ರಾಜಕೀಯಕ್ಕೆ ಬರುತ್ತಾರಾ ಎನ್ನುವ ಕುತೂಹಲ ಬಹಳ ದಿನಗಳಿಂದ ಇತ್ತು. ಈ ಎಲ್ಲಾ ಊಹಾಪೋಹಗಳಿಗೆ ತೆರೆಎಳೆದಿರುವ ಸೂರ್ಯ, ತಾವು ರಾಜಕೀಯಕ್ಕೆ ಬರುವ ಯಾವುದೇ ಯೋಚನೆ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತಾವು ರಾಜಕೀಯಕ್ಕೆ ಪ್ರವೇಶಿಸುತ್ತಿಲ್ಲ ಎಂದ ಮಾತ್ರಕ್ಕೆ ತಮಗೆ ರಾಜಕೀಯದ ಬಗ್ಗೆ ಅಸಮಾಧಾನವಿಲ್ಲ ಎಂದು ಸೂರ್ಯ ತಿಳಿಸಿದ್ದಾರೆ. ತಾವು ಬಹಳ ಸೂಕ್ಷ್ಮವಾಗಿ ಹಾಗೂ ಮೌನವಾಗಿ ರಾಜಕೀಯ ಬೆಳವಣಿಗೆಗಳನ್ನು ಗಮನಿಸುತ್ತಿರುವುದಾಗಿ ಅವರು ಹೇಳಿದ್ದಾರೆ. ಯುವಜನತೆ ರಾಜಕೀಯದ ಬಗ್ಗೆ ಸಂಪೂರ್ಣ ಅರಿವು ಮತ್ತು ಸ್ಪಷ್ಟತೆಯೊಂದಿಗೆ ರಾಜಕೀಯ ರಂಗಕ್ಕೆ ಮುಂದೆ ಬರಬೇಕು ಎಂದು ಅವರು ಕರೆ ನೀಡಿದ್ದಾರೆ.

ದೇಶದಲ್ಲಿ ಶಿಕ್ಷಣ ವ್ಯವಸ್ಥೆಗೆ ರಾಜಕಾರಣಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂರ್ಯ ಅಭಿಪ್ರಾಯಪಟ್ಟಿದ್ದಾರೆ. ಭ್ರಷ್ಟಾಚಾರವನ್ನು ಬೇರೆ ಯಾರೋ ಬಂದು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಪ್ರತಿಯೊಬ್ಬರೂ ಸಂಪೂರ್ಣ ಸಮರ್ಪಣಾ ಭಾವದಿಂದ ರಾಜಕೀಯ ಕ್ಷೇತ್ರಕ್ಕೆ ಬರಬೇಕು ಎಂದರು. ನನಗೆ ಸರಿಯಾದ ದಾರಿ ತಿಳಿದಿಲ್ಲದಿದ್ದರೂ ಸಹ ನಾನು ಎಂದಿಗೂ ರಾಜಕೀಯಕ್ಕೆ ಕಾಲಿಡುವುದಿಲ್ಲ ಎಂದು ಸೂರ್ಯ ಖಡಕ್ ಆಗಿ ನುಡಿದಿದ್ದಾರೆ.

ಇದನ್ನೂ ಓದಿ: ‘ರಾಮಾಯಣ’ದ ನಡುವೆಯೂ ಸ್ಟಡಿಯಾಗಿ ನಿಂತ ಸೂರ್ಯ, ಗಳಿಕೆ ಎಷ್ಟು?

ತಮಿಳುನಾಡಿನಲ್ಲಿ ನಟರು ರಾಜಕೀಯಕ್ಕೆ ಧುಮುಕುತ್ತಿರುವ ಈ ಸಮಯದಲ್ಲಿ, ಸೂರ್ಯ ಅವರು ಮಾತ್ರ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ವಿಜಯ್ ರಾಜಕೀಯ ಹಾದಿಯನ್ನು ಆಯ್ಕೆ ಮಾಡಿಕೊಂಡರೆ, ಸೂರ್ಯ ಮಾತ್ರ ಕೇವಲ ಹೊರಗಿನಿಂದ ರಾಜಕೀಯ ವಿದ್ಯಮಾನಗಳನ್ನು ವೀಕ್ಷಿಸುವುದೇ ಸಾಕು ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಪ್ರವೇಶದ ವದಂತಿಗಳಿಗೆ ನಟ ಸೂರ್ಯ ಅಧಿಕೃತವಾಗಿ ತೆರೆ ಎಳೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!
ದೀಪಾವಳಿ ಹಬ್ಬದ ಹಿನ್ನೆಲೆ ಕೆಆರ್ ಮಾರುಕಟ್ಟೆಯಲ್ಲಿ ಜನಸಾಗರ
ದೀಪಾವಳಿ ಹಬ್ಬದ ಹಿನ್ನೆಲೆ ಕೆಆರ್ ಮಾರುಕಟ್ಟೆಯಲ್ಲಿ ಜನಸಾಗರ
ದೀಪಾವಳಿ ಪಟಾಕಿ ದುರಂತ: ಮೊದಲ ದಿನವೇ ಮಕ್ಕಳೂ ಸೇರಿ 32 ಮಂದಿಗೆ ಗಾಯ
ದೀಪಾವಳಿ ಪಟಾಕಿ ದುರಂತ: ಮೊದಲ ದಿನವೇ ಮಕ್ಕಳೂ ಸೇರಿ 32 ಮಂದಿಗೆ ಗಾಯ
ಇಂದು ಈ ರಾಶಿಯವರು ಹಿತಶತ್ರುಗಳ ಬಗ್ಗೆ ಜಾಗೃತೆವಹಿಸಿ
ಇಂದು ಈ ರಾಶಿಯವರು ಹಿತಶತ್ರುಗಳ ಬಗ್ಗೆ ಜಾಗೃತೆವಹಿಸಿ
ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ಸಿಎಂ ಗಮನಕ್ಕೆ ತಂದ ಹಾಸನ ಡಿಸಿ
ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ಸಿಎಂ ಗಮನಕ್ಕೆ ತಂದ ಹಾಸನ ಡಿಸಿ
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಕೌಂಟರ್
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಕೌಂಟರ್