Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ಮೃತಪಟ್ಟ ಅಭಿಮಾನಿ ಮನೆಗೆ ಭೇಟಿ ನೀಡಿ ಭಾವುಕರಾದ ನಟ ಸೂರ್ಯ

ಜಗದೀಶ್ ಎಂಬುವವರು ಅಪಘಾತದಲ್ಲಿ ಇತ್ತೀಚೆಗೆ ಮೃತಪಟ್ಟಿದ್ದರು. ಅವರು ಸೂರ್ಯ ಅವರ ಅಪ್ಪಟ ಅಭಿಮಾನಿ ಆಗಿದ್ದರು. ಸೂರ್ಯ ಅವರು ಜಗದೀಶ್ ಸಾವಿನ ಸುದ್ದಿ ಕೇಳಿ ಅವರ ಮನೆಗೆ ಭೇಟಿ ನೀಡಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ಅಭಿಮಾನಿ ಮನೆಗೆ ಭೇಟಿ ನೀಡಿ ಭಾವುಕರಾದ ನಟ ಸೂರ್ಯ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:May 31, 2022 | 11:43 AM

ಅಭಿಮಾನಿಗಳಿಗೆ ತಮ್ಮ ನೆಚ್ಚಿನ ನಟನ ಮೇಲೆ ಎಷ್ಟು ಪ್ರೀತಿ ಇರುತ್ತದೆಯೋ ಸ್ಟಾರ್​ಗಳಿಗೂ ಅಷ್ಟೇ ಪ್ರೀತಿ ತಮ್ಮ ಫ್ಯಾನ್ಸ್ ಮೇಲೆ ಇರುತ್ತದೆ. ಇದು ಅನೇಕ ಬಾರಿ ಸಾಬೀತಾಗಿದೆ. ಅನೇಕ ಸ್ಟಾರ್ ನಟ-ನಟಿಯರು ಸಹಾಯ ಕೇಳಿಕೊಂಡು ಬಂದ ಅಭಿಮಾನಿಗಳಿಗೆ ಸಹಾಯ ಹಸ್ತ ಚಾಚಿದ ಉದಾಹರಣೆ ಸಾಕಷ್ಟಿದೆ. ಈಗ ತಮಿಳು ನಟ ಸೂರ್ಯ ಅವರು (Actor Suriya) ಅಪಘಾತದಲ್ಲಿ ಮೃತಪಟ್ಟ ಅಭಿಮಾನಿ ಮನೆಗೆ ತೆರಳಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಅಷ್ಟೇ ಅಲ್ಲ ಸಹಾಯದ ಹಸ್ತ ಚಾಚಿದ್ದಾರೆ.

ಜಗದೀಶ್ ಎಂಬುವವರು ಅಪಘಾತದಲ್ಲಿ ಇತ್ತೀಚೆಗೆ ಮೃತಪಟ್ಟಿದ್ದರು. ಅವರು ಸೂರ್ಯ ಅವರ ಅಪ್ಪಟ ಅಭಿಮಾನಿ ಆಗಿದ್ದರು. ಜಗದೀಶ್​ ನಮಕ್ಕಲ್​ನಲ್ಲಿರುವ ಸೂರ್ಯ ಫ್ಯಾನ್​ ಕ್ಲಬ್​ನ ಕಾರ್ಯದರ್ಶಿ ಆಗಿದ್ದರು. ಸೂರ್ಯ ಅವರು ಜಗದೀಶ್ ಸಾವಿನ ಸುದ್ದಿ ಕೇಳಿ ಅವರ ಮನೆಗೆ ಭೇಟಿ ನೀಡಿದ್ದಾರೆ. ಜಗದೀಶ್ ಕುಟುಂಬಕ್ಕೆ ಅವರು ಸಾಂತ್ವನ ಹೇಳಿದ್ದಾರೆ. ಜತೆಗೆ ಆರ್ಥಿಕ ಸಹಾಯ ಮಾಡುವ ಭರವಸೆ ನೀಡಿದ್ದಾರೆ. ಜಗದೀಶ್ ಅವರ ಪತ್ನಿಗೆ ಕೆಲಸ ಕೊಡಿಸುವುದು ಹಾಗೂ ಅವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ತಾವೇ ವಹಿಸಿಕೊಳ್ಳುವುದಾಗಿ ಅವರು ಹೇಳಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ
Image
ಹೇಗಿದೆ ಚಾರ್ಲಿ ಜರ್ನಿ? ಸಾಂಗ್ ಮೂಲಕ ವಿವರಿಸಿದ ರಕ್ಷಿತ್ ಶೆಟ್ಟಿ
Image
ಕಮಲ್​ ಹಾಸನ್​ ನಟನೆಯ ‘ವಿಕ್ರಮ್​’ ಚಿತ್ರಕ್ಕೆ 13 ಕಡೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ; ಸಿಕ್ಕ ಪ್ರಮಾಣಪತ್ರ ಯಾವುದು?
Image
ಕೃತಿ ಶೆಟ್ಟಿಗೆ ಪ್ರ್ಯಾಂಕ್ ಮಾಡಿದ ಆ್ಯಂಕರ್​; ನಿಲ್ಲಲೇ ಇಲ್ಲ ನಟಿಯ ಕಣ್ಣೀರು
Image
‘ಜೈ ಭೀಮ್​’ ಚಿತ್ರ ಮಾಡಿದ್ದ ಸೂರ್ಯ, ಜ್ಯೋತಿಕಾ ವಿರುದ್ಧ ಎಫ್​ಐಆರ್​ ದಾಖಲಿಸಲು ಕೋರ್ಟ್​ ಆದೇಶ

ಜಗದೀಶ್ ಮನೆಗೆ ಸೂರ್ಯ ಭೇಟಿ ನೀಡಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವೈರಲ್ ಆದ ಪೋಸ್ಟ್​ನಲ್ಲಿ ಸೂರ್ಯ ಅವರು ಜಗದೀಶ್ ಫೋಟೋದ ಎದುರು ನಿಂತಿದ್ದಾರೆ. ಈ ವೇಳೆ ಅವರು ಭಾವುಕರಾಗಿರುವುದು ಕಂಡು ಬಂತು. ಸೂರ್ಯ ಅವರ ಭೇಟಿ ಬಗ್ಗೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ನಟನಿಂದ ಈ ರೀತಿ ಕಾರ್ಯ ಆಗಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಸೂರ್ಯ ಅವರು ತಮಿಳು ಸಿನಿಮಾ ‘ಇಟಿ’ ಚಿತ್ರದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿದ್ದರು. ನಿರ್ದೇಶಕ ಬಾಲ ಅವರ ಜತೆಗೆ ಇನ್ನೂ ಹೆಸರಿಡದ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. 2003ರ ನಂತರ ಇಬ್ಬರೂ ಇದೇ ಮೊದಲ ಬಾರಿಗೆ ಒಂದಾಗುತ್ತಿದ್ದಾರೆ.

‘ಸೂರರೈ ಪೊಟ್ರು’ ಹಿಂದಿಗೆ ರಿಮೇಕ್ ಆಗುತ್ತಿದೆ. ಈ ಚಿತ್ರಕ್ಕೆ ಅಕ್ಷಯ್ ಕುಮಾರ್ ಹೀರೋ. ಈ ಚಿತ್ರವನ್ನು ಸೂರ್ಯ ಅವರು ತಮ್ಮ 2ಡಿ ಎಂಟರ್​ಟೇನ್​ಮೆಂಟ್ ಪ್ರೊಡಕ್ಷನ್ ಹೌಸ್ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಮೂಲ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಕೊವಿಡ್ ಕಾರಣದಿಂದ ಸಿನಿಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಯಿತು. ಇದನ್ನು ಬಾಲಿವುಡ್​ ಮಂದಿ ಹೇಗೆ ಒಪ್ಪಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ‘ವಿಕ್ರಮ್’ ಸಿನಿಮಾದಲ್ಲಿ ಸೂರ್ಯ ಅತಿಥಿ ಪಾತ್ರ ಮಾಡಿದ್ದಾರೆ. ಕಮಲ್ ಹಾಸನ್ ನಟನೆಯ ಈ ಸಿನಿಮಾ ಜೂನ್ 3ರಂದು ತೆರೆಗೆ ಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:43 am, Tue, 31 May 22

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ