AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾವು ಸ್ಪರ್ಧಿಸೋ ಕ್ಷೇತ್ರದ ಹೆಸರು ಘೋಷಿಸಿದ ದಳಪತಿ ವಿಜಯ್; ಮೈತ್ರಿ ವಿಚಾರವಾಗಿ ಅಚ್ಚರಿಯ ಹೇಳಿಕೆ

ದಳಪತಿ ವಿಜಯ್ ಅವರು ತಮ್ಮ ಹೊಸ ರಾಜಕೀಯ ಪಕ್ಷದೊಂದಿಗೆ ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಮಧುರೈನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಅವರು ಮುಖ್ಯಮಂತ್ರಿ ಸ್ಟಾಲಿನ್ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ. ಮೈತ್ರಿ ಮಾಡಿಕೊಳ್ಳುವ ವಿಚಾರದಲ್ಲೂ ತಮ್ಮ ನಿಲುವು ಏನು ಎಂದು ಸ್ಪಷ್ಟಪಡಿಸಿದ್ದಾರೆ.

ತಾವು ಸ್ಪರ್ಧಿಸೋ ಕ್ಷೇತ್ರದ ಹೆಸರು ಘೋಷಿಸಿದ ದಳಪತಿ ವಿಜಯ್; ಮೈತ್ರಿ ವಿಚಾರವಾಗಿ ಅಚ್ಚರಿಯ ಹೇಳಿಕೆ
ವಿಜಯ್
ರಾಜೇಶ್ ದುಗ್ಗುಮನೆ
|

Updated on:Aug 22, 2025 | 8:13 AM

Share

ನಟ ಹಾಗೂ ಟಿವಿಕೆ ಪಕ್ಷದ ಅಧ್ಯಕ್ಷ ದಳಪತಿ ವಿಜಯ್ (Thalapthy Vijay) ಅವರು ಈಗ ರಾಜಕೀಯಕ್ಕೆ ಎಂಟ್ರಿ ಕೊಡಲು ರೆಡಿ ಆಗಿದ್ದಾರೆ. ಇದಕ್ಕೂ ಮುನ್ನ ತಮಿಳುನಾಡಿನ ನಾನಾ ಕಡೆಗಳಲ್ಲಿ ಅವರು ರ‍್ಯಾಲಿ, ಸಮಾವೇಶಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ವಿಜಯ್ ಅವರು ಮಧುರೈನಲ್ಲಿ ಆಗಸ್ಟ್ 21ರಂದು ದೊಡ್ಡ ಮಟ್ಟದ ಸಮಾವೇಶ ಆಯೋಜಿಸಿದ್ದರು. ಇದಕ್ಕೆ ದೊಡ್ಡ ಸಂಖ್ಯೆಯಲ್ಲಿ ಜನರು ಹರಿದು ಬಂದಿದ್ದಾರೆ. ಈ ವೇಳೆ ಅವರು ಹಲವು ಘೋಷಣೆಗಳನ್ನು ಮಾಡಿದರು. ನೆರೆದ ಜನರನ್ನು ನೋಡಿ ಅವರು ಭಾವುಕರಾದರು.

ತಮಿಳುನಾಡಿನಲ್ಲಿ 234 ವಿಧಾನಸಭಾ ಕ್ಷೇತ್ರಗಳು ಇವೆ. ಎಲ್ಲಾ ಕ್ಷೇತ್ರಗಳಲ್ಲಿ ಇವರ ಪಕ್ಷ ಸ್ಪರ್ಧೆ ಮಾಡೋದಾಗಿ ಘೋಷಣೆ ಮಾಡಿದ್ದಾರೆ. ‘ನಾವು ಎಲ್ಲಾ 234 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದೇವೆ. ನಿಮ್ಮ ಮನೆಯಿಂದ ಸ್ಪರ್ಧಿಸುವ ಅಭ್ಯರ್ಥಿ ಮತ್ತು ನಾನು ಇಬ್ಬರೂ ಒಂದೇ ಎಂದುಕೊಳ್ಳಿ. ಅವರಿಗೆ ಮತ ಹಾಕುವುದು ನನಗೆ ಮತ ಹಾಕಿದಂತೆ’ ಎಂದು ದಳಪತಿ ವಿಜಯ್ ಹೇಳಿದ್ದಾರೆ. ಮಧುರೈನ ಪೂರ್ವ ಕ್ಷೇತ್ರದಿಂದ ವಿಜಯ್ ಸ್ಪರ್ಧೆ ಮಾಡೋದಾಗಿ ಹೇಳಿದ್ದಾರೆ. ಅಲ್ಲದೆ ಯಾವುದೇ ಪಕ್ಷದ ಜೊತೆ ಮೈತ್ರಿ ಕೂಡ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ
Image
ಬಾಲಿವುಡ್​ ಮೇಲೆ ಮುನಿಸಿಕೊಂಡ ರಾಜಮೌಳಿ? ಕಾರಣ ಏನು?
Image
ಸ್ವರಾ​ಗೆ ಸಂಸದೆ ಮೇಲೆ ಕ್ರಶ್; ಲೈಂಗಿಕ ಆಸಕ್ತಿ ರಿವೀಲ್ ಮಾಡಿ ಟ್ರೋಲ್
Image
ಒಂದೇ ವಾರಕ್ಕೆ ಸುಸ್ತಾದ ‘ಕೂಲಿ’; ಹೀನಾಯ ಕಲೆಕ್ಷನ್​​​ ಆರಂಭಿಸಿದ ಸಿನಿಮಾ
Image
‘ಕ್ವಾಟ್ಲೆ ಕಿಚನ್’ ಶೋ​ನಿಂದ ದಿಢೀರ್​ ಹೊರ ನಡೆದ ಕೆಂಪಮ್ಮ; ಇಲ್ಲಿದೆ ವಿವರ

ಇದನ್ನೂ ಓದಿ: ದಳಪತಿ ವಿಜಯ್ ಕೊನೆಯ ಸಿನಿಮಾಗೆ ಪಡೆದ ಸಂಭಾವನೆ ಇಷ್ಟೊಂದಾ?

ಮುಖ್ಯಮಂತ್ರಿ ಸ್ಟಾಲಿನ್ ಅವರನ್ನು ನೇರವಾಗಿ ಟೀಕೆ ಮಾಡುವ ಕೆಲಸವನ್ನು ವಿಜಯ್ ಮಾಡಿದ್ದಾರೆ. ‘ಕಳೆದ 4 ವರ್ಷಗಳಲ್ಲಿ ಸಾರ್ವಜನಿಕ ನೀತಿ, ನಿರೂಪಣೆ ಮತ್ತು ದುರಾಡಳಿತದ ಬಗ್ಗೆ ನಾವು ಪ್ರಶ್ನಿಸಿದಾಗ ಮುಖ್ಯಮಂತ್ರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅವರಿಗೆ ಕಾಳಜಿ ಇದ್ದಿದ್ದರೆ ಅವರು ಪ್ರತಿಯೊಂದು ದೂರಿಗೂ ಉತ್ತರಿಸುತ್ತಿದ್ದರು’ ಎಂದು ವಿಜಯ್ ಟೀಕಿಸಿದ್ದಾರೆ.

ವಿಜಯ್ ಸಮಾವೇಶ ಸಂಬಂಧಿತ ಟ್ವೀಟ್

ಸಮಾವೇಶಕ್ಕೆ ದೊಡ್ಡ ಸಂಖ್ಯೆಯಲ್ಲಿ ಜನರು ಹರಿದು ಬಂದಿದ್ದರು. ಇದರಿಂದ ವಿಜಯ್ ಕೂಡ ಖುಷಿಯಾದರು. ಅವರು ಭಾವುಕರಾಗಿರುವುದು ಸ್ಪಷ್ಟವಾಗಿ ಕಂಡುಬಂತು. ವಿಜಯ್ ಅವರ ಕೊನೆಯ ಚಿತ್ರ ಎನ್ನಲಾದ ‘ಜನ ನಾಯಗನ್’ ಕೆಲಸಗಳು ನಡೆಯುತ್ತಿವೆ. ಈ ಚಿತ್ರ 2026ರ ಸಂಕ್ರಾಂತಿಗೆ ರಿಲೀಸ್ ಆಗಲಿದೆ. ಆ ಬಳಿಕ ಅವರು ರಾಜಕೀಯ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಚುನಾವಣೆಯಲ್ಲಿ ಅವರ ಪಕ್ಷ ಎಷ್ಟು ಸ್ಥಾನ ಗೆಲ್ಲುತ್ತದೆ ಎಂಬ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:01 am, Fri, 22 August 25