AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash Radhika Pandit: ಮದುವೆ ವಾರ್ಷಿಕೋತ್ಸವ ಪ್ರಯುಕ್ತ ನಂದಿಗಿರಿಧಾಮಕ್ಕೆ ಭೇಟಿ ನೀಡಿದ ಯಶ್,​ ರಾಧಿಕಾ ದಂಪತಿ

ನಟ ಯಶ್​ ಮತ್ತು ನಟಿ ರಾಧಿಕಾ ಪಂಡಿತ್​ ತಮ್ಮ 6ನೇ ಮದುವೆ ವಾರ್ಷಿಕೋತ್ಸವ ಪ್ರಯುಕ್ತ ಚಿಕ್ಕಬಳ್ಳಾಪುರ ತಾಲ್ಲೂಕಿನ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಭೇಟಿ ನೀಡಿದ್ದಾರೆ.

Yash Radhika Pandit: ಮದುವೆ ವಾರ್ಷಿಕೋತ್ಸವ ಪ್ರಯುಕ್ತ ನಂದಿಗಿರಿಧಾಮಕ್ಕೆ ಭೇಟಿ ನೀಡಿದ ಯಶ್,​ ರಾಧಿಕಾ ದಂಪತಿ
ನಂದಿಗಿರಿಧಾಮಕ್ಕೆ ಭೇಟಿ ನೀಡಿದ ನಟ ಯಶ್ ನಟಿ ರಾಧಿಕಾ ದಂಪತಿ
TV9 Web
| Edited By: |

Updated on:Dec 10, 2022 | 7:06 PM

Share

ನಟ ಯಶ್ (Yash)​ ಮತ್ತು ನಟಿ ರಾಧಿಕಾ ಪಂಡಿತ್ (Radhika Pandit) ಇಬ್ಬರೂ ಒಟ್ಟಿಗೆ ಸಿನಿಮಾ ಜರ್ನಿ ಆರಂಭಿಸಿದವರು. ಮೊದಲು ಹಲವು ಧಾರಾವಾಹಿಗಳಲ್ಲಿ ನಟಿಸಿದ ಇವರಿಬ್ಬರೂ ಮುಂದೆ ಸಿನಿಮಾಗಳಲ್ಲಿಯೂ ಒಟ್ಟಿಗೆ ಅಭಿನಯಿಸಿದರು. ನಂತರ ಸ್ಯಾಂಡಲ್​ವುಡ್​ನಲ್ಲಿ ಕ್ಯೂಟ್​ ಪೇರ್ ಎಂದೇ ಪ್ರಸಿದ್ಧರಾದರು. ಬಳಿಕ ಯಶ್​ ಮತ್ತು ರಾಧಿಕಾ ಪಂಡಿತ್ ಅದ್ದೂರಿ ಮದುವೆ ಮಾಡಿಕೊಂಡರು. ಸ್ಯಾಂಡಲ್​ವುಡ್​ನ ಸ್ಟಾರ್​ ಜೋಡಿಗಳಲ್ಲಿ ಯಶ್​ ಮತ್ತು ರಾಧಿಕಾ ಪಂಡಿತ್​ ಜೋಡಿ ಕೂಡ ಒಂದು. ಸದ್ಯ ಈ ನಟ ಯಶ್​ ಮತ್ತು ನಟಿ ರಾಧಿಕಾ ಪಂಡಿತ್​ ತಮ್ಮ 6ನೇ ಮದುವೆ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ. ಸದ್ಯ ಮದುವೆ ವಾರ್ಷಿಕೋತ್ಸವದ ಹಿನ್ನೆಲೆ ಯಶ್​ ಮತ್ತು ರಾಧಿಕಾ ಪಂಡಿತ್ ದಂಪತಿ ನಂದಿಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತಾಗಿ ಸೋಶಿಯಲ್​ ಮೀಡಿಯಾದಲ್ಲಿ ಫೋಟೋಗಳ ಕೂಡ ವೈರಲ್​ ಆಗಿವೆ.

ಇದನ್ನೂ ಓದಿ: Yash Radhika Pandit: ಯಶ್, ರಾಧಿಕಾ ದಂಪತಿಗೆ ಇಂದು ಮದುವೆಯ 6ನೇ ವಾರ್ಷಿಕೋತ್ಸವದ ಸಂಭ್ರಮ

ಚಿಕ್ಕಬಳ್ಳಾಪುರ ತಾಲ್ಲೂಕಿನ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಸ್ಯಾಂಡಲ್​ವುಡ್​ ಕ್ಯೂಟ್ ಜೋಡಿ ಭೇಟಿ ನೀಡಿ ಕಾಲ ಕಳೆದಿದ್ದಾರೆ. ನಿನ್ನೆ (ಡಿ. 10) ಬೆಳಂಬೆಳಿಗ್ಗೆ ಯಶ್​ ಮತ್ತು ರಾಧಿಕಾ ಪಂಡಿತ್ ದಂಪತಿ ಗಿರಿಧಾಮದ ವಿವ್ ಪಾಯಿಂಟ್​ನಲ್ಲಿ ಕೆಲ ಕಾಲ ಕಳೆದಿದ್ದಾರೆ. ಮಳೆ ಹಾಗೂ ಮಂಜು ಇದ್ದ ಕಾರಣ ಗಿರಿಧಾಮದ ಕೆ.ಎಸ್.ಟಿ.ಡಿ.ಸಿಯ ಮಯೂರ ಪೈನ್ ಟಾಪ್ ಹೋಟಲ್​ನಲ್ಲಿ ಇಡ್ಲಿ ವಡಾ, ಮ್ಯಾಗಿ, ಮಸಾಲೆ ದೋಸೆ ತಿಂಡಿ ಸೇವಿಸಿದ್ದಾರೆ. ಹೋಟಲ್ ಸಿಬ್ಬಂದಿಯ ಸವಿರುಚಿಗೆ ದಂಪತಿ ಅಭಿನಂದನೆ ಸಲ್ಲಿಸಿದ್ದಾರೆ. ಬಳಿಕ ಯಶ್, ರಾಧಿಕಾ ದಂಪತಿ ಜೊತೆ ಹೋಟಲ್ ಸಿಬ್ಬಂದಿಗಳು ಪೋಟೊ ತೆಗೆಸಿಕೊಂಡಿದ್ದಾರೆ.

ನಟಿ ರಾಧಿಕಾ ಪಂಡಿತ್ ತಮ್ಮ 6ನೇ ವರ್ಷದ ಮದುವೆ ವಾರ್ಷಿಕೋತ್ಸಕ್ಕೆ ಕೆಲ ಫೋಟೋಗಳನ್ನು ಸಹ ಹಂಚಿಕೊಂಡಿದ್ದರು. ‘ಇದು ನಾವೇ, ಅನೇಕ ಸಿನಿಮಾಗಳು, ಲವಲವಿಕೆ ಜೀವನ, ಧಾರ್ಮಿಕ, ಗಂಭೀರ ಎಲ್ಲವೂ ಈ ಜೀವನದ ಮ್ಯಾಜಿಕಲ್ ವರ್ಷಗಳಾಗಿವೆ. ಈ ಆರು ವರ್ಷಗಳ ವೈವಾಹಿಕ ಜೀವನವನ್ನು ನಿಮ್ಮೊಂದಿಗೆ ನೈಜವಾಗಿಸಿದ್ದಕ್ಕಾಗಿ ಧನ್ಯವಾದಗಳು, ಮದುವೆ ವಾರ್ಷಿಕೋತ್ಸವದ ಶುಭಾಶಯಗಳು’ ಎಂದು ರಾಧಿಕಾ ಪಂಡಿತ್ ತಮ್ಮ ಪತಿ ಯಶ್​ಗೆ ಶುಭಕೋರಿದ್ದರು.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:01 pm, Sat, 10 December 22

Follow Us
ಹುಲಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ
ಹುಲಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ