Aditi Prabhudeva: ನಟಿ ಅದಿತಿ ಪ್ರಭುದೇವ ಪತಿ ಯಶಸ್​ ಇನ್ಸ್ಟಾಗ್ರಾಮ್ ಖಾತೆ ಹ್ಯಾಕ್ 

ನಟಿ ಅದಿತಿ ಪ್ರಭುದೇವ ಅವರ ಪತಿ ಯಶಸ್ (ಯಶಸ್ವಿ) ಅವರ ಸೋಶಿಯಲ್ ಮೀಡಿಯಾ ಖಾತೆಯನ್ನು ಯಾರೋ ಕಿಡಿಗೇಡಿಗಳು ಹ್ಯಾಕ್​ ಮಾಡಿದ್ದಾರೆ ಎನ್ನಲಾಗುತ್ತಿದೆ.

Aditi Prabhudeva: ನಟಿ ಅದಿತಿ ಪ್ರಭುದೇವ ಪತಿ ಯಶಸ್​ ಇನ್ಸ್ಟಾಗ್ರಾಮ್ ಖಾತೆ ಹ್ಯಾಕ್ 
ಅದಿತಿ ಪ್ರಭುದೇವ ಮತ್ತು ಯಶಸ್ (ಯಶಸ್ವಿ)
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 30, 2022 | 5:41 PM

ಸ್ಯಾಂಡಲ್​ವುಡ್​ನ ಬೇಡಿಕೆಯ ನಟಿಯರಲ್ಲಿ ಒಬ್ಬರಾದ ನಟಿ ಅದಿತಿ ಪ್ರಭುದೇವ (Aditi Prabhudeva) ಅವರು ಯಶಸ್ (ಯಶಸ್ವಿ) ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ನವೆಂಬರ್ 28 ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್​​ನ ಗಾಯತ್ರಿ ವಿಹಾರ ಗ್ರ್ಯಾಂಡ್​ನಲ್ಲಿ ಈ ಜೋಡಿ ಅದ್ದೂರಿಯಾಗಿ ಮದುವೆ ಮಾಡಿಕೊಂಡಿದೆ. ಹಲವು ಸೆಲೆಬ್ರಿಟಿಗಳು, ಕುಟುಂಬದವರು, ಗೆಳೆಯರ ಸಮ್ಮುಖದಲ್ಲಿ ಈ ವಿವಾಹ ಕಾರ್ಯ ನೆರವೇರಿದೆ. ಅದಿತಿ ಪ್ರಭುದೇವ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಶುಭಾಶಯ ತಿಳಿಸಿದ್ದರು. ಆದರೆ ಈಗ ನಟಿ ಅದಿತಿ ಪ್ರಭುದೇವ ಅವರ ಪತಿ ಯಶಸ್ ಅವರ ಸೋಶಿಯಲ್ ಮೀಡಿಯಾ ಖಾತೆಯನ್ನು ಯಾರೋ ಕಿಡಿಗೇಡಿಗಳು ಹ್ಯಾಕ್​ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Aditi Prabhudeva Marriage: ಯಶಸ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಅದಿತಿ ಪ್ರಭುದೇವ

ಅದಿತಿ ಪ್ರಭುದೇವ ಮತ್ತು ಯಶಸ್​ ಅವರ ಮದುವೆಯಾಗಿ ಕೇವಲ ಎರಡು ದಿನವಾಗಿದೆ. ಮದುವೆ ಖುಷಿಯಲ್ಲಿದ್ದ ದಂಪತಿಗೆ ಈಗ ಶಾಕ್​ ಎದುರಾಗಿದೆ. ಯಶಸ್​ ಅವರ ಇನ್ಸ್ಟಾಗ್ರಾಮ್ ಖಾತೆ ಹ್ಯಾಕ್​ ಆಗಿದೆ. ಈ ಕುರಿತಾಗಿ ಯಶಸ್​ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ನನ್ನ ಇನ್ಸ್ಟಾಗ್ರಾಮ್ ಖಾತೆಯೂ ಹ್ಯಾಕ್​ ಆಗಿದೆ. ನನ್ನ ಖಾತೆಯಿಂದ ಯಾವುದೇ ಮಸೇಜ್​ ಬಂದರೆ ರಿಪ್ಲೈ ಮಾಡಬೇಡಿ. ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದೇನೆ’ ಎಂದು ಯಶಸ್​ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Aditi Prabhudeva Marriage Photos: ಹಸೆಮಣೆ ಏರಿದ ಅದಿತಿ ಪ್ರಭುದೇವ-ಯಶಸ್ವಿ; ಇಲ್ಲಿದೆ ಮದುವೆಯ ಸುಂದರ ಫೋಟೋ ಗ್ಯಾಲರಿ

ನವೆಂಬರ್ 27ರಂದು ಪ್ಯಾಲೇಸ್​ಗ್ರೌಂಡ್​ನಲ್ಲಿ ಅದಿತಿ ಪ್ರಭುದೇವ ಯಶಸ್​ ಅವರ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆದಿತ್ತು. ಯಶ್, ರಾಧಿಕಾ ಪಂಡಿತ್, ಶ್ರೀನಗರ ಕಿಟ್ಟಿ, ಮೇಘಾ ಶೆಟ್ಟಿ, ರಂಜನಿ ರಾಘವನ್ ಸೇರಿ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ನವದಂಪತಿಗೆ ಶುಭಾಶಯ ಕೋರಿದ್ದರು. ಅದಿತಿ ಪ್ರಭುದೇವ ಅವರು ಯಶಸ್ಸಿನ ಒಂದೊಂದೇ ಮೆಟ್ಟಿಲು ಏರುತ್ತಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆಯುತ್ತಿರುವಾಗಲೇ ಅವರು ಯಶಸ್​ ಜತೆ ಮದುವೆ ಮಾಡಿಕೊಂಡು ಅಚ್ಚರಿ ಮೂಡಿಸಿದ್ದಾರೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:28 pm, Wed, 30 November 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ