Anna Rajan: ಸಿಮ್ ಖರೀದಿಸಲು ಹೋದ ನಟಿಯನ್ನು ಶೋ ರೂಮ್​ನಲ್ಲಿ ಕೂಡಿ ಹಾಕಿದ ಸಿಬ್ಬಂದಿ..!

Actress Anna Rajan: ಸೂಪರ್ ಡೂಪರ್ ಹಿಟ್ ಸಿನಿಮಾ ಅಂಗಮಾಲಿ ಡೈರೀಸ್ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅನ್ನಾ ರಾಜನ್, ಆ ಬಳಿಕ ಮೋಹನ್ ಲಾಲ್ ಅಭಿನಯದ ವೆಲ್ಲಿಪಡತ್ತಿಂಡೆ ಪುಸ್ತಕಂ, ಮಮ್ಮುಟಿಯ ನಟಿಸಿದ ಮಧುರ ರಾಜ, ಸೂಪರ್ ಹಿಟ್​ ಸಿನಿಮಾ ಅಯ್ಯಪ್ಪನುಂ ಕೊಶಿಯುಂ ಸೇರಿದಂತೆ ಅನೇಕ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

Anna Rajan: ಸಿಮ್ ಖರೀದಿಸಲು ಹೋದ ನಟಿಯನ್ನು ಶೋ ರೂಮ್​ನಲ್ಲಿ ಕೂಡಿ ಹಾಕಿದ ಸಿಬ್ಬಂದಿ..!
anna rajan
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 08, 2022 | 9:35 AM

ಖ್ಯಾತ ಮಲಯಾಳಂ ನಟಿ ಅನ್ನಾ ರಾಜನ್ (Anna Rajan ) ಅವರನ್ನು ಖಾಸಗಿ ಟೆಲಿಕಾಂ ಕಂಪೆನಿಯ ಉದ್ಯೋಗಿಯೊಬ್ಬರು ಶೋ ರೂಮ್​ನಲ್ಲಿ ಕೂಡಿ ಹಾಕಿದ ಘಟನೆ ಕೇರಳದಲ್ಲಿ ನಡೆದಿದೆ. ಅಲುವಾದಲ್ಲಿರುವ ಟೆಲಿಕಾಂ ಶೋ ರೂಮ್​ಗೆ ಡೂಪ್ಲಿಕೇಟ್ ಸಿಮ್​ ಖರೀದಿಸಲು ತೆರಳಿದಾಗ ಈ ಘಟನೆ ನಡೆದಿದ್ದು, ಈ ಬಗ್ಗೆ ನಟಿ ದೂರು ದಾಖಲಿಸಿದ್ದಾರೆ. ನಕಲಿ ಸಿಮ್ ಖರೀದಿಸಲು ಶೋ ರೂಮ್​ಗೆ ಹೋಗಿದ್ದ ವೇಳೆ ಅಲ್ಲಿನ ಉದ್ಯೋಗಿಯೊಬ್ಬರು ನನ್ನ ಜೊತೆ ಅನುಚಿತವಾಗಿ ವರ್ತಿಸಿದ್ದರು. ಅಲ್ಲದೆ ಅವರು ಶೋ ರೂಮ್​ನ ಶಟರ್​ ಎಳೆದು ನನ್ನನ್ನು ಕೂಡಿ ಹಾಕಿದರು. ಈ ವೇಳೆ ನಾನು ಪ್ರಶ್ನಿಸಿದಾಗ ಬೆದರಿಕೆಯೊಡ್ಡಿದ್ದರು ಎಂದು ಅನ್ನಾ ರಾಜನ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ದೂರಿನ ಬಳಿಕ ಅಲುವಾ ಪೊಲೀಸ್ ಠಾಣೆಗೆ ಟೆಲಿಕಾಂ ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗಿದ್ದು, ಈ ವೇಳೆ ಆತ ನನ್ನನಲ್ಲಿ ಕ್ಷಮೆಯಾಚಿಸಿದ್ದಾನೆ. ಆತನ ಭವಿಷ್ಯವನ್ನು ಗಮನದಲ್ಲಿರಿಸಿ ನಾನು ಪ್ರಕರಣವನ್ನು ಕೈ ಬಿಟ್ಟಿದ್ದೇನೆ ಎಂದು ಅನ್ನಾ ತಿಳಿಸಿದ್ದಾರೆ. ಸದ್ಯ ಈ ಪ್ರಕರಣ ಇತ್ಯರ್ಥವಾದ ಬಳಿಕ ಬೆಳಕಿಗೆ ಬಂದಿದ್ದು, ಇದಾಗ್ಯೂ ಅನುಚಿತವಾಗಿ ಉದ್ಯೋಗಿಯ ಭವಿಷ್ಯದ ದೃಷ್ಟಿಯಲ್ಲಿ ಆತನ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಅನ್ನಾ ರಾಜನ್ ನಿರಾಕರಿಸಿದ್ದಾರೆ.

ಇದನ್ನೂ ಓದಿ
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?

ಮಾಲಿವುಡ್​ನ ಸೂಪರ್ ಡೂಪರ್ ಹಿಟ್ ಸಿನಿಮಾ ಅಂಗಮಾಲಿ ಡೈರೀಸ್ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅನ್ನಾ ರಾಜನ್, ಆ ಬಳಿಕ ಮೋಹನ್ ಲಾಲ್ ಅಭಿನಯದ ವೆಲ್ಲಿಪಡತ್ತಿಂಡೆ ಪುಸ್ತಕಂ, ಮಮ್ಮುಟಿಯ ನಟಿಸಿದ ಮಧುರ ರಾಜ, ಸೂಪರ್ ಹಿಟ್​ ಸಿನಿಮಾ ಅಯ್ಯಪ್ಪನುಂ ಕೊಶಿಯುಂ ಸೇರಿದಂತೆ ಅನೇಕ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಇಡುಕ್ಕಿ ಬ್ಲಾಸ್ಟರ್ಸ್ ಹಾಗೂ ತಲನಾರಿಝಾ ಚಿತ್ರಗಳಲ್ಲಿ ಅನ್ನಾ ರಾಜನ್ ಬಣ್ಣ ಹಚ್ಚುತ್ತಿದ್ದಾರೆ.

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್