AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧ್ಯಾತ್ಮ ಪ್ರವಚಕನ ಜೊತೆ ಮದುವೆ ಆದ ನಟಿ ಮೃಣಾಲಿನಿ ರವಿ; ಇಲ್ಲಿವೆ ಸುಂದರ ಫೋಟೋಸ್

ಬಹುಭಾಷಾ ನಟಿ ಮೃಣಾಲಿನಿ ರವಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಹಾವಿಷ್ಣು ಜೊತೆ ಕಡಲತೀರದಲ್ಲಿ ನಡೆದ ಸರಳ ವಿವಾಹದ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ. ದಕ್ಷಿಣ ಭಾರತದ ಸಂಪ್ರದಾಯದಂತೆ ನಡೆದ ಈ ಮದುವೆಯ ಸುಂದರ ಕ್ಷಣಗಳು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಅಧ್ಯಾತ್ಮ ಪ್ರವಚಕನ ಜೊತೆ ಮದುವೆ ಆದ ನಟಿ ಮೃಣಾಲಿನಿ ರವಿ; ಇಲ್ಲಿವೆ ಸುಂದರ ಫೋಟೋಸ್
ಮೃಣಾಲಿನಿ ರವಿ
ರಾಜೇಶ್ ದುಗ್ಗುಮನೆ
|

Updated on: Nov 17, 2026 | 7:07 AM

Share

ಮುಖ್ಯಾಂಶಗಳು

  • ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ನವಜೋಡಿ
  • ಕಡಲತೀರದಲ್ಲಿ ನೆರವೇರಿದ ದಕ್ಷಿಣ ಭಾರತದ ಶಾಸ್ತ್ರಗಳು
  • ಟಿಕ್ ಟಾಕ್ ಸ್ಟಾರ್ ಟು ಸ್ಟಾರ್ ನಟಿ: ಮೃಣಾಲಿನಿ ಸಿನಿ ಪಯಣ

ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿ ಮಿಂಚಿರುವ ನಟಿ ಮೃಣಾಲಿನಿ ರವಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಧ್ಯಾತ್ಮ ಪ್ರವಚಕ ಮಹಾವಿಷ್ಣು ಜೊತೆ ನವೆಂಬರ್ 15ರಂದು ಅದ್ದೂರಿಯಾಗಿ ವಿವಾಹವಾಗಿದ್ದಾರೆ. ಮಲೇಷ್ಯಾದ ಕಡಲತೀರದ ಸುಂದರ ಪ್ರದೇಶದಲ್ಲಿ ಈ ಶುಭ ಕಾರ್ಯ ನಡೆದಿದೆ. ಮದುವೆಯ ಫೋಟೋಗಳನ್ನು ನಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಈಗ ಸಖತ್ ವೈರಲ್ ಆಗುತ್ತಿವೆ.

‘ನಾವು ಜೀವನದಲ್ಲಿ ಬೇಡಿಕೊಂಡ ಎಲ್ಲ ಪ್ರಾರ್ಥನೆಗಳಲ್ಲಿ ನೀನೇ ಅತ್ಯಂತ ಸುಂದರವಾದ ವರ’ ಎಂದು ಮೃಣಾಲಿನಿ ಬರೆದುಕೊಂಡಿದ್ದಾರೆ. ನವಜೋಡಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ್ದಾರೆ. ಮೃಣಾಲಿನಿ ತಿಳಿ ಗುಲಾಬಿ ಬಣ್ಣದ ರೇಷ್ಮೆ ಸೀರೆಯಲ್ಲಿ ಕಂಗೊಳಿಸಿದ್ದಾರೆ. ಧರಿಸಿರುವ ಜ್ಯುವೆಲರಿ ಎಲ್ಲರ ಕಣ್ಣು ಕುಕ್ಕಿದೆ. ಮುಡಿಯ ತುಂಬಾ ಮುಡಿದ ಮಲ್ಲಿಗೆ ಹೂವು ಅವರ ಅಂದ ಹೆಚ್ಚಿಸಿದೆ. ಮಹಾವಿಷ್ಣು ಕ್ರೀಮ್ ಬಣ್ಣದ ಕುರ್ತಾ ಮತ್ತು ಪಂಚೆಯಲ್ಲಿ ಕಾಣಿಸಿಕೊಂಡಿದ್ದಾರೆ. ಹಾರ ಬದಲಾಯಿಸಿಕೊಂಡು ಈ ಜೋಡಿ ಹೊಸ ಬಾಳಿಗೆ ಕಾಲಿಟ್ಟಿದೆ.

ಕುಟುಂಬದ ಆಪ್ತರ ಸಮ್ಮುಖದಲ್ಲಿ ದಕ್ಷಿಣ ಭಾರತದ ಸಂಪ್ರದಾಯದಂತೆ ವಿವಾಹ ನೆರವೇರಿದೆ. ಮಾಂಗಲ್ಯ ಧಾರಣೆ ಹಾಗೂ ತಮಿಳು ಶಾಸ್ತ್ರಗಳನ್ನು ಜೋಡಿ ನೆರವೇರಿಸಿದೆ. ಹಣೆಯ ಮೇಲೆ ಸಿಂಧೂರ ಇಡುವ ಸುಂದರ ಕ್ಷಣಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಸಮುದ್ರದ ಅಲೆಗಳು ಹಾಗೂ ಹಸಿರು ಬೆಟ್ಟಗಳ ಹಿನ್ನೆಲೆಯಲ್ಲಿ ಫೋಟೋಗಳು ಅದ್ಭುತವಾಗಿ ಮೂಡಿಬಂದಿವೆ. ಗುಲಾಬಿ ದಳಗಳ ಮಳೆ ನವಜೋಡಿಯ ಮದುವೆಗೆ ಸಾಕ್ಷಿಯಾಗಿದೆ. ಪರಸ್ಪರ ಹಣೆಗೆ ಮುತ್ತಿಕ್ಕುತ್ತಾ ನಗುವ ದೃಶ್ಯಗಳು ಅಭಿಮಾನಿಗಳ ಮನ ಗೆದ್ದಿವೆ.

ಇದನ್ನೂ ಓದಿ: ಪತಿ ಕೃಷ್ಣ ವಂಶಿ ಜೊತೆಗಿನ ವಿಚ್ಛೇದನ ವದಂತಿಗಳಿಗೆ ನಟಿ ರಮ್ಯಾ ಕೃಷ್ಣನ್ ಸ್ಪಷ್ಟನೆ

ಟಿಕ್ ಟಾಕ್ ಮೂಲಕ ಫೇಮಸ್ ಆಗಿದ್ದ ಮೃಣಾಲಿನಿ, ‘ಸೂಪರ್ ಡಿಲಕ್ಸ್’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ನಂತರ ‘ಎನಿಮಿ’, ‘ಕೋಬ್ರಾ’, ‘ರೋಮಿಯೋ’ ಸೇರಿದಂತೆ ಹಲವು ಹಿಟ್ ಸಿನಿಮಾಗಳಲ್ಲಿ ನಟಿಸಿದರು. ದಿಢೀರ್ ಮದುವೆ ಸುದ್ದಿ ಕೇಳಿ ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ. ಸದ್ಯ ನವದಂಪತಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಧರ್ಮಸ್ಥಳಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಕುಟುಂಬಕ್ಕೆ ಪೂರ್ಣಕುಂಭ ಸ್ವಾಗತ
ಧರ್ಮಸ್ಥಳಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಕುಟುಂಬಕ್ಕೆ ಪೂರ್ಣಕುಂಭ ಸ್ವಾಗತ
ಒಂದೇ ಪ್ರಕರಣ, ಎರಡು FIR: ಮೈಸೂರಿನಲ್ಲಿ ಎರಡು ಕೋಮಿನ ಮಧ್ಯೆ ನಡೆದಿದ್ದೇನು?
ಒಂದೇ ಪ್ರಕರಣ, ಎರಡು FIR: ಮೈಸೂರಿನಲ್ಲಿ ಎರಡು ಕೋಮಿನ ಮಧ್ಯೆ ನಡೆದಿದ್ದೇನು?
ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಎಲ್ಲಾ ಆನೆಗಳನ್ನ ಓಡಿಸುತ್ತೇವೆ ಎಂದ ಸಚಿವ
ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಎಲ್ಲಾ ಆನೆಗಳನ್ನ ಓಡಿಸುತ್ತೇವೆ ಎಂದ ಸಚಿವ
ಪ್ರತಿಭಟನೆಕಾರರ ನಡವಳಿಕೆಗೆ ಹಾಸನ ಡಿಸಿ ಬೇಸರ
ಪ್ರತಿಭಟನೆಕಾರರ ನಡವಳಿಕೆಗೆ ಹಾಸನ ಡಿಸಿ ಬೇಸರ
ಸ್ಟಿಂಗ್ ಆಪರೇಷನ್ ಕೇಸ್​: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್
ಸ್ಟಿಂಗ್ ಆಪರೇಷನ್ ಕೇಸ್​: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮದ್ಯ ಮಾರಾಟ ನಿಷೇಧ
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮದ್ಯ ಮಾರಾಟ ನಿಷೇಧ
ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ: ತಪ್ಪಿದ ಅನಾಹುತ
ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ: ತಪ್ಪಿದ ಅನಾಹುತ
ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ ಬ್ಯಾನ್‌:ಸಚಿವ ಬೈರತಿ ಸುರೇಶ್ ಮಹತ್ವದ ಮಾಹಿತಿ
ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ ಬ್ಯಾನ್‌:ಸಚಿವ ಬೈರತಿ ಸುರೇಶ್ ಮಹತ್ವದ ಮಾಹಿತಿ
ರೇಷನ್ ಕಾರ್ಡ್‌ಗಾಗಿ 40 ವರ್ಷಗಳಿಂದ ಒಂಟಿ ವೃದ್ಧೆಯ ಪರದಾಟ
ರೇಷನ್ ಕಾರ್ಡ್‌ಗಾಗಿ 40 ವರ್ಷಗಳಿಂದ ಒಂಟಿ ವೃದ್ಧೆಯ ಪರದಾಟ