AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಳೆದು ಹೋಗಿದ್ದೇನೆ’: ವಿಚ್ಛೇದನ ವದಂತಿ ಮಧ್ಯೆ ನಿಗೂಢಾರ್ಥದಲ್ಲಿ ಪೋಸ್ಟ್ ಮಾಡಿದ ನಯನತಾರಾ

ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರು 2022ರ ಜೂನ್ 9ರಂದು ಮದುವೆ ಆದರು. ಇದಾದ ಬಳಿಕ ಇಬ್ಬರೂ ಹಾಯಾಗಿ ಸಂಸರಾ ನಡೆಸುತ್ತಾ ಬಂದರು. ಆದರೆ, ಇತ್ತೀಚೆಗೆ ಇವರ ಮಧ್ಯೆ ಯಾವುದೂ ಸರಿ ಇಲ್ಲ ಎಂದು ಹೇಳಲಾಗುತ್ತಿದೆ. ಹಿಗಿರುವಾಗಲೇ ನಯನತಾರಾ ಅವರು ಇನ್​ಸ್ಟಾಗ್ರಾಮ್ ಸ್ಟೇಟಸ್​ನಲ್ಲಿ ‘ಹೌದು, ಕಳೆದು ಹೋಗಿದ್ದೇನೆ’ ಎಂದು ಪೋಸ್ಟ್ ಮಾಡಿದ್ದಾರೆ.

‘ಕಳೆದು ಹೋಗಿದ್ದೇನೆ’: ವಿಚ್ಛೇದನ ವದಂತಿ ಮಧ್ಯೆ ನಿಗೂಢಾರ್ಥದಲ್ಲಿ ಪೋಸ್ಟ್ ಮಾಡಿದ ನಯನತಾರಾ
ವಿಘ್ನೇಶ್-ನಯನತಾರಾ
ರಾಜೇಶ್ ದುಗ್ಗುಮನೆ
|

Updated on: Mar 07, 2024 | 12:11 PM

Share

ನಟಿ ನಯನತಾರಾ (Nayanthara) ಅವರು ವೈಯಕ್ತಿಕ ವಿಚಾರಕ್ಕೆ ಹೆಚ್ಚು ಸುದ್ದಿಯಲ್ಲಿ ಇದ್ದಾರೆ. ನಯನತಾರಾ ಹಾಗೂ ಪತಿ ವಿಘ್ನೇಶ್ ಶಿವನ್ ಜೊತೆ ಯಾವುದೂ ಸರಿ ಇಲ್ಲ ಎನ್ನುವ ಸುದ್ದಿ ಹರಿದಾಡುತ್ತಿದೆ. ನಯನತಾರಾ ಅವರು ಪತಿ ವಿಘ್ನೇಶ್ ಶಿವನ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಅನ್​ಫಾಲೋ ಮಾಡಿದ್ದೇ ಇದಕ್ಕೆ ಕಾರಣ ಆಗಿತ್ತು. ನಂತರ ಮರಳಿ ಅವರು ವಿಘ್ನೇಶ್ ಅವರನ್ನ ಫಾಲೋ ಮಾಡೋಕೆ ಆರಂಭಿಸಿದರು. ಈ ಮಧ್ಯೆ ಅವರು ಇನ್​ಸ್ಟಾಗ್ರಾಮ್​ ಸ್ಟೇಟಸ್​ಗೆ ಹಾಕಿದ ಪೋಸ್ಟ್ ಸಾಕಷ್ಟು ಗಮನ ಸೆಳೆಯುತ್ತಿದೆ.

ವಿಘ್ನೇಶ್ ಶಿವನ್ ಹಾಗೂ ನಯನತಾರಾ ಅವರು 2022ರ ಜೂನ್ 9ರಂದು ಮದುವೆ ಆದರು. ಇದಾದ ಬಳಿಕ ಇಬ್ಬರೂ ಹಾಯಾಗಿ ಸಂಸರಾ ನಡೆಸುತ್ತಾ ಬಂದರು. ಆದರೆ, ಇತ್ತೀಚೆಗೆ ಯಾಕೋ ಅವರ ಮಧ್ಯೆ ಯಾವುದೂ ಸರಿ ಇಲ್ಲ ಎಂದು ಹೇಳಲಾಗುತ್ತಿದೆ. ಹಿಗಿರುವಾಗಲೇ ನಯನತಾರಾ ಅವರು ಇನ್​ಸ್ಟಾಗ್ರಾಮ್ ಸ್ಟೇಟಸ್​ನಲ್ಲಿ ‘ಹೌದು, ಕಳೆದು ಹೋಗಿದ್ದೇನೆ’ ಎಂದು ಪೋಸ್ಟ್ ಮಾಡಿದ್ದಾರೆ. ಇದು ಅಭಿಮಾನಿಗಳ ಚಿಂತೆಗೆ ಕಾರಣ ಆಗಿದೆ. ಇದನ್ನೂ ಓದಿ: ವಿಘ್ನೇಶ್ ಶಿವನ್​ನಿಂದ ವಿಚ್ಛೇದನ ಪಡೆಯೋ ವಿಚಾರ: ನಯನತಾರಾ ಕಡೆಯಿಂದಲೇ ಸಿಕ್ತು ಸ್ಪಷ್ಟನೆ

ನಯನತಾರಾ ಮಾಡಿದ ನಿಗೂಢ ಪೋಸ್ಟ್​ನ ಅರ್ಥವೇನು ಎಂದು ಫ್ಯಾನ್ಸ್ ಚಿಂತೆಗೆ ಒಳಗಾಗಿದ್ದಾರೆ. ‘ನಯನತಾರಾ ಜೊತೆ ಯಾರಾದರೂ ಮಾತನಾಡಿ. ಅವರು ಮೊದಲಿನಂತಾಗಬೇಕು’ ಎಂದು ಕೆಲವರು ಪೋಸ್ಟ್ ಮಾಡಿದ್ದಾರೆ. ಇನ್ನೂ ಕೆಲವರು ‘ಇದು ಸಿನಿಮಾ ಪ್ರಚಾರವೋ ಅಥವಾ ನಿಜಕ್ಕೂ ನಯನತಾರಾಗೆ ತೊಂದರೆ ಆಗಿದೆಯೇ’ ಎನ್ನುವ ಪ್ರಶ್ನೆಯನ್ನು ಅಭಿಮಾನಿಗಳು ಕೇಳುತ್ತಿದ್ದಾರೆ.

ಅಭಿಮಾನಿಗಳ ಪೋಸ್ಟ್

ನಯನತಾರಾ ಅವರು ಇತ್ತೀಚೆಗಷ್ಟೇ ಇನ್​ಸ್ಟಾಗ್ರಾಮ್​ನಲ್ಲಿ ಸ್ಟೇಟಸ್ ಒಂದನ್ನು ಪೋಸ್ಟ್ ಮಾಡಿದ್ದರು. ಇದರಲ್ಲಿ ನಯನತಾರಾ ಹಾಗೂ ವಿಘ್ನೇಶ್ ಒಟ್ಟಿಗೆ ಇರುವ ವಿಡಿಯೋ ಇದಾಗಿತ್ತು. ಕೊಳಲು ವಾದಕರೊಬ್ಬರು ಹಂಚಿಕೊಂಡಿದ್ದ ವಿಡಿಯೋನ ನಯನತಾರಾ ಶೇರ್ ಮಾಡಿಕೊಂಡಿದ್ದರು. ಈ ಮೂಲಕ ಇಬ್ಬರ ಮಧ್ಯೆ ಎಲ್ಲವೂ ಸರಿ ಇದೆ ಎಂದು ಹೇಳಲಾಗಿತ್ತು. ಹೀಗಿರುವಾಗಲೇ ಅವರ ಹೊಸ ಪೋಸ್ಟ್ ವೈರಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು