ನಟಿಯರನ್ನು ಬೆತ್ತಲಾಗಿ ನೋಡಲು ವ್ಯಾನಿಟಿ ವ್ಯಾನ್​ನಲ್ಲಿ ಇಡಲಾಗುತ್ತಿದೆ ಹಿಡನ್ ಕ್ಯಾಮೆರಾ

ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರ ವಿರುದ್ಧ ಹಲವು ವರ್ಷಗಳಿಂದ ನಡೆಯುತ್ತ ಬಂದ ಲೈಂಗಿಕ ದೌರ್ಜನ್ಯ ಈಗ ಜಗಜ್ಜಾಹೀರಾಗಿದೆ. ಮಹಿಳೆಯರ ಮೇಲಿನ ಕಿರುಕುಳದ ಬಗ್ಗೆ ‘ಹೇಮಾ ಸಮಿತಿ’ ವರದಿ ಸಲ್ಲಿಸಿದೆ. ಈ ಬೆನ್ನಲ್ಲೇ ರಾಧಿಕಾ ಶರತ್​ಕುಮಾರ್ ಒಂದು ಶಾಕಿಂಗ್ ವಿಚಾರ ರಿವೀಲ್ ಮಾಡಿದ್ದಾರೆ.

ನಟಿಯರನ್ನು ಬೆತ್ತಲಾಗಿ ನೋಡಲು ವ್ಯಾನಿಟಿ ವ್ಯಾನ್​ನಲ್ಲಿ ಇಡಲಾಗುತ್ತಿದೆ ಹಿಡನ್ ಕ್ಯಾಮೆರಾ
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
|

Updated on: Sep 03, 2024 | 7:04 AM

ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಸಮಿತಿ ವರದಿಯು ಶಾಕಿಂಗ್ ವಿಚಾರಗಳನ್ನು ಬಿಚ್ಚಿಟ್ಟಿದೆ. ಈ ಬೆನ್ನಲ್ಲೇ ಅನೇಕ ದಕ್ಷಿಣದ ಹೀರೋಯಿನ್​ಗಳು ಈ ಬಗ್ಗೆ ಮಾತನಾಡುತ್ತಿದ್ದಾರೆ. ಅನೇಕರು ತಮ್ಮ ಚಿತ್ರರಂಗಕ್ಕೂ ಈ ರೀತಿಯ ಸಮಿತಿ ಬೇಕು ಎನ್ನುತ್ತಿದ್ದಾರೆ. ಈಗ ಹಿರಿಯ ನಟಿ ರಾಧಿಕಾ ಶರತ್​ಕುಮಾರ್ ಅವರು ಒಂದು ಶಾಕಿಂಗ್ ವಿಚಾರ ರಿವೀಲ್ ಮಾಡಿದ್ದಾರೆ. ನಟಿಯರನ್ನು ಬೆತ್ತಲಾಗಿ ನೋಡಲು ಹೀರೋಗಳೇ ವ್ಯಾನಿಟಿ ವ್ಯಾನ್​ನಲ್ಲಿ ಹಿಡನ್ ಕ್ಯಾಮೆರಾಗಳನ್ನು ಇಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಶೂಟಿಂಗ್ ಸೆಟ್​ನಲ್ಲಿ ವ್ಯಾನಿಟಿ ವ್ಯಾನ್​ನ ಬಳಕೆ ಸಾಕಷ್ಟಿದೆ. ಹೀರೋ/ಹೀರೋಯಿನ್​ಗಳಿಗೆ ಬಟ್ಟೆ ಬದಲಿಸಲು ಈ ವಾಹನ ಸಹಕಾರಿ ಆಗುತ್ತದೆ. ಆದರೆ, ಇದರಲ್ಲಿ ಕ್ಯಾಮೆರಾ ಇಟ್ಟು ಶೂಟ್ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ತಮಿಳು, ತೆಲುಗು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಈ ಪದ್ಧತಿ ಚಾಲ್ತಿಯಲ್ಲಿ ಇದೆ ಎಂದು ಅವರು ಆತಂಕ ಹೊರ ಹಾಕಿದ್ದಾರೆ.

‘ಸೆಟ್​ನಲ್ಲಿ ಪುರುಷರು ನಟಿಯರ ವಿಡಿಯೋ ನೋಡಿ ಎಂಜಾಯ್ ಮಾಡುತ್ತಿರುವುದನ್ನು ನಾನು ಕಣ್ಣಾರೆ ನೋಡಿದ್ದೇನೆ’ ಎಂದು ಅವರು ಹೇಳಿದ್ದಾರೆ. ಹೀರೋಗಳೇ ಈ ರೀತಿಯ ಕೆಲಸ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆ ಮೂಡಿದೆ. ‘ನಾನು ಕೇರಳದಲ್ಲಿ ಇದ್ದೆ. ಕೆಲವರು ಸೆಟ್​ನಲ್ಲಿ ನಿಂತು ನಗುತ್ತಿದ್ದರು. ಏನು ನೋಡುತ್ತಿದ್ದೀರಿ ಎಂದು ಕೇಳಿದೆ. ನಟಿಯರು ಬಟ್ಟೆ ಬದಲಿಸುತ್ತಿರುವ ವಿಡಿಯೋ ಇದೆ ಎಂದು ಅವರು ಹೇಳಿದರು. ಅವರು ನನಗೆ ವಿಡಿಯೋ ತೋರಿಸಿದ್ದರು’ ಎಂದಿದ್ದಾರೆ ರಾಧಿಕಾ.

ಕ್ಯಾಮೆರಾ ಇಟ್ಟವರು ಯಾರು? ಅವರು ನೋಡಿದ ವಿಡಿಯೋ ಯಾರದ್ದು  ಎಂಬ ಪ್ರಶ್ನೆಗೆ ಉತ್ತರ ನೀಡಿಲ್ಲ. ‘ನಾನು ಊರ್ವಶಿ ಅವರ ಸಂದರ್ಶನ ನೋಡಿದ್ದೇನೆ. ಕೇರಳದಲ್ಲಿ ಅಂಥದ್ದೇನು ಇಲ್ಲ ಎಂದಿದ್ದಾರೆ. ಅವರ ಅಭಿಪ್ರಾಯ ಬೇರೆ, ನನ್ನ ಅಭಿಪ್ರಾಯ ಬೇರೆ’ ಎಂದಿದ್ದಾರೆ ರಾಧಿಕಾ.

ಇದನ್ನೂ ಓದಿ: ‘ಹೇಮಾ ಸಮಿತಿ ರೀತಿ ಟಾಲಿವುಡ್​ನಲ್ಲೂ ವರದಿ ಪ್ರಕಟವಾಗಲಿ’: ಸಮಂತಾ ಒತ್ತಾಯ

ರಾಧಿಕಾ ಅವರು ಕನ್ನಡದಲ್ಲೂ ನಟಿಸಿದ್ದಾರೆ. 1983ರ ದ್ವಾರಕೀಶ್, ವಿಷ್ಣುವರ್ಧನ್ ನಟನೆಯ ‘ಪ್ರಚಂಡ ಕುಳ್ಳ’ ಸಿನಿಮಾ ಅವರ ಅಭಿನಯದ ಮೊದಲ ಕನ್ನಡ ಸಿನಿಮಾ. ಇದಲ್ಲದೆ, ‘ಜೀವನ ಚಕ್ರ’, ‘ಸತ್ಯಂ ಶಿವಂ ಸುಂದರಂ’ ಸಿನಿಮಾದಲ್ಲೂ ಬಣ್ಣ ಹಚ್ಚಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ