ಅಪರೂಪದ ಕಾಯಿಲೆಗೆ ತುತ್ತಾದ ನಟಿ ಸಮಂತಾ; ಇದರಿಂದ ಆಗುವ ತೊಂದರೆಗಳೇನು?

ಸಮಂತಾ ಅವರಿಗೆ Myositis ಹೆಸರಿನ ಅಪರೂಪದ ಕಾಯಿಲೆ ಇದೆ. ಈ ಕಾಯಿಲೆ ಬಂದರೆ ವ್ಯಕ್ತಿ ಕುಗ್ಗುತ್ತಾನೆ. ದೇಹದಲ್ಲಿ ನೋವು ಕಾಣಿಸಿಕೊಳ್ಳುತ್ತದೆ.

ಅಪರೂಪದ ಕಾಯಿಲೆಗೆ ತುತ್ತಾದ ನಟಿ ಸಮಂತಾ; ಇದರಿಂದ ಆಗುವ ತೊಂದರೆಗಳೇನು?
ಸಮಂತಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Oct 29, 2022 | 6:19 PM

ನಟಿ ಸಮಂತಾ (Samantha) ಅವರು ವಿಚ್ಛೇದನ ಪಡೆದು ಒಂದು ವರ್ಷದ ಮೇಲಾಗಿದೆ. ಡಿವೋರ್ಸ್​​ ನಂತರದಲ್ಲಿ ಅವರ ಸಿನಿಮಾ ಆಯ್ಕೆಗಳು ಬದಲಾದವು. ಸಾಕಷ್ಟು ಸಿನಿಮಾಗಳನ್ನು ಒಪ್ಪಿಕೊಂಡು ಅವರು ನಟಿಸಿದರು. ಕೆಲ ತಿಂಗಳಿಂದ ಸಮಂತಾಗೆ ಅನಾರೋಗ್ಯ ಕಾಡಿದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಇದಕ್ಕೆ ಸ್ಪಷ್ಟನೆ ಸಿಕ್ಕಿರಲಿಲ್ಲ. ಈಗ ಸಮಂತಾ ಈ ವಿಚಾರದ ಬಗ್ಗೆ ಮೌನ ಮುರಿದಿದ್ದಾರೆ. ತಮಗೆ ಅನಾರೋಗ್ಯ ಉಂಟಾಗಿದೆ ಎಂಬ ವಿಚಾರವನ್ನು ಒಪ್ಪಿಕೊಂಡಿದ್ದಾರೆ. ಈ ಕಾಯಿಲೆ ಹೆಸರನ್ನು ಕೂಡ ಹೇಳಿಕೊಂಡಿದ್ದಾರೆ.

ಸಮಂತಾ ಅವರಿಗೆ Myositis ಹೆಸರಿನ ಅಪರೂಪದ ಕಾಯಿಲೆ ಇದೆ. ಈ ಕಾಯಿಲೆ ಬಂದರೆ ವ್ಯಕ್ತಿ ಕುಗ್ಗುತ್ತಾನೆ. ದೇಹದಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಸ್ನಾಯು ಸೆಳೆತ ಶುರುವಾಗುತ್ತದೆ. ಸ್ವಲ್ಪ ದೂರ ನಡೆದರೂ ಸುಸ್ತು ಎನಿಸುತ್ತದೆ. 30-60ರ ವಯಸ್ಸಿನವರಲ್ಲಿ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಸರಿಯಾದ ಚಿಕಿತ್ಸೆ ಕೊಡದೆ ಇದ್ದರೆ ದಿನ ಕಳೆದಂತೆ ಪರಿಸ್ಥಿತಿ ಬಿಗಡಾಯಿಸುತ್ತದೆ. ಈಗ ಸಮಂತಾ ಕೂಡ ಇದೇ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.

‘ಯಶೋದಾ ಚಿತ್ರದ ಟ್ರೇಲರ್​ಗೆ ನಿಮ್ಮ ಪ್ರತಿಕ್ರಿಯೆ ನೋಡಿ ಖುಷಿ ಆಯಿತು. ನಿಮ್ಮ ಪ್ರೀತಿ ನನಗೆ ಸವಾಲುಗಳನ್ನು ಎದುರಿಸಲು ಶಕ್ತಿ ನೀಡಿದೆ. ಕೆಲ ತಿಂಗಳ ಹಿಂದೆ ನನ್ನಲ್ಲಿ Myositis ಹೆಸರಿನ ಸಮಸ್ಯೆ ಇರುವುದು ಪತ್ತೆ ಆಯಿತು. ಇದು ಕಡಿಮೆ ಆದ ನಂತರದಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಳ್ಳಬೇಕು ಎಂದುಕೊಂಡಿದ್ದೆ. ಆದರೆ, ನಾವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚಿನ ಸಮಯವನ್ನು ಇದು ತೆಗೆದುಕೊಳ್ಳುತ್ತಿದೆ’ ಎಂದು ಸಮಂತಾ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
Naga Chaitanya: ‘ಸಮಂತಾ ಸಿಕ್ಕರೆ ತಬ್ಬಿಕೊಳ್ತೀನಿ, ಟ್ಯಾಟೂ ತೆಗೆಸಲ್ಲ’: ಹಳೇ ಹೆಂಡತಿ ಬಗ್ಗೆ ನಾಗ ಚೈತನ್ಯ ನೇರ ಮಾತು
Image
Samantha: ನಾಗ ಚೈತನ್ಯ ಜತೆ ವಾಸಿಸಿದ್ದ ಮನೆಯನ್ನು ದುಬಾರಿ ಬೆಲೆ ಕೊಟ್ಟು ಖರೀದಿಸಿದ ಸಮಂತಾ; ಏನಿದು ಸೆಂಟಿಮೆಂಟ್​?
Image
Samantha: ‘ನಾಗ ಚೈತನ್ಯಗೆ ಡಿವೋರ್ಸ್​ ನೀಡಿದ ಬಳಿಕ ಕಷ್ಟ ಆಯ್ತು’; ಕಡೆಗೂ ನಿಜ ಒಪ್ಪಿಕೊಂಡ ಸಮಂತಾ
Image
‘ಊ ಅಂಟಾವಾ ಮಾವ..’ ಎಂದು ಸಖತ್ ಆಗಿ ಸ್ಟೆಪ್ ಹಾಕಿದ ಸಮಂತಾ-ಅಕ್ಷಯ್ ಕುಮಾರ್

ಇದನ್ನೂ ಓದಿ: Yashoda Trailer: ‘ಯಶೋದಾ’ ಟ್ರೇಲರ್​​ ಬಿಡುಗಡೆ; ಸಮಂತಾಗೆ ಸಾಥ್​ ನೀಡಿದ ‘ಸಿಂಪಲ್​ ಸ್ಟಾರ್​’ ರಕ್ಷಿತ್​ ಶೆಟ್ಟಿ

‘ಶೀಘ್ರದಲ್ಲೇ ನಾನು ಸಂಪೂರ್ಣ ಗುಣಮುಖ ಆಗುತ್ತೇನೆ ಎಂಬ ಭರವಸೆಯನ್ನು ವೈದ್ಯರು ನೀಡಿದ್ದಾರೆ. ನನ್ನ ಜೀವನದಲ್ಲಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಒಳ್ಳೆಯ ಹಾಗೂ ಕೆಟ್ಟ ದಿನ ಎರಡೂ ಇದ್ದವು. ಇದನ್ನು ನಿರ್ವಹಿಸಲು ಸಾಧ್ಯವೇ ಇಲ್ಲ ಎಂದುಕೊಂಡ ಪರಿಸ್ಥಿತಿಗಳೂ ಕಳೆದು ಹೋಗಿವೆ. ಚೇತರಿಕೆ ಕಾಣಲು ಇನ್ನೂ ಹತ್ತಿರವಾಗುತ್ತಿದ್ದೇನೆ ಅನಿಸುತ್ತದೆ. ಐ ಲವ್​ ಯೂ. ಈ ಸಮಯ ಕಳೆಯುತ್ತದೆ’ ಎನ್ನುವ ಮೂಲಕ ಬೇಗ ಚೇತರಿಕೆ ಕಾಣುತ್ತೇನೆ ಎಂಬ ಆತ್ಮವಿಶ್ವಾಸವನ್ನು ಸಮಂತಾ ತೋರಿದ್ದಾರೆ.

Published On - 5:03 pm, Sat, 29 October 22

ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ