Shaakuntalam: ಅಭಿಮಾನಿಗಳಿಗೆ ಸಮಂತಾ ಸರ್​ಪ್ರೈಸ್​; ಹೊಸ ಪೋಸ್ಟರ್​ನಲ್ಲಿದೆ ಹಲವು ವಿಚಾರ

ನಟಿ ಸಮಂತಾ ಅವರು ‘ಶಾಕುಂತಲಂ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಕೆಲಸಗಳು ಪೂರ್ಣಗೊಂಡು ಬಹಳ ಸಮಯ ಕಳೆದಿದೆ. ಪೌರಾಣಿಕ ಕಥಾಹಂದರ ಇರುವ ಈ ಚಿತ್ರವನ್ನು ಸಮಂತಾ ಆಯ್ಕೆ ಮಾಡಿಕೊಂಡಾಗಲೇ ಅಭಿಮಾನಿಗಳ ವಲಯದಲ್ಲಿ ಹೈಪ್​ ಸೃಷ್ಟಿ ಆಗಿತ್ತು.

Shaakuntalam: ಅಭಿಮಾನಿಗಳಿಗೆ ಸಮಂತಾ ಸರ್​ಪ್ರೈಸ್​; ಹೊಸ ಪೋಸ್ಟರ್​ನಲ್ಲಿದೆ ಹಲವು ವಿಚಾರ
ಸಮಂತಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 02, 2023 | 3:16 PM

ನಟಿ ಸಮಂತಾ (Samantha) ಅವರು Myositis ಹೆಸರಿನ ಅಪರೂಪದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಜಗತ್ತಿನಲ್ಲಿ ಈ ಸಮಸ್ಯೆಗೆ ಒಳಗಾಗುವವರ ಸಂಖ್ಯೆ ತುಂಬಾನೇ ಕಡಿಮೆ. ಒಮ್ಮೆ ಈ ರೋಗ ಕಾಣಿಸಿಕೊಂಡರೆ ಅದರಿಂದ ಗುಣಮುಖರಾಗುವುದು ತುಂಬಾನೇ ಕಷ್ಟ. ಸ್ನಾಯುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುತ್ತದೆ. ಸಮಂತಾ ಸದ್ಯ ವಿಶ್ರಾಂತಿಯಲ್ಲಿದ್ದಾರೆ.ಈ ಮಧ್ಯೆ ಅವರು ಅಭಿಮಾನಿಗಳಿಗೆ ಸರ್​ಪ್ರೈಸ್ ನೀಡಿದ್ದಾರೆ. ಅವರು ಹಂಚಿಕೊಂಡಿರುವ ಹೊಸ ಪೋಸ್ಟರ್​​ನಲ್ಲಿ ಹಲವು ವಿಚಾರಗಳಿವೆ.

ನಟಿ ಸಮಂತಾ ಅವರು ‘ಶಾಕುಂತಲಂ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಕೆಲಸಗಳು ಪೂರ್ಣಗೊಂಡು ಬಹಳ ಸಮಯ ಕಳೆದಿದೆ. ಪೌರಾಣಿಕ ಕಥಾಹಂದರ ಇರುವ ಈ ಚಿತ್ರವನ್ನು ಸಮಂತಾ ಆಯ್ಕೆ ಮಾಡಿಕೊಂಡಾಗಲೇ ಅಭಿಮಾನಿಗಳ ವಲಯದಲ್ಲಿ ಹೈಪ್​ ಸೃಷ್ಟಿ ಆಗಿತ್ತು. ಆದರೆ, ಚಿತ್ರತಂಡದಿಂದ ರಿಲೀಸ್ ದಿನಾಂಕ ಹೊರ ಬಿದ್ದಿರಲಿಲ್ಲ. ಇದು ಅವರ ಅಭಿಮಾನಿಗಳಲ್ಲಿ ಬೇಸರ ಮೂಡಿಸಿತ್ತು. ಈಗ ಚಿತ್ರದ ರಿಲೀಸ್ ದಿನಾಂಕ ರಿವೀಲ್ ಆಗಿದೆ. ಹೊಸ ಪೋಸ್ಟರ್ ರಿಲೀಸ್ ಮಾಡಿ ಈ ವಿಚಾರ ಬಹಿರಂಗ ಮಾಡಲಾಗಿದೆ.

ಹೊಸ ಪೋಸ್ಟರ್​ನಲ್ಲಿ ಸಮಂತಾ ಲುಕ್ ಗಮನ ಸೆಳೆದಿದೆ. ಈ ಚಿತ್ರ ಫೆಬ್ರವರಿ 17ರಂದು ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ಈ ಚಿತ್ರ 3ಡಿಯಲ್ಲೂ ಮೂಡಿ ಬರುತ್ತಿದೆ ಅನ್ನೋದು ವಿಶೇಷ. ಪೌರಾಣಿಕ ಹಿನ್ನೆಲೆ ಜತೆಗೆ 3ಡಿ ವರ್ಷನ್​​ ಕೂಡ ಇರುವುದರಿಂದ ಚಿತ್ರದ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗಿದೆ.

ಇದನ್ನೂ ಓದಿ
Image
Naga Chaitanya: ‘ಸಮಂತಾ ಸಿಕ್ಕರೆ ತಬ್ಬಿಕೊಳ್ತೀನಿ, ಟ್ಯಾಟೂ ತೆಗೆಸಲ್ಲ’: ಹಳೇ ಹೆಂಡತಿ ಬಗ್ಗೆ ನಾಗ ಚೈತನ್ಯ ನೇರ ಮಾತು
Image
Samantha: ನಾಗ ಚೈತನ್ಯ ಜತೆ ವಾಸಿಸಿದ್ದ ಮನೆಯನ್ನು ದುಬಾರಿ ಬೆಲೆ ಕೊಟ್ಟು ಖರೀದಿಸಿದ ಸಮಂತಾ; ಏನಿದು ಸೆಂಟಿಮೆಂಟ್​?
Image
Samantha: ‘ನಾಗ ಚೈತನ್ಯಗೆ ಡಿವೋರ್ಸ್​ ನೀಡಿದ ಬಳಿಕ ಕಷ್ಟ ಆಯ್ತು’; ಕಡೆಗೂ ನಿಜ ಒಪ್ಪಿಕೊಂಡ ಸಮಂತಾ
Image
‘ಊ ಅಂಟಾವಾ ಮಾವ..’ ಎಂದು ಸಖತ್ ಆಗಿ ಸ್ಟೆಪ್ ಹಾಕಿದ ಸಮಂತಾ-ಅಕ್ಷಯ್ ಕುಮಾರ್

ಖ್ಯಾತ ನಿರ್ದೇಶಕ ಗುಣಶೇಖರ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ನೀಲಿಮಾ ಗುಣ ಅವರ ನಿರ್ಮಾಣದಲ್ಲಿ ‘ಶಾಕುಂತಲಂ’ ಮೂಡಿಬರುತ್ತಿದೆ. ಕನ್ನಡ, ಹಿಂದಿ, ಮಲಯಾಳಂ ಮತ್ತು ತಮಿಳಿನಲ್ಲೂ ಈ ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಪುತ್ರಿ ಅಲ್ಲು ಅರ್ಹಾ ಕೂಡ ಬಣ್ಣ ಹಚ್ಚಿದ್ದಾಳೆ ಎಂಬುದು ವಿಶೇಷ.

ಇದನ್ನೂ ಓದಿ: ಸಮಂತಾ ಬಗ್ಗೆ ಹುಟ್ಟಿಕೊಂಡಿತು ಮತ್ತಷ್ಟು ವದಂತಿ; ಬೇಸರದಲ್ಲೇ ಸ್ಪಷ್ಟನೆ ನೀಡಿದ ತಂಡ

ಸಮಂತಾ ನಟನೆಯ ‘ಯಶೋದಾ’ ಸಿನಿಮಾ ಕಳೆದ ವರ್ಷ ತೆರೆಗೆ ಬಂತು. ಸಸ್ಪೆನ್ಸ್​ ಶೈಲಿಯಲ್ಲಿ ಮೂಡಿಬಂದ ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ಪ್ರೇಕ್ಷಕರು ಇಷ್ಟಪಟ್ಟರು. ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು