AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shilpa Shetty: ಶಿಲ್ಪಾ ಶೆಟ್ಟಿ ಮನೆಗೆ ಹೊಸ ಸದಸ್ಯನ ಆಗಮನ; ಕುಟುಂಬದವರು ಫುಲ್ ಖುಷ್

ಶಿಲ್ಪಾ ಶೆಟ್ಟಿ ಮಗ ವಿಯಾನ್​ಗೆ ಜನ್ಮದಿನದ ಸಂಭ್ರಮ. ಆತ 9ನೇ ವರ್ಷಕ್ಕೆ ಕಾಲಿಟ್ಟಿದ್ದಾನೆ. ಈ ಸಂಭ್ರಮದಂದು ಆತನಿಗೆ ಏನಾದರೂ ವಿಶೇಷ ಗಿಫ್ಟ್​ ನೀಡುವ ಆಲೋಚನೆ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್​ ಕುಂದ್ರಾ ಅವರದ್ದಾಗಿತ್ತು.

Shilpa Shetty: ಶಿಲ್ಪಾ ಶೆಟ್ಟಿ ಮನೆಗೆ ಹೊಸ ಸದಸ್ಯನ ಆಗಮನ; ಕುಟುಂಬದವರು ಫುಲ್ ಖುಷ್
ವಿಯಾನ್​ ಜತೆ ಶಿಲ್ಪಾ ಶೆಟ್ಟಿ
ರಾಜೇಶ್ ದುಗ್ಗುಮನೆ
| Edited By: |

Updated on: May 23, 2021 | 7:30 AM

Share

ನಟಿ ಶಿಲ್ಪಾ ಶೆಟ್ಟಿ ಮದುವೆ ಆದ ನಂತರದಲ್ಲಿ ಚಿತ್ರರಂಗದಿಂದ ದೂರವೇ ಉಳಿದಿದ್ದಾರೆ. ಕುಟುಂಬ-ಮಕ್ಕಳು ಎಂದು ಅವರು ಸಂಪೂರ್ಣ ಬ್ಯುಸಿಯಾಗಿದ್ದಾರೆ. ಹೀಗಿರುವಾಗಲೇ ಅವರ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಸದ್ಯ, ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಸಖತ್ ವೈರಲ್​ ಆಗುತ್ತಿದೆ.

ಶಿಲ್ಪಾ ಶೆಟ್ಟಿ ಮಗ ವಿಯಾನ್​ಗೆ ಜನ್ಮದಿನದ (ಮೇ 21) ಸಂಭ್ರಮ. ಆತ 9ನೇ ವರ್ಷಕ್ಕೆ ಕಾಲಿಟ್ಟಿದ್ದಾನೆ. ಈ ಸಂಭ್ರಮದಂದು ಆತನಿಗೆ ಏನಾದರೂ ವಿಶೇಷ ಗಿಫ್ಟ್​ ನೀಡುವ ಆಲೋಚನೆ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್​ ಕುಂದ್ರಾ ಅವರದ್ದಾಗಿತ್ತು. ಈ ಕಾರಣಕ್ಕೆ ಪುಟಾಣಿ ನಾಯಿ ಮರಿಯನ್ನು ಉಡುಗರೆಯಾಗಿ ನೀಡಿದ್ದಾರೆ. ಈ ವಿಶೇಷ ಗಿಫ್ಟ್​ ನೋಡಿ ವಿಯಾನ್​ ಸಖತ್​ ಖುಷಿಯಾಗಿದ್ದಾನೆ.

ಶಿಲ್ಪಾ ಶೆಟ್ಟಿ ಕಪ್ಪು ಬಣ್ಣದ ನಾಯಿ ಮರಿಯನ್ನು ತಂದಿದ್ದಾರೆ. ಈ ವೇಳೆ ವಿಯಾನ್​ ಕಣ್ಣನ್ನು ಮುಚ್ಚಲಾಗಿತ್ತು. ವಿಯಾನ್​ ಕಣ್ಣುಬಿಟ್ಟು ನೋಡಿದಾಗ ಎದುರಿಗೆ ನಾಯಿಮರಿ ಇತ್ತು. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ಈ ಬಗ್ಗೆ ಬರೆದುಕೊಂಡಿರುವ ಶಿಲ್ಪಾ ಶೆಟ್ಟಿ, ಮನೆಗೆ ಹೊಸ ಸದಸ್ಯನ ಆಗಮನವಾಗಿದೆ. ಮತ್ತೊಂದು ಶ್ವಾನ ಬೇಕು ಎಂದು ವಿಯಾನ್​ ಕೇಳುತ್ತಿದ್ದ. 10 ವರ್ಷ ಆದಮೇಲೆ ತಂದುಕೊಡುತ್ತೇನೆ ಎಂದು ಭಾಷೆ ನೀಡಿದೆ. ಈಗ ಒಂದು ವರ್ಷ ಮೊದಲೇ ಆತನಿಗೆ ಉಡುಗರೆ ಸಿಕ್ಕಿದೆ. ಹ್ಯಾಪ್ಪಿ ಬರ್ತ್​ಡೇ ಡಾರ್ಲಿಂಗ್​ ಎಂದು ಶಿಲ್ಪಾ ಬರೆದುಕೊಂಡಿದ್ದಾರೆ.

ನಟಿ ಶಿಲ್ಪಾ ಶೆಟ್ಟಿ ಸಿನಿಮಾ ರಂಗದಿಂದ ದೂರ ಉಳಿದರೂ ಸೋಶಿಯಲ್​ ಮೀಡಿಯಾದಲ್ಲಿ ತುಂಬಾನೇ ಆ್ಯಕ್ಟಿವ್​ ಆಗಿದ್ದಾರೆ. ಭಿನ್ನ ರೀತಿಯ ಫೋಟೋ ಹಾಗೂ ವಿಡಿಯೋಗಳನ್ನು ಪೋಸ್ಟ್​ ಮಾಡುವ ಮೂಲಕ ಅವರು ಎಲ್ಲರ ಗಮನ ಸೆಳೆಯುತ್ತಿರುತ್ತಾರೆ.  2007ರಲ್ಲಿ ತೆರೆಗೆ ಬಂದ ಅಪ್ನೆ ಸಿನಿಮಾ ಕೊನೆ. ನಂತರ ಮೂರು ಚಿತ್ರಗಳಲ್ಲಿ ಐಟಂ ಹಾಡಿಗೆ ಹೆಜ್ಜೆ ಹಾಕಿದ್ದು ಬಿಟ್ಟರೆ ಮತ್ತಾವುದೇ ಚಿತ್ರಗಳಲ್ಲಿ ಶಿಲ್ಪಾ ನಟಿಸಿಲ್ಲ. 2009ರಲ್ಲಿ ಶಿಲ್ಪಾ ವಿವಾಹವಾದರು. ನಂತರ ಅವರು ಚಿತ್ರರಂಗದಿಂದ ಸ್ವಲ್ಪ ದೂರ ಉಳಿದರು. ಸದ್ಯ ಅವರ ಕೈನಲ್ಲಿ ಎರಡು ಚಿತ್ರಗಳಿವೆ. ಈ ಸಿನಿಮಾಗಳು ಶೀಘ್ರವೇ ತೆರೆಗೆ ಬರಲಿವೆಯಂತೆ.

ಇದನ್ನೂ ಓದಿ: Mahesh Babu: ಮಹೇಶ್​ ಬಾಬುಗೆ ಶಿಲ್ಪಾ ಶೆಟ್ಟಿ ಆಂಟಿ? ಇದು ಹೇಗೆ ಸಾಧ್ಯ ಎಂದು ತಲೆ ಕೆರೆದುಕೊಂಡ ಫ್ಯಾನ್ಸ್​

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ