AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ಜೊತೆಗಿನ ಅಫೇರ್ ಬಗ್ಗೆ ನೇರ ಪ್ರಶ್ನೆ: ತ್ರಿಶಾ ಪ್ರತಿಕ್ರಿಯೆ ಹೇಗಿತ್ತು ನೋಡಿ

ತ್ರಿಶಾ ಕೃಷ್ಣನ್ ಮತ್ತು ದಳಪತಿ ವಿಜಯ್ ಅವರ ಸಂಬಂಧದ ಬಗ್ಗೆ ಭಾರಿ ಚರ್ಚೆ ಆಗುತ್ತಿದೆ. ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ತ್ರಿಷಾ ಅವರಿಗೆ ಈ ಕುರಿತು ನೇರವಾಗಿ ಪ್ರಶ್ನೆ ಕೇಳಲಾಗಿದೆ. ಆದರೆ ಅವರು ಮೌನವಾಗಿ ಮುಂದೆ ಆಗಿದ್ದಾರೆ. ಇದರಿಂದ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಆಗಿದೆ.

ವಿಜಯ್ ಜೊತೆಗಿನ ಅಫೇರ್ ಬಗ್ಗೆ ನೇರ ಪ್ರಶ್ನೆ: ತ್ರಿಶಾ ಪ್ರತಿಕ್ರಿಯೆ ಹೇಗಿತ್ತು ನೋಡಿ
Thalapthy Vijay, Trisha Krishnan
ಮದನ್​ ಕುಮಾರ್​
|

Updated on: Mar 13, 2026 | 5:39 PM

Share

ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್ ಮತ್ತು ತಮಿಳು ನಟ ದಳಪತಿ ವಿಜಯ್ (Thalapthy Vijay) ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮದುವೆ ಸಮಾರಂಭವೊಂದಕ್ಕೆ ಇಬ್ಬರೂ ಜೊತೆಯಾಗಿ ಆಗಮಿಸಿದ್ದು ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. ಈ ನಡುವೆ, ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ತ್ರಿಶಾ ಅವರಿಗೆ ವರದಿಗಾರರು ವಿಜಯ್ ಕುರಿತಾದ ಪ್ರಶ್ನೆಗಳಿಂದ ಮುತ್ತಿಗೆ ಹಾಕಿದ್ದಾರೆ. ಆದರೆ ತ್ರಿಶಾ (Trisha Krishnan) ಅವರು ಯಾವುದೇ ಉತ್ತರ ನೀಡದೇ ಮೌನ ತಾಳಿದ್ದಾರೆ.

ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ತ್ರಿಶಾ, ಬಿಳಿ ಟಿ-ಶರ್ಟ್, ಕಪ್ಪು ಪ್ಯಾಂಟ್ ಮತ್ತು ಡೆನಿಮ್ ಜಾಕೆಟ್ ಧರಿಸಿ ಸ್ಟೈಲಿಶ್ ಆಗಿ ಕಾಣಿಸಿಕೊಂಡರು. ಅವರು ಒಳಗೆ ನಡೆಯುತ್ತಿದ್ದಂತೆ, ಅಲ್ಲಿದ್ದ ವರದಿಗಾರರು ವಿಜಯ್ ಜೊತೆಗಿನ ಸಂಬಂಧ ಮತ್ತು ಇತ್ತೀಚಿನ ವಿವಾದಗಳ ಬಗ್ಗೆ ಪ್ರಶ್ನೆಗಳ ಸುರಿಮಳೆಗೈದರು. ಆದರೆ, ತ್ರಿಶಾ ಯಾವುದೇ ಪ್ರಶ್ನೆಗೂ ಪ್ರತಿಕ್ರಿಯಿಸದೆ, ಅತ್ಯಂತ ಶಾಂತವಾಗಿ ಮತ್ತು ಗಂಭೀರವಾಗಿ ನಡೆದು ಹೋದರು. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೆಲವು ದಿನಗಳ ಹಿಂದೆ ನಿರ್ಮಾಪಕ ಕಲ್ಪತಿ ಸುರೇಶ್ ಅವರ ಮಗನ ಮದುವೆಯ ರಿಸೆಪ್ಷನ್‌ನಲ್ಲಿ ವಿಜಯ್ ಮತ್ತು ತ್ರಿಶಾ ಒಟ್ಟಿಗೆ ಕಾಣಿಸಿಕೊಂಡಿದ್ದರು. ವಿಶೇಷವೆಂದರೆ, ಇಬ್ಬರೂ ಕ್ರೀಮ್ ಮತ್ತು ಗೋಲ್ಡ್ ಬಣ್ಣದ ಮ್ಯಾಚಿಂಗ್ ಉಡುಪುಗಳನ್ನು ಧರಿಸಿದ್ದರು. ಇದು ಅಭಿಮಾನಿಗಳಲ್ಲಿ ಮತ್ತಷ್ಟು ಕುತೂಹಲ ಮೂಡಿಸಿತ್ತು. ಆ ಮದುವೆಯಲ್ಲಿ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದು ವಿವಾದಕ್ಕೆ ಕಾರಣ ಆಯಿತು.

ಈ ಬೆಳವಣಿಗೆಗಳ ನಡುವೆ, ವಿಜಯ್ ಪತ್ನಿ ಸಂಗೀತಾ ಸೊರ್ನಲಿಂಗಂ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿರುವುದು ಸಂಚಲನ ಮೂಡಿಸಿದೆ. ಅರ್ಜಿಯಲ್ಲಿ ಅವರು ವಿಜಯ್ ಅವರ ಪರಸ್ತ್ರೀ ಸಂಬಂಧದ ಬಗ್ಗೆ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ವಿಜಯ್ ಅವರು ನಟಿಯೊಬ್ಬರ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ ಎನ್ನಲಾಗುತ್ತಿದ್ದು, ಇದು ನೇರವಾಗಿ ತ್ರಿಶಾ ಕೃಷ್ಣನ್ ಅವರತ್ತ ಬೆರಳು ಮಾಡುವಂತೆ ಮಾಡಿದೆ.

ಇದನ್ನೂ ಓದಿ: ಡೇಟಿಂಗ್ ವದಂತಿ; ಎಲ್ಲರಿಗೂ ಗೊಂದಲ ಮೂಡಿಸಿದ ತ್ರಿಶಾ ಕೃಷ್ಣನ್

ವಿಚ್ಛೇದನದ ಬಗ್ಗೆ ವಿಜಯ್ ನೇರವಾಗಿ ಮಾತನಾಡಿಲ್ಲವಾದರೂ, ಇತ್ತೀಚೆಗೆ ನಡೆದ ಟಿವಿಕೆ ರ‍್ಯಾಲಿಯಲ್ಲಿ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದರು. ‘ಇತ್ತೀಚಿನ ದಿನಗಳಲ್ಲಿ ಕೆಲವು ವಿಷಯಗಳು ಓಡಾಡುತ್ತಿವೆ. ಇಂತಹ ಆರೋಪಗಳ ಬಗ್ಗೆ ನೀವು ಹೋರಾಡುತ್ತಿರುವುದನ್ನು ಮತ್ತು ನೋವು ಅನುಭವಿಸುತ್ತಿರುವುದನ್ನು ನಾನು ನೋಡುತ್ತಿದ್ದೇನೆ. ನಿಮ್ಮ ಮನಸ್ಸಿಗೆ ನೋವಾದಾಗ ನನಗೂ ನೋವಾಗುತ್ತದೆ. ಆ ಸಮಸ್ಯೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ, ಅದಕ್ಕೆ ಅಷ್ಟು ಬೆಲೆ ನೀಡುವ ಅಗತ್ಯವಿಲ್ಲ. ನಾನು ಎಲ್ಲವನ್ನೂ ನಿಭಾಯಿಸುತ್ತೇನೆ’ ಎಂದು ಅಭಿಮಾನಿಗಳಿಗೆ ದಳಪತಿ ವಿಜಯ್ ಧೈರ್ಯ ತುಂಬಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?