AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಜಿಆರ್ ಬಯೋಪಿಕ್‌: ಮಾಜಿ ಸಿಎಂ ಜಯಲಲಿತಾ ಪಾತ್ರದಲ್ಲಿ ತ್ರಿಷಾ? ಹೆಚ್ಚಿದೆ ಕುತೂಹಲ

ಎಂ.ಜಿ. ರಾಮಚಂದ್ರನ್ ಅವರ ಬಯೋಪಿಕ್ ಮಾಡಲು ಸಿದ್ಧತೆ ನಡೆದಿದೆ. ವರದಿಗಳ ಪ್ರಕಾರ, ಈ ಸಿನಿಮಾದಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಪಾತ್ರದಲ್ಲಿ ನಟಿಸಲು ನಟಿ ತ್ರಿಷಾ ಅವರೊಂದಿಗೆ ಮಾತುಕತೆ ನಡೆಯುತ್ತಿದೆ. ಪಾತ್ರವರ್ಗದ ವಿವರಗಳ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

ಎಂಜಿಆರ್ ಬಯೋಪಿಕ್‌: ಮಾಜಿ ಸಿಎಂ ಜಯಲಲಿತಾ ಪಾತ್ರದಲ್ಲಿ ತ್ರಿಷಾ? ಹೆಚ್ಚಿದೆ ಕುತೂಹಲ
Trisha Krishnan Image Credit source: Instagram/trishakrishnan
ಮದನ್​ ಕುಮಾರ್​
|

Updated on: Oct 29, 2026 | 7:51 PM

Share

ತಮಿಳು ಚಿತ್ರರಂಗದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇತ್ತೀಚಿನ ದಿನಗಳಲ್ಲಿ ಸದಾ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ರಾಜಕೀಯ ಹಾಗೂ ಸಿನಿಮಾ ವಲಯದಲ್ಲಿ ಭಾರೀ ಚರ್ಚೆಯಲ್ಲಿರುವ ತ್ರಿಷಾ, ಈಗ ಮತ್ತೊಂದು ಬಹುನಿರೀಕ್ಷಿತ ಸಿನಿಮಾದ ಮೂಲಕ ಗಮನ ಸೆಳೆದಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ದಿವಂಗತ ನಟ ಎಂ.ಜಿ. ರಾಮಚಂದ್ರನ್ ಅವರ ಜೀವನಾಧಾರಿತ ಚಿತ್ರದಲ್ಲಿ ಮಾಜಿ ಸಿಎಂ ಜಯಲಲಿತಾ ಪಾತ್ರವನ್ನು ತ್ರಿಷಾ ಮಾಡಲಿದ್ದಾರೆ ಎಂಬ ಬಲವಾದ ವದಂತಿಗಳು ಹರಿದಾಡುತ್ತಿವೆ.

‘ಪುರಚಿ ತಲೈವರ್ ಎಂಜಿಆರ್’ ಹೆಸರಿನಲ್ಲಿ ಈ ಬಯೋಪಿಕ್ ರೂಪುಗೊಳ್ಳುತ್ತಿದ್ದು, ಎಂಜಿಆರ್ ಅವರ ಸಿನಿಮಾ ಪಯಣ ಹಾಗೂ ರಾಜಕೀಯ ಜೀವನದ ಏಳುಬೀಳುಗಳನ್ನು ಈ ಚಿತ್ರದಲ್ಲಿ ಕಟ್ಟಿಕೊಡಲಾಗುತ್ತಿದೆ. ಎಂಜಿಆರ್ ಅವರ ವೈಯಕ್ತಿಕ ಹಾಗೂ ರಾಜಕೀಯ ಜೀವನದಲ್ಲಿ ಜಯಲಲಿತಾ ಅವರದ್ದು ಪ್ರಮುಖ ಪಾತ್ರ. ಬೆಳ್ಳಿಪರದೆಯ ಮೇಲೆ ಹಾಗೂ ರಾಜಕೀಯ ರಂಗದಲ್ಲಿ ದೇಶದ ಅತ್ಯಂತ ಪ್ರಭಾವಿ ನಾಯಕಿಯಾಗಿ ಬೆಳೆದ ಜಯಲಲಿತಾ ಅವರ ವಿವಿಧ ಘಟ್ಟಗಳನ್ನು ತಲುಪಿಸುವ ಸವಾಲಿನ ಪಾತ್ರಕ್ಕಾಗಿ ತ್ರಿಷಾ ಅವರನ್ನು ಆಯ್ಕೆ ಮಾಡಲು ಚಿತ್ರತಂಡ ಚರ್ಚೆ ನಡೆಸುತ್ತಿದೆ ಎನ್ನಲಾಗಿದೆ.

ಈ ಬಯೋಪಿಕ್‌ನಲ್ಲಿ ಕೇವಲ ಎಂಜಿಆರ್ ಹಾಗೂ ಜಯಲಲಿತಾ ಮಾತ್ರವಲ್ಲದೆ, ತಮಿಳುನಾಡು ರಾಜಕೀಯದ ದಿಗ್ಗಜರಾದ ಸಿ.ಎನ್. ಅಣ್ಣಾದೊರೈ ಹಾಗೂ ಎಂ. ಕರುಣಾನಿಧಿ ಅವರಂತಹ ಪ್ರಮುಖ ನಾಯಕರ ಪಾತ್ರಗಳೂ ಇರಲಿವೆ. ಜೆ.ಎಂ. ಬಷೀರ್ ಅವರು ಈ ಚಿತ್ರದಲ್ಲಿ ಎಂಜಿಆರ್ ಪಾತ್ರ ಪೋಷಿಸುತ್ತಿದ್ದು, ಶೀಘ್ರದಲ್ಲೇ ಚೆನ್ನೈನ ರಾಮಾಪುರಂನಲ್ಲಿ ಶೂಟಿಂಗ್ ಆರಂಭವಾಗಲಿದೆ.

ತ್ರಿಷಾ ಅವರು ಜಯಲಲಿತಾ ಅವರ ಪಾತ್ರವನ್ನು ಒಪ್ಪಿಕೊಂಡರೆ, ಚಿತ್ರದ ಮೇಲಿನ ನಿರೀಕ್ಷೆ ದ್ವಿಗುಣಗೊಳ್ಳುವುದರಲ್ಲಿ ಅನುಮಾನವಿಲ್ಲ. ಆದರೆ, ಈ ಪಾತ್ರವರ್ಗದ ಕುರಿತು ಚಿತ್ರತಂಡದಿಂದ ಇನ್ನು ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಚರ್ಚೆಗಳು ಅಂತಿಮ ಹಂತದಲ್ಲಿದ್ದು, ತ್ರಿಷಾ ಈ ಪವರ್‌ಫುಲ್ ಪಾತ್ರಕ್ಕೆ ಹೌದು ಅನ್ನುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ತ್ರಿಷಾ ರಾಜಕೀಯ ಪ್ರವೇಶ ಫಿಕ್ಸ್? ಕೊಯಮತ್ತೂರು ಭೇಟಿ ವೇಳೆ ಜನಸಾಗರ

ದಕ್ಷಿಣ ಭಾರತದ ಚಿತ್ರರಂಗದಲ್ಲಿ ತ್ರಿಷಾ ಅವರಿಗೆ ಸಖತ್ ಬೇಡಿಕೆ ಇದೆ. ಕಮಲ್ ಹಾಸನ್, ಅಜಿತ್ ಕುಮಾರ್ ಮುಂತಾದ ಸ್ಟಾರ್ ನಟರ ಸಿನಿಮಾಗಳಲ್ಲಿ ನಾಯಕಿಯಾಗಿ ಅವರು ಮಿಂಚಿದ್ದಾರೆ. ಮಲಯಾಳಂ ಹಾಗೂ ತೆಲುಗು ಸಿನಿಮಾಗಳಿಂದಲೂ ಅವರಿಗೆ ಅವಕಾಶಗಳು ಹೆಚ್ಚಿವೆ. ದಳಪತಿ ವಿಜಯ್ ಜೊತೆಗಿನ ಒಡನಾಟದ ಕಾರಣದಿಂದಲೂ ಅವರು ಆಗಾಗ ಸುದ್ದಿ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕೇವಲ ಹಾಲು ಮಾತ್ರವಲ್ಲ ಅದರ ಉತ್ಪನ್ನಗಳ ಬೆಲೆನೂ ಜಾಸ್ತಿ ಆಗುತ್ತೆ: ಸವದಿ
ಕೇವಲ ಹಾಲು ಮಾತ್ರವಲ್ಲ ಅದರ ಉತ್ಪನ್ನಗಳ ಬೆಲೆನೂ ಜಾಸ್ತಿ ಆಗುತ್ತೆ: ಸವದಿ
ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಹಾಲು ಬೆನ್ನಲ್ಲೇ ಬಸ್ ಟಿಕೆಟ್ ದರ ಹೆಚ್ಚಳ:ಬಿಗ್ ಅಪ್ಡೇಟ್ ನೀಡಿದ ಸಚಿವ
ಹಾಲು ಬೆನ್ನಲ್ಲೇ ಬಸ್ ಟಿಕೆಟ್ ದರ ಹೆಚ್ಚಳ:ಬಿಗ್ ಅಪ್ಡೇಟ್ ನೀಡಿದ ಸಚಿವ
ಸಿದ್ದರಾಮಯ್ಯ ಈಸ್ ಬ್ಯಾಕ್: ಅಹಿಂದ ಹಳೆ ಅಸ್ತ್ರಕ್ಕೆ ಸಾಣೆ ಹಿಡಿಯಲು ಸಿದ್ದತೆ
ಸಿದ್ದರಾಮಯ್ಯ ಈಸ್ ಬ್ಯಾಕ್: ಅಹಿಂದ ಹಳೆ ಅಸ್ತ್ರಕ್ಕೆ ಸಾಣೆ ಹಿಡಿಯಲು ಸಿದ್ದತೆ
ಹೆಣ್ಮಕ್ಕಳ ಬಗ್ಗೆ ತೂಕವಾಗಿ ಮಾತಾಡಬೇಕು: ವಿವಾದಕ್ಕೆ ಪ್ರೇಮ್ ಪ್ರತಿಕ್ರಿಯೆ
ಹೆಣ್ಮಕ್ಕಳ ಬಗ್ಗೆ ತೂಕವಾಗಿ ಮಾತಾಡಬೇಕು: ವಿವಾದಕ್ಕೆ ಪ್ರೇಮ್ ಪ್ರತಿಕ್ರಿಯೆ
‘ದರ್ಶನ್​​ ಅನ್ನು ಹೊರಗೆ ತರಲು ವಿಜಯಲಕ್ಷ್ಮಿ ಬಹಳ ಕಷ್ಟಪಡುತ್ತಿದ್ದಾರೆ’
‘ದರ್ಶನ್​​ ಅನ್ನು ಹೊರಗೆ ತರಲು ವಿಜಯಲಕ್ಷ್ಮಿ ಬಹಳ ಕಷ್ಟಪಡುತ್ತಿದ್ದಾರೆ’
10 ಕೋಟಿ ರೂಪಾಯಿ ವಿವಾದ; ಎಲ್ಲಾ ತನಿಖೆ ಎದುರಿಸಲು ಧನ್ವೀರ್ ರೆಡಿ ಎಂದ ಲಾಯರ್
10 ಕೋಟಿ ರೂಪಾಯಿ ವಿವಾದ; ಎಲ್ಲಾ ತನಿಖೆ ಎದುರಿಸಲು ಧನ್ವೀರ್ ರೆಡಿ ಎಂದ ಲಾಯರ್
ಹಾಸನಾಂಬ ದರ್ಶನೋತ್ಸವ: ವರ್ಷದ ಬಳಿಕ ತೆರೆದ ದೇಗುಲದ ಗರ್ಭಗುಡಿ
ಹಾಸನಾಂಬ ದರ್ಶನೋತ್ಸವ: ವರ್ಷದ ಬಳಿಕ ತೆರೆದ ದೇಗುಲದ ಗರ್ಭಗುಡಿ
ಸ್ಟಿಂಗ್ ಕೇಸ್: ಕೃಪಾ‌ ಆಳ್ವಾ ಬಂಧನ ಭೀತಿಯಿಂದ ವಿದೇಶಕ್ಕೆ ತೆರಳಿರುವ ಶಂಕೆ
ಸ್ಟಿಂಗ್ ಕೇಸ್: ಕೃಪಾ‌ ಆಳ್ವಾ ಬಂಧನ ಭೀತಿಯಿಂದ ವಿದೇಶಕ್ಕೆ ತೆರಳಿರುವ ಶಂಕೆ
ವೈರಲ್ ಆಗಿರುವ ಧನ್ವೀರ್ ಗೌಡ ಆಡಿಯೋಗಳು ಫೇಕ್: ವಕೀಲರ ಆರೋಪ
ವೈರಲ್ ಆಗಿರುವ ಧನ್ವೀರ್ ಗೌಡ ಆಡಿಯೋಗಳು ಫೇಕ್: ವಕೀಲರ ಆರೋಪ