ರಾಜಕೀಯದ ಕಡೆ ತ್ರಿಷಾ ಒಲವು; ಕಾಂಗ್ರೆಸ್ ಸೇರಲಿದ್ದಾರೆ ‘ಪವರ್​’ ನಟಿ?

ಪುನೀತ್ ನಟಿಸಬೇಕಿದ್ದ ‘ದ್ವಿತ್ವ’ ಚಿತ್ರಕ್ಕೆ ತ್ರಿಷಾ ನಾಯಕಿ ಆಗಿ ಆಯ್ಕೆ ಆಗಿದ್ದರು. ಆದರೆ, ಸಿನಿಮಾ ಸೆಟ್ಟೇರುವ ಮೊದಲೇ ಪುನೀತ್ ನಿಧನ ಹೊಂದಿದರು. ವಿವಿಧ ಚಿತ್ರಗಳಲ್ಲಿ ಬ್ಯುಸಿ ಇರುವ ತ್ರಿಷಾ ರಾಜಕೀಯದತ್ತ ಒಲವು ತೋರುತ್ತಿದ್ದಾರೆ ಎನ್ನಲಾಗುತ್ತಿದೆ.

ರಾಜಕೀಯದ ಕಡೆ ತ್ರಿಷಾ ಒಲವು; ಕಾಂಗ್ರೆಸ್ ಸೇರಲಿದ್ದಾರೆ ‘ಪವರ್​’ ನಟಿ?
ತ್ರಿಶಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Aug 20, 2022 | 6:30 AM

ಚಿತ್ರರಂಗಕ್ಕೂ ರಾಜಕೀಯಕ್ಕೂ ಇರುವ ನಂಟನ್ನು ಬಿಡಿಸಿ ಹೇಳಬೇಕಿಲ್ಲ. ಚಿತ್ರರಂಗದಲ್ಲಿ ಮಿಂಚಿದ ನಂತರದಲ್ಲಿ ಅನೇಕರು ರಾಜಕೀಯವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಕೆಲವರು ನಟನೆಯನ್ನು ಪೂರ್ತಿ ತೊರೆದು ರಾಜಕೀಯದಲ್ಲಿ ಬ್ಯುಸಿ ಆದರೆ, ಇನ್ನೂ ಕೆಲವರು ನಟನೆ ಹಾಗೂ ರಾಜಕೀಯ ಎರಡನ್ನೂ ಬ್ಯಾಲೆನ್ಸ್ ಮಾಡಿಕೊಂಡು ಹೋಗುತ್ತಿದ್ದಾರೆ. ಈಗ ನಟಿ ತ್ರಿಷಾ ಕೂಡ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿ ಹರಿದಾಡಿದೆ. ಇದು ಅಂತೆ-ಕಂತೆಗಷ್ಟೇ ಸೀಮಿತವೋ ಅಥವಾ ಇದರಲ್ಲಿ ಸತ್ಯತೆ ಇದೆಯೋ ಎಂಬುದಕ್ಕೆ ತ್ರಿಷಾ (Trisha) ಕಡೆಯಿಂದಲೇ ಸ್ಪಷ್ಟನೆ ಸಿಗಬೇಕಿದೆ.

ತ್ರಿಷಾ ಹಲವು ಭಾಷೆಯ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ಕನ್ನಡದಲ್ಲಿ ಪುನೀತ್ ರಾಜ್​ಕುಮಾರ್ ನಟಿಸಿದ್ದ ‘ಪವರ್’ ಚಿತ್ರಕ್ಕೆ ಅವರೇ ನಾಯಕಿ ಆಗಿದ್ದರು. ಪುನೀತ್ ನಟಿಸಬೇಕಿದ್ದ ‘ದ್ವಿತ್ವ’ ಚಿತ್ರಕ್ಕೆ ತ್ರಿಷಾ ನಾಯಕಿ ಆಗಿ ಆಯ್ಕೆ ಆಗಿದ್ದರು. ಆದರೆ, ಸಿನಿಮಾ ಸೆಟ್ಟೇರುವ ಮೊದಲೇ ಪುನೀತ್ ನಿಧನ ಹೊಂದಿದರು. ಈ ಕಾರಣದಿಂದ ಸಿನಿಮಾ ಸೆಟ್ಟೇರಿಲ್ಲ. ವಿವಿಧ ಚಿತ್ರಗಳಲ್ಲಿ ಬ್ಯುಸಿ ಇರುವ ತ್ರಿಷಾ ರಾಜಕೀಯದತ್ತ ಒಲವು ತೋರುತ್ತಿದ್ದಾರೆ ಎನ್ನಲಾಗುತ್ತಿದೆ.

ಎಂಜಿಆರ್​, ಜಯಲಲಿತಾ ಮೊದಲಾದವರು ಚಿತ್ರರಂಗದಲ್ಲಿ ಗುರುತಿಸಿಕೊಂಡು ನಂತರ ರಾಜಕೀಯದಲ್ಲಿ ಮಿಂಚಿದರು. ಅವರ ರೀತಿಯಲ್ಲೇ ತ್ರಿಷಾ ಕೂಡ ರಾಜಕೀಯದಲ್ಲಿ ಗುರುತಿಸಿಕೊಳ್ಳಬೇಕು ಎಂಬ ಕಸನು ಕಂಡಿದ್ದಾರೆ. ತಮಿಳಿನಲ್ಲಿ ಹಲವು ಹಿಟ್ ಚಿತ್ರಗಳನ್ನು ನೀಡಿರುವ ಅವರು ಅಲ್ಲಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ ಎಂಬ ಮಾತಿದೆ.

ತಮಿಳುನಾಡಿನಲ್ಲಿ ಸ್ಥಳೀಯ ಪಕ್ಷಗಳಾದ ಡಿಎಂಕೆ ಹಾಗೂ ಎಐಡಿಎಂಕೆ ಪ್ರಾಬಲ್ಯ ಇದೆ. ಈ ಎರಡೂ ಪಕ್ಷಗಳನ್ನು ಬಿಟ್ಟು ಅವರು, ಕಾಂಗ್ರೆಸ್ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಅವರು ರಾಜಕೀಯ ಸೇರ್ಪಡೆ ಆಗಿದ್ದೇ ಆದಲ್ಲಿ ಯಾವ ರೀತಿಯಲ್ಲಿ ತ್ರಿಷಾ ಮಿಂಚಲಿದ್ದಾರೆ ಎಂಬುದು ಸದ್ಯದ ಕುತೂಹಲ.

ಇದನ್ನೂ ಓದಿ: ತ್ರಿಷಾ ನಂತರ ಮತ್ತೋರ್ವ ಹೀರೋಯಿನ್ ಖಾಸಗಿ ವಿಡಿಯೋ ಲೀಕ್​​; ನರಕದಲ್ಲಿ ನಿಮಗೆ ವಿಶೇಷ ವ್ಯವಸ್ಥೆ ಇದೆ ಎಂದ ​ನಟಿ

ತಮಿಳುನಾಡು ರಾಜಕೀಯದಲ್ಲಿ ಜಯಲಲಿತಾ ಬಳಿಕ ಸಿನಿಮಾ ರಂಗದ ಯಾರೊಬ್ಬರೂ ಪಾಲಿಟಿಕ್ಸ್​ನಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಪಡೆದಿಲ್ಲ. ಖುಷ್ಬೂ ಕಾಂಗ್ರೆಸ್ ಸೇರ್ಪಡೆ ಆಗಿದ್ದರು. ನಂತರ ಪಕ್ಷ ಬದಲಾಯಿಸಿ ಬಿಜೆಪಿ ಸೇರಿದರು. ಕಳೆದ ತಮಿಳುನಾಡು ಲೋಕಸಭಾ ಚುನಾವಣೆಯಲ್ಲಿ ಅವರು ಸ್ಪರ್ಧಸಿದ್ದರು. ಆದರೆ ವಿಜಯಲಕ್ಷ್ಮೀ ಅವರಿಗೆ ಒಲಿದಿಲ್ಲ.

ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?