Sudipto Sen: ‘ದಿ ಕೇರಳ ಸ್ಟೋರಿ’ ನಿರ್ದೇಶಕನ ವೆಬ್​ಸೈಟ್​ ಹ್ಯಾಕ್​; ಚಿತ್ರ ಬಿಡುಗಡೆ ಹೊಸ್ತಿಲಿನಲ್ಲಿ ಇಂಥ ಕೃತ್ಯ ಯಾಕೆ?

|

Updated on: May 02, 2023 | 6:22 PM

The Kerala Story: ಹಲವು ಕಾರಣಗಳಿಂದಾಗಿ ‘ದಿ ಕೇರಳ ಸ್ಟೋರಿ’ ಸಿನಿಮಾ ಸುದ್ದಿ ಆಗುತ್ತಿದೆ. ನಿರ್ದೇಶಕ ಸುದೀಪ್ತೋ ಸೇನ್​ ಅವರ ವೆಬ್​ಸೈಟ್​ ಮೇಲೆ ಸೈಬರ್​ ಕಳ್ಳರು ಕಣ್ಣು ಹಾಕಿದ್ದಾರೆ.

Sudipto Sen: ‘ದಿ ಕೇರಳ ಸ್ಟೋರಿ’ ನಿರ್ದೇಶಕನ ವೆಬ್​ಸೈಟ್​ ಹ್ಯಾಕ್​; ಚಿತ್ರ ಬಿಡುಗಡೆ ಹೊಸ್ತಿಲಿನಲ್ಲಿ ಇಂಥ ಕೃತ್ಯ ಯಾಕೆ?
ದಿ ಕೇರಳ ಸ್ಟೋರಿ ಸಿನಿಮಾ ಪೋಸ್ಟರ್​
Follow us on

ಮೇ 5ರಂದು ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾ ಕುರಿತಂತೆ ಈಗಾಗಲೇ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಈ ಚಿತ್ರ ಬಿಡುಗಡೆ ಆಗದಂತೆ ತಡೆಯಬೇಕು ಎಂದು ಕೂಡ ಹಲವರು ಪ್ರಯತ್ನಿಸುತ್ತಿದ್ದಾರೆ. ಇದೆಲ್ಲದರ ನಡುವೆ ನಿರ್ದೇಶಕ ಸುದೀಪ್ತೋ ಸೇನ್​ (Sudipto Sen) ಅವರ ವೆಬ್​ಸೈಟ್​ ಹ್ಯಾಕ್​ ಆಗಿದೆ. ಸೈಬರ್​ ಕಳ್ಳರು ಕೆಲವು ಹೊತ್ತಿಯ ತನಕ ಈ ವೆಬ್​ಸೈಟ್​ ಅನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿರುವುದು ವರದಿ ಆಗಿದೆ. ‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆ ಆಗುವುದನ್ನು ತಡೆಯುವ ಉದ್ದೇಶದಿಂದಲೇ ಈ ಪ್ರಯತ್ನ ಮಾಡಲಾಗಿದೆ ಎಂಬ ಮಾತು ಕೇಳಿಬಂದಿದೆ. ಚಿತ್ರದ ಬಿಡುಗಡೆಗೆ ಇನ್ನೂ ಮೂರು ದಿನ ಬಾಕಿ ಇದೆ. ಅಷ್ಟರಲ್ಲಿ ಒಂದಷ್ಟು ಕ್ಷಿಪ್ರ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ. ಒಟ್ಟಿನಲ್ಲಿ ರಿಲೀಸ್​ಗೂ ಮುನ್ನವೇ ಈ ಸಿನಿಮಾ ಚಕಮಕಿ ಎಬ್ಬಿಸಿದೆ. ಈ ಚಿತ್ರದಲ್ಲಿ ನಟಿ ಅದಾ ಶರ್ಮಾ (Adah Sharma) ಅವರು ಪ್ರಮುಖ ಪಾತ್ರ ಮಾಡಿದ್ದಾರೆ.

ನಿರ್ದೇಶಕ ಸುದೀಪ್ತೋ ಸೇನ್​ ಅವರ ವೆಬ್​ಸೈಟ್​ ಅನ್ನು ಇಂಡೋನೇಷಿಯಾದಿಂದ ಹ್ಯಾಕ್​ ಮಾಡಲಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ವೆಬ್​ಸೈಟ್​ನ ಚಟುವಟಿಕೆಗಳಲ್ಲಿ ವ್ಯತ್ಯಯ ಆಗುವ ರೀತಿಯಲ್ಲಿ ಹಾನಿ ಮಾಡಲಾಗಿದೆ. ಬೆದರಿಕೆವೊಡ್ಡುವ ಉದ್ದೇಶದಿಂದಲೇ ಸೈಬರ್​ ಖದೀಮರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: The Kerala Story: ‘ದಿ ಕೇರಳ ಸ್ಟೋರಿ’ ವಿವಾದ: ‘ನಾವು ಸಾಕ್ಷಿ ಇಲ್ಲದೇ ಏನನ್ನೂ ಹೇಳಲ್ಲ’ ಎಂದ ನಿರ್ಮಾಪಕ ವಿಪುಲ್​ ಶಾ

ಇದನ್ನೂ ಓದಿ
‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ತಡೆ ನೀಡಿ ಎಂದು ಸಲ್ಲಿಕೆ ಆಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್​ ನಕಾರ
‘ದಿ ಕೇರಳ ಸ್ಟೋರಿ’ ಟ್ರೇಲರ್ ವಿರುದ್ಧ ಅಸಮಾಧಾನಗೊಂಡ ಕೇರಳ ಸಿಎಂ; ಚಿತ್ರಕ್ಕೆ ಬೀಳಲಿದೆ ತಡೆ?
‘ಹಿಜಾಬ್ ಹಾಕಿದವರ ಮೇಲೆ ಅತ್ಯಾಚಾರ ಆಗಲ್ಲ, ಅಲ್ಲಾಹ್ ಮಾತ್ರ ಕಾಪಾಡುವವನು’; ಚರ್ಚೆ ಹುಟ್ಟುಹಾಕಿದ ‘ದಿ ಕೇರಳ ಸ್ಟೋರಿ’ ಟ್ರೇಲರ್
The Kerala Story: ‘ದಿ ಕೇರಳ ಸ್ಟೋರಿ’ ವಿವಾದ: ‘ನಾವು ಸಾಕ್ಷಿ ಇಲ್ಲದೇ ಏನನ್ನೂ ಹೇಳಲ್ಲ’ ಎಂದ ನಿರ್ಮಾಪಕ ವಿಪುಲ್​ ಶಾ

‘ದಿ ಕೇರಳ ಸ್ಟೋರಿ’ ವಿವಾದ ಏನು?

ಅದಾ ಶರ್ಮಾ ಅವರು ಕಾಣಿಸಿಕೊಂಡ ‘ದಿ ಕೇರಳ ಸ್ಟೋರಿ’ ಚಿತ್ರದ ಟೀಸರ್​ ಬಿಡುಗಡೆ ಆದಾಗಲೇ ವಿವಾದದ ಕಿಡಿ ಹೊತ್ತಿಕೊಂಡಿತ್ತು. ಹಿಂದೂ ಮತ್ತು ಕ್ರಿಶ್ಚಿಯನ್​ ಹುಡುಗಿಯರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿ, ನಂತರ ಅವರನ್ನು ಉಗ್ರ ಸಂಘಟನೆಗಳಲ್ಲಿ ಬಳಸಿಕೊಳ್ಳುವ ಜಾಲದ ಬಗ್ಗೆ ಇದರಲ್ಲಿ ತೋರಿಸಲಾಗಿತ್ತು. ಇತ್ತೀಚೆಗೆ ಬಿಡುಗಡೆ ಆಗಿರುವ ಟ್ರೇಲರ್​ನಲ್ಲಿ ಇನ್ನಷ್ಟು ವಿವರಗಳನ್ನು ನೀಡಲಾಗಿದೆ. ಅದನ್ನು ಕಂಡು ಅನೇಕರು ಬೆಚ್ಚಿ ಬಿದ್ದಿದ್ದಾರೆ. ಆ ಮೂಲಕ ‘ದಿ ಕೇರಳ ಸ್ಟೋರಿ’ ಬಗ್ಗೆ ಹೈಪ್​ ಸೃಷ್ಟಿ ಆಗಿದೆ.

ಇದನ್ನೂ ಓದಿ: The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿನ ಮಾಹಿತಿ ನಿಜ ಅಂತ ಸಾಬೀತು ಮಾಡಿದ್ರೆ 1 ಕೋಟಿ ರೂ. ಬಹುಮಾನ

‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ತೋರಿಸಲಾಗುತ್ತಿರುವ ಮಾಹಿತಿ ನಿಜವೋ ಸುಳ್ಳೋ ಎಂಬ ಬಗ್ಗೆ ಖಚಿತತೆ ಇಲ್ಲ. ಇದರ ಸತ್ಯಾಸತ್ಯತೆ ಕುರಿತು ಕೆಲವರು ಪ್ರಶ್ನೆ ಎತ್ತಿದ್ದಾರೆ. ಈ ಚಿತ್ರಕ್ಕೆ ಸೆನ್ಸಾರ್​ ಮಂಡಳಿಯಿಂದ ‘ಎ’ ಪ್ರಮಾಣಪತ್ರ ಸಿಕ್ಕಿದೆ. ಸಿನಿಮಾದಲ್ಲಿನ 10 ದೃಶ್ಯಗಳಿಗೆ ಕತ್ತರಿ ಹಾಕಲು ಸೆನ್ಸಾರ್​ ಮಂಡಳಿ ಆದೇಶಿಸಿದೆ ಎಂದು ವರದಿ ಆಗಿದೆ. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರಕ್ಕೆ ಎಷ್ಟು ಕಲೆಕ್ಷನ್​ ಆಗಲಿದೆ ಎಂಬ ಕೌತುಕ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.