Adipurush Movie: ‘ಆದಿಪುರುಷ್’ ಬಾಕ್ಸ್ ಆಫೀಸ್ ಲೆಕ್ಕಾಚಾರ ಫೇಕ್? ಮೂಡಿದೆ ಅನುಮಾನ

ನೆಗೆಟಿವ್ ವಿಮರ್ಶೆ ಪಡೆದಿದ್ದು ಸಿನಿಮಾಗೆ ಹಿನ್ನಡೆ ಆಗಿದೆ. ಆದರೆ, ಕಲೆಕ್ಷನ್ ಒಳ್ಳೆಯ ರೀತಿಯಲ್ಲೇ ಆಗಿದೆ. ಇದರ ಬಗ್ಗೆ ಕೆಲವರು ತಕರಾರು ತೆಗೆದಿದ್ದಾರೆ.

Adipurush Movie: ‘ಆದಿಪುರುಷ್’ ಬಾಕ್ಸ್ ಆಫೀಸ್ ಲೆಕ್ಕಾಚಾರ ಫೇಕ್? ಮೂಡಿದೆ ಅನುಮಾನ
ಪ್ರಭಾಸ್
Follow us
ರಾಜೇಶ್ ದುಗ್ಗುಮನೆ
|

Updated on: Jun 22, 2023 | 11:51 AM

ಪ್ರಭಾಸ್ ನಟನೆಯ ‘ಆದಿಪುರುಷ್’ (Adipurush Movie) ಸಿನಿಮಾ ಅಂದುಕೊಂಡಿದ್ದಕ್ಕಿಂತಲೂ ಕೆಟ್ಟದಾಗಿ ವಿಮರ್ಶೆಗಳನ್ನು ಪಡೆದಿದೆ. ಟೀಸರ್-ಟ್ರೇಲರ್ ರಿಲೀಸ್ ಆದಾಗಲೇ ಸಿನಿಮಾ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿ ಬಂದವು. ಸಿನಿಮಾ ರಿಲೀಸ್ ಆದ ಬಳಿಕ ಈ ಟೀಕೆ ಹೆಚ್ಚಾಯಿತು. ಈಗ ‘ಆದಿಪುರುಷ್’ ಸಿನಿಮಾದ ಕಲೆಕ್ಷನ್ ತಗ್ಗುತ್ತಿದೆ. ಜೂನ್ 21ರಂದು ಈ ಚಿತ್ರ ಕೇವಲ 7.50 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ ಭಾರತದಲ್ಲಿ 255 ಕೋಟಿ ರೂಪಾಯಿ ದಾಟಿದೆ. ಕೆಟ್ಟ ವಿಮರ್ಶೆ ಪಡೆದ ಹೊರತಾಗಿಯೂ ಸಿನಿಮಾ ಇಷ್ಟೊಂದು ಗಳಿಕೆ ಮಾಡಲು ಹೇಗೆ ಸಾಧ್ಯ ಎನ್ನುವ ಪ್ರಶ್ನೆಯನ್ನು ಅನೇಕರು ತೆಗೆದಿದ್ದಾರೆ.

ಪ್ರಭಾಸ್ ಅವರು ‘ಆದಿಪುರುಷ್’ ಸಿನಿಮಾದಲ್ಲಿ ರಾಮನ ಪಾತ್ರ ಮಾಡಿದ್ದಾರೆ. ಸೀತೆಯಾಗಿ ಕೃತಿ ಸನೋನ್ ನಟಿಸಿದ್ದಾರೆ. ಓಂ ರಾವತ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರ ಯಾವ ರೀತಿಯಲ್ಲಿ ಮೂಡಿ ಬರಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಇತ್ತು. ಸಿನಿಮಾ ರಿಲೀಸ್ ಆದ ಬಳಿಕ ಚಿತ್ರಕ್ಕೆ ನೆಗೆಟಿವ್ ವಿಮರ್ಶೆಗಳು ತುಂಬಿ ಹೋದವು. ‘ಆದಿಪುರುಷ್’ ಚಿತ್ರವನ್ನು ಸಾಕಷ್ಟು ಮಂದಿ ತೆಗಳಿದ್ದಾರೆ. ಇದಕ್ಕೆ ಕಾರಣ ಸಿನಿಮಾದಲ್ಲಿ ಇರುವ ವಿಚಾರಗಳು. ರಾವಣ ಬ್ರಾಹ್ಮಣನಾಗಿ ಮಾಂಸ ಮುಟ್ಟುವುದು, ಪುಷ್ಪಕ ವಿಮಾನದ ಬದಲು ಬಾವಲಿ ಬಳಸಿದ್ದು, ಮಾನ ಹಾನಿ ಆಗುವಂಥ ಡೈಲಾಗ್​ಗಳು, ಕಥೆಯನ್ನು ತಿರುಚಿದ್ದು, ಪಾತ್ರಗಳನ್ನು ಬೇಕಾಬಿಟ್ಟಿ ತೋರಿಸಿದ್ದು ಸಿನಿಮಾಗೆ ಹಿನ್ನಡೆ ಆಗಿದೆ. ಆದರೆ, ಕಲೆಕ್ಷನ್ ಒಳ್ಳೆಯ ರೀತಿಯಲ್ಲೇ ಆಗಿದೆ. ಇದರ ಬಗ್ಗೆ ಕೆಲವರು ತಕರಾರು ತೆಗೆದಿದ್ದಾರೆ.

‘ಐದು ದಿನಕ್ಕೆ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಆದಿಪುರುಷ್ ಸಿನಿಮಾ 390 ಕೋಟಿ ರೂಪಾಯಿ ಗಳಿಕೆ ಮಾಡಿದೆ’ ಎಂದು ಕೃತಿ ಸನೋನ್ ಅವರು ಪೋಸ್ಟ್ ಒಂದನ್ನು ಹಾಕಿದ್ದರು. ಇದಕ್ಕೆ ಅನೇಕರು ಟೀಕೆ ಮಾಡಿದ್ದಾರೆ. ಹಲವರು ಇದು ಫೇಕ್ ಕಲೆಕ್ಷನ್ ರಿಪೋರ್ಟ್ ಎಂದಿದ್ದಾರೆ. ಕೆಲವರು ಕೃತಿ ಪರವಾಗಿ ಮಾತನಾಡಿದ್ದಾರೆ.

View this post on Instagram

A post shared by Kriti (@kritisanon)

ಇದನ್ನೂ ಓದಿ: ಟೀಕೆಗಳ ಮಧ್ಯೆಯೇ ‘ಆದಿಪುರುಷ್’ ಚಿತ್ರಕ್ಕೆ ಹೈಕೋರ್ಟ್​ನಿಂದ ದೊಡ್ಡ ರಿಲೀಫ್

‘ಆದಿಪುರುಷ್’ ಸಿನಿಮಾಗೆ ಸಖತ್ ಹೈಪ್ ಸೃಷ್ಟಿ ಆಗಿತ್ತು. ಈ ಕಾರಣಕ್ಕೆ ಅನೇಕರು ಸಿನಿಮಾ ವೀಕ್ಷಣೆ ಮಾಡಿದ್ದರು. ಹೀಗಾಗಿ, ಚಿತ್ರದ ಬಾಕ್ಸ್ ಆಫೀಸ್ ಕಲೆಕ್ಷನ್ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಚಿತ್ರದ ಗಳಿಕೆಯಲ್ಲಿ ಇಳಿಕೆ ಆಗಲಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ