Om Raut: ಮತ್ತೆ ಟ್ರೋಲ್​ ಆದ ‘ಆದಿಪುರುಷ್​’ ನಿರ್ದೇಶಕ ಓಂ ರಾವತ್​; ಈ ಬಾರಿ ಫ್ಯಾನ್ಸ್​ ಕೋಪಕ್ಕೆ ಕಾರಣ ಏನು?

Adipurush Movie | Prabhas: ಕಳಪೆ ಗ್ರಾಫಿಕ್ಸ್​ ಕಾರಣಕ್ಕೆ ‘ಆದಿಪುರುಷ್​’ ನಿರ್ದೇಶಕ ಓಂ ರಾವತ್​ ಅವರನ್ನು ಈ ಹಿಂದೆ ಟ್ರೋಲ್​ ಮಾಡಲಾಗಿತ್ತು. ಆದರೆ ಈಗ ಮತ್ತೊಂದು ಕಾರಣಕ್ಕೆ ಪ್ರಭಾಸ್​ ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದಾರೆ.

Om Raut: ಮತ್ತೆ ಟ್ರೋಲ್​ ಆದ ‘ಆದಿಪುರುಷ್​’ ನಿರ್ದೇಶಕ ಓಂ ರಾವತ್​; ಈ ಬಾರಿ ಫ್ಯಾನ್ಸ್​ ಕೋಪಕ್ಕೆ ಕಾರಣ ಏನು?
ಓಂ ರಾವತ್, ಪ್ರಭಾಸ್
Follow us
ಮದನ್​ ಕುಮಾರ್​
|

Updated on:Mar 24, 2023 | 6:07 PM

ನಟ ಪ್ರಭಾಸ್​ (Prabhas) ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಇದ್ದಾರೆ. ಅವರನ್ನು ಬಿಗ್​ ಸ್ಕ್ರೀನ್​ನಲ್ಲಿ ನೋಡಲು ಫ್ಯಾನ್ಸ್​ ಹಂಬಲಿಸುತ್ತಿದ್ದಾರೆ. ಅವರು ನಟಿಸಿರುವ ‘ಆದಿಪುರುಷ್​’ ಸಿನಿಮಾ (Adipurush Movie) ಜೂನ್​ 16ರಂದು ಬಿಡುಗಡೆ ಆಗಲಿದೆ. ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಆದರೆ ನಿರ್ದೇಶಕ ಓಂ ರಾವತ್​ ಅವರು ಸರಿಯಾಗಿ ಪ್ರಚಾರ ಮಾಡುತ್ತಿಲ್ಲ ಎಂದು ಪ್ರಭಾಸ್​ ಫ್ಯಾನ್ಸ್ ಗರಂ ಆಗಿದ್ದಾರೆ. ಸ್ಟಾರ್​ ನಟರ ಸಿನಿಮಾಗೆ ಎರಡೂವರೆ ತಿಂಗಳು ಮಾತ್ರ ಬಾಕಿ ಇದೆ ಎಂದಾಗ ಭರ್ಜರಿಯಾಗಿ ಪ್ರಚಾರ ಕಾರ್ಯ ಆರಂಭ ಆಗುತ್ತದೆ. ಆದರೆ ಓಂ ರಾವತ್​ (Om Raut) ಸುಮ್ಮನೆ ಕುಳಿತಿರುವುದಕ್ಕೆ ಅವರನ್ನು ಪ್ರಭಾಸ್​ ಫ್ಯಾನ್ಸ್​ ಟ್ರೋಲ್​ ಮಾಡುತ್ತಿದ್ದಾರೆ.

‘ಆದಿಪುರುಷ್​’ ಸಿನಿಮಾದ ರಿಲೀಸ್​ ದಿನಾಂಕ ಮುಂದೂಡಿಕೆ ಆಗಬಹುದೇ ಎಂದು ಅನೇಕರು ಊಹಿಸಿದ್ದರು. ಆದರೆ ಹೊಸ ಪೋಸ್ಟರ್​ ಹಂಚಿಕೊಳ್ಳುವ ಮೂಲಕ ರಿಲೀಸ್​ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ನಿರ್ಮಾಪಕರು ತಿಳಿಸಿದ್ದರು. ಎಲ್ಲವೂ ಅಂದುಕೊಂಡಂತೆ ನಡೆದರೆ ಜೂನ್​ 16ರಂದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಆದಿಪುರುಷ್​’ ಸಿನಿಮಾ ರಿಲೀಸ್​ ಆಗಲಿದೆ. ಆದರೆ ಪ್ರಚಾರದ ವಿಚಾರದಲ್ಲಿ ಈ ಚಿತ್ರತಂಡ ಡಲ್​ ಹೊಡೆಯುತ್ತಿದೆ.

ಇದನ್ನೂ ಓದಿ: Prabhas: 1 ರೂಪಾಯಿ ಸಂಭಾವನೆ ಕೂಡ ಬೇಡ ಎಂಬ ನಿರ್ಧಾರಕ್ಕೆ ಬಂದ ಪ್ರಭಾಸ್​; ಏನಿದು ಹೊಸ ತಂತ್ರ?

ಇದನ್ನೂ ಓದಿ
Image
Adipurush: ಪ್ರಭಾಸ್​ ಫ್ಯಾನ್ಸ್​ ಮನ ಗೆದ್ದ ‘ಆದಿಪುರುಷ್​’ ಟೀಸರ್​; ಇಲ್ಲಿದೆ ರಾಮ-ರಾವಣರ ಮುಖಾಮುಖಿ
Image
Adipurush Teaser: ‘ಆದಿಪುರುಷ್​’ ಟೀಸರ್​ ಬಿಡುಗಡೆ; ಅಯೋಧ್ಯೆಯಲ್ಲಿ ರಾಮನಾಗಿ ದರ್ಶನ ನೀಡಿದ ಪ್ರಭಾಸ್​
Image
Prabhas: ದೊಡ್ಡಪ್ಪನ ನಿಧನದ ನೋವಿಟ್ಟುಕೊಂಡು ಕೆಲಸಕ್ಕೆ ಬಂದ ಪ್ರಭಾಸ್​; ‘ಸಲಾರ್​’ ಶೂಟಿಂಗ್​ ಮತ್ತೆ ಶುರು
Image
Prabhas: ದೊಡ್ಡಪ್ಪನ ಅಂತ್ಯ ಸಂಸ್ಕಾರಕ್ಕೆ ಬಂದ ಫ್ಯಾನ್ಸ್​ಗೆ ಊಟದ ವ್ಯವಸ್ಥೆ ಮಾಡಿಸಿ ಕಾಳಜಿ ತೋರಿದ ಪ್ರಭಾಸ್​

ರಾಮಾಯಣದ ಕಥೆ ಆಧರಿಸಿ ‘ಆದಿಪುರುಷ್​’ ಚಿತ್ರ ಮೂಡಿಬರುತ್ತಿದೆ. ನಿರ್ದೇಶಕ ಓಂ ರಾವತ್​ ಅವರು ಟ್ರೋಲ್​ ಆಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಸಿನಿಮಾದ ಟೀಸರ್​ ಬಿಡುಗಡೆ ಮಾಡಲಾಗಿತ್ತು. ಅದರಲ್ಲಿನ ಕಳಪೆ ಗ್ರಾಫಿಕ್ಸ್​ ನೋಡಿ ಸಿನಿಪ್ರಿಯರಿಗೆ ಬೇಸರವಾಗಿತ್ತು. ಅಲ್ಲದೇ, ವಾನರ ಸೇನೆಯಲ್ಲಿ ವಿಚಿತ್ರ ಪ್ರಾಣಿಗಳನ್ನು ನೋಡಿ ಎಲ್ಲರಿಗೂ ಅಚ್ಚರಿ ಆಯಿತು. ರಾವಣನ ವೇಷ ಕೂಡ ಖಿಲ್ಜಿ ರೂಪದಲ್ಲಿತ್ತು. ಈ ಎಲ್ಲ ಕಾರಣಗಳಿಂದಾಗಿ ಓಂ ರಾವತ್​ ಅವರನ್ನು ಟ್ರೋಲ್​ ಮಾಡಲಾಗಿತ್ತು.

ಇದನ್ನೂ ಓದಿ: Prabhas Engagement: ಪ್ರಭಾಸ್​ ಜತೆ ಕೃತಿ ಸನೋನ್​ ನಿಶ್ಚಿತಾರ್ಥ ಆಗಲಿದೆ ಅಂತ ಬ್ರೇಕಿಂಗ್ ನ್ಯೂಸ್​ ನೀಡಿದ ಉಮೈರ್​ ಸಂಧು

ಟೀಸರ್​ನಿಂದ ನೆಗೆಟಿವ್​ ಪ್ರತಿಕ್ರಿಯೆ ಪಡೆದುಕೊಂಡಿರುವ ‘ಆದಿಪುರುಷ್​’ ತಂಡವು ಸಾಕಷ್ಟು ದೃಶ್ಯಗಳನ್ನು ಬದಲಾಯಿಸಿಕೊಂಡಿದೆ ಎಂದು ಸುದ್ದಿ ಆಗಿದೆ. ಈಗ ಹೊಸ ಟೀಸರ್​, ಟ್ರೇಲರ್​, ಪೋಸ್ಟರ್​ಗಳ ಮೂಲಕ ಅಭಿಮಾನಿಗಳನ್ನು ಸೆಳೆಯುವ ಕೆಲಸ ಆಗಬೇಕಿದೆ. ಆದರೆ ನಿರ್ದೇಶಕ ಓಂ ರಾವತ್​ ಅವರು ಪ್ರಚಾರದ ಬಗ್ಗೆ ಕಿಂಚಿತ್ತೂ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ ಎಂದು ಸೋಶಿಯಲ್​ ಮೀಡಿಯಾದಲ್ಲಿ ಅವರನ್ನು ಟ್ರೋಲ್​ ಮಾಡಲಾಗುತ್ತಿದೆ. ಈ ಬಗ್ಗೆ ಪ್ರಭಾಸ್​ ಮೌನ ಮುರಿಯುವ ಸಾಧ್ಯತೆ ಇದೆ.

‘ಆದಿಪುರುಷ್​’ ಚಿತ್ರದಲ್ಲಿ ರಾಮನಾಗಿ ಪ್ರಭಾಸ್​ ನಟಿಸಿದ್ದರೆ, ಸೀತೆ ಪಾತ್ರಕ್ಕೆ ಕೃತಿ ಸನೋನ್​ ಬಣ್ಣ ಹಚ್ಚಿದ್ದಾರೆ. ರಾವಣನಾಗಿ ಸೈಫ್​ ಅಲಿ ಖಾನ್​ ಅಬ್ಬರಿಸಲಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:07 pm, Fri, 24 March 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ