‘ಕೆಜಿಎಫ್ 2’ ದಾಖಲೆ ಮುರಿಯಲಿದೆಯೇ ‘ಆದಿಪುರುಷ್’ ಸಿನಿಮಾ? ಸಾಧ್ಯವೇ ಇಲ್ಲ ಎನ್ನುತ್ತಿದೆ ಲೆಕ್ಕಾಚಾರ

ಯಶ್ ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ 2’ ಸಿನಿಮಾ ಹಿಂದಿಯಲ್ಲಿ ಮೊದಲ ದಿನ 53 ಕೋಟಿ ರೂಪಾಯಿ ಗಳಿಕೆ ಮಾಡಿತ್ತು.ಈ ದಾಖಲೆಯನ್ನು ‘ಆದಿಪುರುಷ್’ ಚಿತ್ರದ ಬಳಿ ಹಿಂದಿಕ್ಕಲು ಸಾಧ್ಯವಿಲ್ಲ ಎನ್ನಲಾಗುತ್ತಿದೆ.  

‘ಕೆಜಿಎಫ್ 2’ ದಾಖಲೆ ಮುರಿಯಲಿದೆಯೇ ‘ಆದಿಪುರುಷ್’ ಸಿನಿಮಾ? ಸಾಧ್ಯವೇ ಇಲ್ಲ ಎನ್ನುತ್ತಿದೆ ಲೆಕ್ಕಾಚಾರ
‘ಆದಿಪುರುಷ್​’ ಸಿನಿಮಾ ಪೋಸ್ಟರ್​
Follow us
ರಾಜೇಶ್ ದುಗ್ಗುಮನೆ
|

Updated on: Jun 15, 2023 | 11:13 AM

‘ಆದಿಪುರುಷ್’ ಸಿನಿಮಾ (Adipurush Movie) 2020ರಲ್ಲಿ ಘೋಷಣೆ ಆಯಿತು. ಈ ಸಿನಿಮಾ ಸುಮಾರು ಮೂರು ವರ್ಷಗಳ ಬಳಿಕ ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ‘ಆದಿಪುರುಷ್’ ಚಿತ್ರಕ್ಕೆ ಓಂ ರಾವತ್ (Om Raut) ಅವರು ನಿರ್ದೇಶನ ಮಾಡಿದ್ದಾರೆ. ರಾಮನಾಗಿ​ ಪ್ರಭಾಸ್ ಹಾಗೂ ​ಸೀತೆಯ ಪಾತ್ರದಲ್ಲಿ ಕೃತಿ ಸನೋನ್ ನಟಿಸಿದ್ದಾರೆ. ಈ ಚಿತ್ರ ಮೊದಲು ದಿನ ಎಷ್ಟು ಕಲೆಕ್ಷನ್ ಮಾಡಬಹುದು ಎನ್ನುವ ಬಗ್ಗೆ ಅನೇಕರಿಗೆ ಕುತೂಹಲ ಇದೆ. ‘ಕೆಜಿಎಫ್ 2’ ದಾಖಲೆಯನ್ನು ಈ ಸಿನಿಮಾ ಮುರಿಯಲಿದೆಯೇ ಎನ್ನುವ ಪ್ರಶ್ನೆ ಕೂಡ ಮೂಡಿದೆ.

ಯಶ್ ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ 2’ ಸಿನಿಮಾ ಹಿಂದಿಯಲ್ಲಿ ಮೊದಲ ದಿನ 53 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈ ಮೂಲಕ ಬಾಲಿವುಡ್​ನಲ್ಲಿ ಅತಿ ಹೆಚ್ಚು ಓಪನಿಂಗ್ ಕಂಡ ಎರಡನೇ ಸಿನಿಮಾ ಎನ್ನುವ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ. ಈ ದಾಖಲೆಯನ್ನು ‘ಆದಿಪುರುಷ್’ ಚಿತ್ರದ ಬಳಿ ಹಿಂದಿಕ್ಕಲು ಸಾಧ್ಯವಿಲ್ಲ ಎನ್ನಲಾಗುತ್ತಿದೆ.

ಪ್ರಭಾಸ್​ ಇರುವ ಕಾರಣದಿಂದ ತೆಲುಗು ಬೆಲ್ಟ್​ನಲ್ಲಿ ಚಿತ್ರಕ್ಕೆ ಬೇಡಿಕೆ ಸೃಷ್ಟಿ ಆಗಿದೆ. ಈ ಸಿನಿಮಾ ತೆಲುಗು ಭಾಷಿಕ ರಾಜ್ಯಗಳಲ್ಲಿ ದೊಡ್ಡ ಮಟ್ಟದ ಗಳಿಕೆ ಮಾಡುವ ಸಾಧ್ಯತೆ ಇದೆ. ಹಿಂದಿಯಲ್ಲೂ ಚಿತ್ರಕ್ಕೆ ಬೇಡಿಕೆ ಸೃಷ್ಟಿ ಆಗಿದೆಯಾದರೂ ಹಿಂದಿ ಅವತರಣಿಕೆ ಮೊದಲ ದಿನ 50 ಕೋಟಿ ರೂಪಾಯಿ ದಾಟೋದು ಅನುಮಾನ ಎನ್ನಲಾಗುತ್ತಿದೆ.

ಇದನ್ನೂ ಓದಿ: Adipurush: 2250 ರೂಪಾಯಿಗೆ ಏರಿತು ‘ಆದಿಪುರುಷ್​’ ಸಿನಿಮಾ ಟಿಕೆಟ್​ ಬೆಲೆ; ಮುಗಿಬಿದ್ದು ಖರೀದಿಸಿದ ಪ್ರೇಕ್ಷಕರು

‘ಆದಿಪುರುಷ್’ ಸಿನಿಮಾ ಮೊದಲ ದಿನದ ಒಟ್ಟಾರೆ ಕಲೆಕ್ಷನ್ 50 ಕೋಟಿ ರೂಪಾಯಿ ಆಗಲಿದೆ ಎಂಬುದು ಬಾಕ್ಸ್ ಆಫೀಸ್ ಪಂಡಿತರ ಊಹೆ. ಈ ಬಗ್ಗೆ ಪಕ್ಕಾ ಲೆಕ್ಕಾ ಸಿಗಬೇಕು ಎಂದರೆ ಜೂನ್ 17ರವರೆಗೆ ನಾವು ಕಾಯಲೇಬೇಕು. ಆ ಬಳಿಕ ಸ್ಪಷ್ಟ ಲೆಕ್ಕಾಚಾರ ಸಿಗಲಿದೆ.

ದೇಶಾದ್ಯಂತ ‘ಆದಿಪುರುಷ್​’ ಸಿನಿಮಾವನ್ನು ಸ್ವಾಗತಿಸಲು ಪ್ರೇಕ್ಷಕರು ಸಜ್ಜಾಗಿದ್ದಾರೆ. ಅದರಲ್ಲೂ ದೆಹಲಿಯಲ್ಲಿ ಈ ಸಿನಿಮಾದ ಕ್ರೇಜ್​ ಕೊಂಚ ಜಾಸ್ತಿಯೇ ಇದೆ. ರಾಷ್ಟ್ರ ರಾಜಧಾನಿಯಲ್ಲಿ ಈ ಸಿನಿಮಾದ ಟಿಕೆಟ್​ ಬೆಲೆ ಮುಗಿಲು ಮುಟ್ಟಿದೆ. 2250 ರೂಪಾಯಿ ಟಿಕೆಟ್​ ದರ ಇರುವ ಮಾಲ್​ಗಳಲ್ಲೂ ಬಹುತೇಕ ಟಿಕೆಟ್​ಗಳು ಸೋಲ್ಡ್​ ಔಟ್​ ಆಗಿವೆ. ಇದು ಚಿತ್ರತಂಡದ ಖುಷಿಗೆ ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ