‘ಆದಿಪುರುಷ್’ ಚಿತ್ರದ ಮತ್ತೊಂದು ಟ್ರೇಲರ್ ನೋಡಲು ರೆಡಿ ಆಗಿ; ಇದರಲ್ಲಿ ಇರಲಿದೆ ದೃಶ್ಯ ವೈಭವ

Adipurush Movie: ‘ಆದಿಪುರುಷ್’ ಚಿತ್ರಕ್ಕೆ ಅಬ್ಬರದ ಪ್ರಚಾರ ನೀಡಲಾಗುತ್ತಿದೆ. ಇದರ ಭಾಗವಾಗಿ ಮತ್ತೊಂದು ಟ್ರೇಲರ್ ತರಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ವರದಿ ಆಗಿದೆ.

‘ಆದಿಪುರುಷ್’ ಚಿತ್ರದ ಮತ್ತೊಂದು ಟ್ರೇಲರ್ ನೋಡಲು ರೆಡಿ ಆಗಿ; ಇದರಲ್ಲಿ ಇರಲಿದೆ ದೃಶ್ಯ ವೈಭವ
ಪ್ರಭಾಸ್
Follow us
ರಾಜೇಶ್ ದುಗ್ಗುಮನೆ
|

Updated on:Jun 01, 2023 | 8:05 AM

‘ಆದಿಪುರುಷ್’ ಸಿನಿಮಾ (Adipurush Movie) ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬರಲು ಸಿದ್ಧವಾಗಿದೆ. ರಾಮಾಯಣ ಆಧರಿಸಿ ಸಿದ್ಧಗೊಂಡ ಈ ಚಿತ್ರದಲ್ಲಿ ಪ್ರಭಾಸ್ ರಾಮನ ಪಾತ್ರ ಮಾಡಿದರೆ ಸೀತೆಯಾಗಿ ಕೃತಿ ಸನೋನ್ ಕಾಣಿಸಿಕೊಂಡಿದ್ದಾರೆ. ರಾವಣನಾಗಿ ಬಾಲಿವುಡ್ ಸ್ಟಾರ್ ನಟ ಸೈಫ್ ಅಲಿ ಖಾನ್ ಮತ್ತು ಲಕ್ಷ್ಮಣನಾಗಿ ಸನ್ನಿ ಸಿಂಗ್ ಬಣ್ಣ ಹಚ್ಚಿದ್ದಾರೆ. ಬಾಲಿವುಡ್ ನಿರ್ದೇಶಕ ಓಂ ರಾವತ್ (Om Raut) ಚಿತ್ರಕ್ಕೆ ಆ್ಯಕ್ಷನ್ ಕಟ್​ ಹೇಳಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಪೋಸ್ಟರ್, ಹಾಡುಗಳು ಹಾಗೂ ಟ್ರೇಲರ್​ ಸಿನಿಮಾ ಬಗ್ಗೆ ಇರುವ ನಿರೀಕ್ಷೆ ಹೆಚ್ಚಿಸಿದೆ. ಈಗ ‘ಆದಿಪುರುಷ್​’ ಚಿತ್ರದ ಮತ್ತೊಂದು ಟ್ರೇಲರ್ ರಿಲೀಸ್​ ಮಾಡಲು ಚಿತ್ರತಂಡ ಪ್ಲ್ಯಾನ್ ರೂಪಿಸಿದೆ.

‘ಆದಿಪುರುಷ್’ ಚಿತ್ರಕ್ಕೆ ಅಬ್ಬರದ ಪ್ರಚಾರ ನೀಡಲಾಗುತ್ತಿದೆ. ಇದರ ಭಾಗವಾಗಿ ಮತ್ತೊಂದು ಟ್ರೇಲರ್ ತರಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ವರದಿ ಆಗಿದೆ. ಸಿನಿಮಾ ಬಿಡುಗಡೆಗೆ ಕೆಲವು ದಿನಗಳ ಮೊದಲು ಈ ಟ್ರೇಲರ್ ಬಿಡುಗಡೆಯಾಗಲಿದೆ ಎಂಬ ಮಾತು ಕೇಳಿಬರುತ್ತಿದೆ. ಈ ಟ್ರೇಲರ್​ನಲ್ಲಿ ಹಿಂದೆಂದೂ ಕಾಣದ ದೃಶ್ಯ ವೈಭವ ಇರಲಿದೆ ಎಂಬುದು ಮೂಲಗಳ ಮಾಹಿತಿ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

‘ಆದಿಪುರುಷ್’ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮ ಅದ್ದೂರಿಯಾಗಿ ಆಯೋಜಿಸಲಾಗಿದೆ. ಜೂನ್ 6ರಂದು ತಿರುಪತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಸಿನಿಮಾ ಪ್ರಚಾರದಲ್ಲಿ ಪ್ರಭಾಸ್ ಅಭಿಮಾನಿಗಳು ಕೂಡ ಭಾಗಿ ಆಗುತ್ತಿದ್ದಾರೆ. ರಾಮನ ಹೆಸರಲ್ಲಿ ರ‍್ಯಾಲಿಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿ ಶನಿವಾರ ಮತ್ತು ಭಾನುವಾರದಂದು ಪ್ರಮುಖ ನಗರಗಳಲ್ಲಿ ಅಭಿಮಾನಿಗಳಿಂದ ಈ ರ‍್ಯಾಲಿ ನಡೆಯುತ್ತಿದೆ.

ಇದನ್ನೂ ಓದಿ: ಮೇ 29ರಂದು ರಿಲೀಸ್​ ಆಗಲಿದೆ ‘ಆದಿಪುರುಷ್’ ಚಿತ್ರದ 2ನೇ ಹಾಡು ‘ರಾಮ್​ ಸಿಯಾ ರಾಮ್​’

‘ಬಾಹುಬಲಿ 2’ ಸಿನಿಮಾ ತೆರೆಕಂಡ ಬಳಿಕ ಪ್ರಭಾಸ್​ಗೆ ನಿರೀಕ್ಷಿತ ಮಟ್ಟದ ಗೆಲುವು ಸಿಗಲೇ ಇಲ್ಲ. ಅವರ ನಟನೆಯ ‘ಸಾಹೋ’ ಹಾಗೂ ‘ರಾಧೆ ಶ್ಯಾಮ್​’ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಸೋತವು. ಹೀಗಾಗಿ ಅವರಿಗೆ ಒಂದು ತುರ್ತಾದ ಗೆಲುವಿನ ಅವಶ್ಯಕತೆ ಇದೆ. ‘ಆದಿಪುರುಷ್’ ಮೂಲಕ ಗೆಲ್ಲುವ ಭರವಸೆಯಲ್ಲಿ ಅವರಿದ್ದಾರೆ. ಆದರೆ, ಈ ಚಿತ್ರಕ್ಕೆ ಎದುರಾದ ಟ್ರೋಲ್​ಗಳು ಸಿನಿಮಾ ತಂಡವನ್ನು ಆತಂಕಕ್ಕೆ ಒಡ್ಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:58 am, Thu, 1 June 23

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು