Adipurush: 2250 ರೂಪಾಯಿಗೆ ಏರಿತು ‘ಆದಿಪುರುಷ್​’ ಸಿನಿಮಾ ಟಿಕೆಟ್​ ಬೆಲೆ; ಮುಗಿಬಿದ್ದು ಖರೀದಿಸಿದ ಪ್ರೇಕ್ಷಕರು

Adipurush Movie Ticket: ‘ಆದಿಪುರುಷ್​’ ಚಿತ್ರದ ಟಿಕೆಟ್​ ಬುಕಿಂಗ್​ಗೆ ಪ್ರೇಕ್ಷಕರು ತೋರಿಸುತ್ತಿರುವ ಆಸಕ್ತಿ ಗಮನಿಸಿದರೆ ಮೊದಲ ದಿನ ಭರ್ಜರಿ ಕಲೆಕ್ಷನ್​ ಆಗುವುದು ಖಚಿತ ಎನ್ನಲಾಗುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.

Adipurush: 2250 ರೂಪಾಯಿಗೆ ಏರಿತು ‘ಆದಿಪುರುಷ್​’ ಸಿನಿಮಾ ಟಿಕೆಟ್​ ಬೆಲೆ; ಮುಗಿಬಿದ್ದು ಖರೀದಿಸಿದ ಪ್ರೇಕ್ಷಕರು
ಪ್ರಭಾಸ್
Follow us
| Updated By: ಮದನ್​ ಕುಮಾರ್​

Updated on: Jun 14, 2023 | 9:35 PM

ಬಹುನಿರೀಕ್ಷಿತ ‘ಆದಿಪುರುಷ್​’ ಸಿನಿಮಾದ (Adipurush Movie) ಬಿಡುಗಡೆಗೆ ಇನ್ನೊಂದು ದಿನ ಮಾತ್ರ ಬಾಕಿ ಇದೆ. ಜೂನ್​ 16ರಂದು ಈ ಸಿನಿಮಾ ಅದ್ದೂರಿಯಾಗಿ ರಿಲೀಸ್​ ಆಗಲಿದೆ. ಕೆಲವು ಕಡೆಗಳಲ್ಲಿ ಜೂನ್​ 15ರ ರಾತ್ರಿಯೇ ಶೋ ಆರಂಭ ಆಗುವ ಸಾಧ್ಯತೆ ಇದೆ. ಪ್ರಭಾಸ್​ (Prabhas) ಅಭಿಮಾನಿಗಳು ಈ ಚಿತ್ರಕ್ಕಾಗಿ ತುದಿಗಾಲಿನಲ್ಲಿ ನಿಂತು ಕಾದಿದ್ದಾರೆ. ಈಗಾಗಲೇ ಈ ಸಿನಿಮಾದ ಟಿಕೆಟ್​ ಬುಕಿಂಗ್​ ಶುರುವಾಗಿದೆ. ದೇಶಾದ್ಯಂತ ‘ಆದಿಪುರುಷ್​’ ಸಿನಿಮಾವನ್ನು ಸ್ವಾಗತಿಸಲು ಪ್ರೇಕ್ಷಕರು ಸಜ್ಜಾಗಿದ್ದಾರೆ. ಅದರಲ್ಲೂ ದೆಹಲಿಯಲ್ಲಿ ಈ ಸಿನಿಮಾದ ಕ್ರೇಜ್​ ಕೊಂಚ ಜಾಸ್ತಿಯೇ ಇದೆ. ರಾಷ್ಟ್ರ ರಾಜಧಾನಿಯಲ್ಲಿ ಈ ಸಿನಿಮಾದ ಟಿಕೆಟ್​ ಬೆಲೆ (Adipurush Movie Ticket Price) ಮುಗಿಲು ಮುಟ್ಟಿದೆ. 2250 ರೂಪಾಯಿ ಟಿಕೆಟ್​ ದರ ಇರುವ ಮಾಲ್​ಗಳಲ್ಲೂ ಬಹುತೇಕ ಟಿಕೆಟ್​ಗಳು ಸೋಲ್ಡ್​ ಔಟ್​ ಆಗಿವೆ. ಇದು ಚಿತ್ರತಂಡದ ಖುಷಿಗೆ ಕಾರಣ ಆಗಿದೆ.

‘ಆದಿಪುರುಷ್​’ ಸಿನಿಮಾ ಮೊದಲ ದಿನ ಎಷ್ಟು ಕಲೆಕ್ಷನ್​ ಮಾಡಬಹುದು ಎಂಬ ಕೌತುಕ ಎಲ್ಲರಿಗೂ ಇದೆ. ಈಗ ಟಿಕೆಟ್​ ಬುಕಿಂಗ್​ಗೆ ಪ್ರೇಕ್ಷಕರು ತೋರಿಸುತ್ತಿರುವ ಆಸಕ್ತಿ ಗಮನಿಸಿದರೆ ಭರ್ಜರಿ ಕಲೆಕ್ಷನ್​ ಆಗುವುದು ಖಚಿತ ಎನ್ನಲಾಗುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ. ಹಿಂದಿ, ಕನ್ನಡ, ತೆಲುಗು, ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ‘ಆದಿಪುರುಷ್​’ ಪ್ರದರ್ಶನ ಆಗಲಿದೆ. ಇದು ರಾಮಾಯಣ ಆಧಾರಿತ ಸಿನಿಮಾ ಆದ್ದರಿಂದ ನಿರೀಕ್ಷೆ ಜೋರಾಗಿದೆ. ಇದರಲ್ಲಿ ಪ್ರಭಾಸ್​ ಅವರು ರಾಮನಾಗಿ ನಟಿಸಿದ್ದು, ಕೃತಿ ಸನೋನ್​ ಅವರು ಸೀತೆಯ ಪಾತ್ರ ಮಾಡಿದ್ದಾರೆ. ದೇವದತ್ತ ನಾಗೆ ಅವರು ಆಂಜನೇಯನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಸನ್ನಿ ಸಿಂಗ್​ ಅವರು ಲಕ್ಷ್ಮಣನಾಗಿ ಹಾಗೂ ಸೈಫ್​ ಅಲಿ ಖಾನ್​ ಅವರು ರಾವಣನ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Adipurush: ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗಾಗಿ ನಡೆಯಲಿದೆ ‘ಆದಿಪುರುಷ್​’ ಚಿತ್ರದ ಅದ್ದೂರಿ ಪ್ರೀಮಿಯರ್​ ಶೋ

ಕೆಲವು ಸೆಲೆಬ್ರಿಟಿಗಳು ಸಾವಿರಾರು ಟಿಕೆಟ್​ಗಳನ್ನು ಖರೀದಿಸಿ, ಅವುಗಳನ್ನು ಬಡಮಕ್ಕಳಿಗೆ ಉಚಿತವಾಗಿ ಹಂಚಲು ಮುಂದಾಗಿದ್ದಾರೆ. ನಟ ರಣಬೀರ್​ ಕಪೂರ್​ ಅವರು ಬರೋಬ್ಬರಿ 10 ಸಾವಿರ ಟಿಕೆಟ್​ಗಳನ್ನು ಉಚಿತವಾಗಿ ನೀಡಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರದ ನಿರ್ಮಾಪಕ ಅಭಿಷೇಕ್ ಅಗರ್​ವಾಲ್ ಅವರು ‘ಆದಿಪುರುಷ್​’ ಚಿತ್ರದ 10 ಸಾವಿರ ಟಿಕೆಟ್​ಗಳನ್ನು ಉಚಿತವಾಗಿ ಹಂಚಲು ಮುಂದಾಗಿದ್ದಾರೆ. ಇದಕ್ಕೆ ಕಾರಣವನ್ನೂ ಅವರು ನೀಡಿದ್ದಾರೆ. ‘ಆದಿಪುರುಷ್ ಜೀವಮಾನದಲ್ಲಿ ಒಮ್ಮೆ ನೋಡಲೇಬೇಕಾದ ಸಿನಿಮಾ. ಇದನ್ನು ಎಲ್ಲರೂ ಸಂಭ್ರಮಿಸಲೇಬೇಕು. ಭಗವಾನ್ ಶ್ರೀರಾಮನ ಮೇಲಿನ ಅಪಾರ ಭಕ್ತಿಯಿಂದ ತೆಲಂಗಾಣದಾದ್ಯಂತ ಇರುವ ಸರ್ಕಾರಿ ಶಾಲೆಗಳು ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳಿಗೆ 10,000+ ಟಿಕೆಟ್‌ಗಳನ್ನು ಉಚಿತವಾಗಿ ನೀಡಲು ನಿರ್ಧರಿಸಿದ್ದೇನೆ. ಟಿಕೆಟ್‌ಗಳನ್ನು ಪಡೆಯಲು ನಿಮ್ಮ ವಿವರಗಳೊಂದಿಗೆ ಗೂಗಲ್ ಫಾರ್ಮ್ ಅನ್ನು ಭರ್ತಿ ಮಾಡಿ. ಜೈ ಶ್ರೀರಾಮ್ ಘೋಷಣೆಗಳು ಎಲ್ಲಾ ದಿಕ್ಕುಗಳಲ್ಲಿಯೂ ಪ್ರತಿಧ್ವನಿಸಲಿ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Kriti Sanon: ನಿರ್ಮಾಪಕಿ ಆಗ್ತಾರೆ ಕೃತಿ ಸನೋನ್​; ‘ಆದಿಪುರುಷ್​’ ಸುಂದರಿ ಬಗ್ಗೆ ಹೊಸ ಸುದ್ದಿ

‘ಆದಿಪುರುಷ್​’ ಸಿನಿಮಾದ ಅವಧಿ ಬರೋಬ್ಬರು 2 ಗಂಟೆ 59 ನಿಮಿಷಗಳು. ಅಂದರೆ, 3 ಗಂಟೆಗೆ ಒಂದು ನಿಮಿಷ ಮಾತ್ರ ಬಾಕಿ. ಮಧ್ಯಂತರದ ಸಮಯವನ್ನೂ ಸೇರಿಸಿದರೆ ಈ ಸಿನಿಮಾದ ಪ್ರದರ್ಶನಕ್ಕೆ 3 ಗಂಟೆ 15 ನಿಮಿಷ ಬೇಕು. ಇದು ಪ್ರೇಕ್ಷಕರ ತಾಳ್ಮೆ ಪರೀಕ್ಷಿಸಬಹುದು. ಕೆಲವೊಮ್ಮೆ ಇದರಿಂದ ಸಿನಿಮಾಗೆ ಹಿನ್ನಡೆ ಆಗಲೂಬಹುದು. ಹಾಗಂತ ಯಾವುದನ್ನೂ ನಿಖರವಾಗಿ ಹೇಳಲು ಸಾಧ್ಯವಿಲ್ಲ. 3 ಗಂಟೆ ಅವಧಿ ಇರುವ ಸಿನಿಮಾಗಳು ಸೂಪರ್​ ಹಿಟ್​ ಉದಾಹರಣೆ ಕೂಡ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!